ಭದ್ರಾವತಿ, ಆ. ೩: ತಾಲೂಕಿನಲ್ಲಿ ಕೊರೋನಾ ಸೋಂಕು ಪುನಃ ಹೆಚ್ಚಳವಾಗಿದ್ದು, ಸೋಮವಾರ ೨೯ ಪ್ರಕರಣಗಳು ಪತ್ತೆಯಾಗಿವೆ.
ಭಾನುವಾರ ಒಂದೇ ಒಂದು ಪ್ರಕರಣ ಪತ್ತೆಯಾಗಿತ್ತು. ಇದೀಗ ನಗರಸಭೆ ವ್ಯಾಪ್ತಿಯಲ್ಲಿ ೧೯ ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿ ೧೦ ಪ್ರಕರಣಗಳು ಪತ್ತೆಯಾಗಿವೆ.
ನಗರಸಭೆ ವ್ಯಾಪ್ತಿಯ ಗಣೇಶ್ ಕಾಲೋನಿಯ ಒಂದೇ ಕುಟುಂಬದ ೪೦ ಹಾಗೂ ೬೬ ವರ್ಷದ ಇಬ್ಬರು ಪುರುಷರು ಮತ್ತು ೬೦ ವರ್ಷದ ಮಹಿಳೆ ಸೇರಿ ೩ ಮಂದಿಗೆ, ಗಾಂಧಿನಗರದಲ್ಲಿ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿಯೊಬ್ಬರಿಗೆ, ಮಿಲ್ಟ್ರಿಕ್ಯಾಂಪ್ ಸಶಸ್ತ್ರ ಮೀಸಲು ಪೊಲೀಸ್ ಪಡೆ ಸಿಬ್ಬಂದಿಯೊಬ್ಬರಿಗೆ ಹಾಗೂ ಹೊಸಮನೆ ಶಿವಾಜಿ ಸರ್ಕಲ್ ಬಳಿ ಪೊಲೀಸ್ ಸಿಬ್ಬಂದಿಯೊಬ್ಬರಿಗೆ, ಸಿದ್ಧರೂಢ ನಗರದಲ್ಲಿ ಒಬ್ಬ ವ್ಯಕ್ತಿಗೆ, ಶಂಕರ ಮಠ ಬಳಿ ವ್ಯಕ್ತಿಯೊಬ್ಬರಿಗೆ, ಬಿ.ಎಚ್ ರಸ್ತೆ ೭ನೇ ಕ್ರಾಸ್‌ನಲ್ಲಿ ವ್ಯಕ್ತಿಯೊಬ್ಬರಿಗೆ, ಹೊಸಮನೆ ಭಾಗದಲ್ಲಿ ಸೇಂಟ್ ಮೇರಿಸ್ ಶಾಲೆ ಬಳಿ ೭೪ ವರ್ಷದ ವೃದ್ಧನಿಗೆ, ಹೊಸಮನೆ ಚಾನಲ್ ಬಳಿ ಯುವಕನೊಬ್ಬನಿಗೆ ಹಾಗೂ ವಿಜಯನಗರದಲ್ಲಿ ೨೬ ವರ್ಷದ ಯುವಕನಿಗೆ, ಹುತ್ತಾಕಾಲೋನಿ ಒಕ್ಕಲಿಗರ ಸಮುದಾಯ ಭವನದ ಬಳಿ ೩೩ ವರ್ಷದ ವ್ಯಕ್ತಿಗೆ, ವೇಲೂರು ಶೆಡ್‌ನಲ್ಲಿ ೫೫ ವರ್ಷದ ಮಹಿಳೆ ಹಾಗೂ ೨೩ ವರ್ಷದ ಯುವತಿಗೆ, ವಿಶ್ವೇಶ್ವರಾಯ ನಗರದಲ್ಲಿ ೨೯ ವರ್ಷದ ಪುರುಷನಿಗೆ, ಎಂಎಂ ಕಾಂಪೌಂಡ್‌ನಲ್ಲಿ ೪೨ ವರ್ಷದ ವ್ಯಕ್ತಿಗೆ ಹಾಗೂ ಕಬಳಿಕಟ್ಟೆ ಗ್ರಾಮದಲ್ಲಿ ವ್ಯಕ್ತಿಯೊಬ್ಬರಿಗೆ ಹಾಗೂ ಹಳೇನಗರದ ಬ್ರಾಹ್ಮಣರ ಬೀದಿಯಲ್ಲಿ ವ್ಯಕ್ತಿಯೊಬ್ಬರಿಗೆ ಸೋಂಕು ತಗುಲಿದೆ.
ಉಳಿದಂತೆ ಗ್ರಾಮಾಂತರ ವ್ಯಾಪ್ತಿಯಲ್ಲಿ ಅರಳಿಹಳ್ಳಿ ಗ್ರಾಮದಲ್ಲಿ ೬೬ ವರ್ಷದ ವ್ಯಕ್ತಿಗೆ, ಆನವೇರಿ ಶ್ರೀನಿವಾಸಪುರದಲ್ಲಿ ೩೦ ವರ್ಷದ ಪುರುಷನಿಗೆ, ಆಗರದಹಳ್ಳಿಯಲ್ಲಿ ೨೩, ೨೪ ಮತ್ತು ೪೭ ವರ್ಷದ ೩ ಮಂದಿ ಪುರುಷರಿಗೆ, ಬಂಡಿಗುಡ್ಡ ಗ್ರಾಮದಲ್ಲಿ ವ್ಯಕ್ತಿಯೊಬ್ಬರಿಗೆ ಮತ್ತು ದೇವರನರಸೀಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬರಿಗೆ ಸೋಂಕು ತಗುಲಿದೆ.
ಬ್ಯಾಂಕ್ ಸಿಬ್ಬಂದಿಗೆ ಸೋಂಕು : ೨ ದಿನ ಬಂದ್
ನಗರದ ಬಿ.ಎಚ್ ರಸ್ತೆ ಸೌತ್ ಇಂಡಿಯನ್ ಬ್ಯಾಂಕ್ ಸಿಬ್ಬಂದಿಯೊಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಈ ಹಿನ್ನಲೆಯಲ್ಲಿ ೨ ದಿನ ಮಂಗಳವಾರ ಮತ್ತು ಬುಧವಾರ ಬ್ಯಾಂಕ್ ಸಂಪೂರ್ಣವಾಗಿ ಮುಚ್ಚಲ್ಪಟ್ಟಿದೆ. ಮುನ್ನಚ್ಚರಿಕೆ ಕ್ರಮವಾಗಿ ಬ್ಯಾಂಕ್‌ನಲ್ಲಿ ಸ್ಯಾನಿಟೈಜರ್ ಕೈಗೊಳ್ಳಲಾಗಿದೆ.
ಸೋಂಕಿತ ತಿರುಗಾಟ : ಸ್ಥಳೀಯರಲ್ಲಿ ಆತಂಕ
ಹೊಸಮನೆ ವ್ಯಾಪ್ತಿಯ ೪ನೇ ಕ್ರಾಸ್‌ನಲ್ಲಿ ಕೊರೋನಾ ಸೋಂಕಿಗೆ ಒಳಗಾಗಿರುವ ವ್ಯಕ್ತಿಯೊಬ್ಬ ರಸ್ತೆಯಲ್ಲಿ ಎಲ್ಲಿಬೇಕೆಂದರಲ್ಲಿ ತಿರುಗಾಡುತ್ತಿದ್ದಾನೆಂದು ಸ್ಥಳೀಯ ನಿವಾಸಿಗಳು ದೂರಿದ್ದಾರೆ. ಅಲ್ಲದೆ ಸೋಂಕಿತ ವ್ಯಕ್ತಿಯಿಂದ ಸಮುದಾಯಕ್ಕೆ ಸೋಂಕು ಹರಡುವ ಭೀತಿ ಎದುರಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ನಗರಸಭೆ ಪೌರಾಯುಕ್ತ ಮನೋಹರ್, ಪರಿಸರ ಅಭಿಯಂತರ ರುದ್ರೇಗೌಡ, ಹಿರಿಯ ಆರೋಗ್ಯ ನಿರೀಕ್ಷಕ ಆರ್.ಬಿ ಸತೀಶ್, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ, ಹಿರಿಯ ಆರೋಗ್ಯ ಸಹಾಯಕ ನೀಲೇಶ್‌ರಾಜ್ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳನ್ನೊಳಗೊಂಡ ತಂಡ ನಗರಸಭೆ ವ್ಯಾಪ್ತಿಯಲ್ಲಿ ಸೋಂಕು ಪತ್ತೆಯಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಯಾನಿಟೈಜರ್ ಕೈಗೊಂಡು ೧೦೦ ಹಾಗೂ ೨೦೦ ಮೀಟರ್ ವ್ಯಾಪ್ತಿಯಲ್ಲಿ ಕಂಟೈನ್ಮೆಂಟ್ ವಲಯವನ್ನಾಗಿಸಿದೆ.