ದೆಹಲಿ ರೈತರ ಹೋರಾಟ ಬೆಂಬಲಿಸಿ ರಂಗಪ್ಪ ವೃತ್ತದಲ್ಲಿ ಪ್ರತಿಭಟನೆ
![](https://blogger.googleusercontent.com/img/b/R29vZ2xl/AVvXsEgDAi-bnavOG34pN9wA9zDUpwTc_J76DNBwyicOOZyVfyTt9vIdy6XIdtTqnA1zoWSA1yDZHHbnAHlqsZFgmN_mYxlRcgodF4Bj-twH1Gj9yCP7Nyh1xsOpsbcDgaMnzqK35akLSW0NZxMo/s320-rw/D3-BDVT2-719043.jpg)
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಮಸೂದೆ ಹಿಂಪಡೆಯಲು ಆಗ್ರಹಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ವತಿಯಿಂದ ಗುರುವಾರ ನಗರದ ರಂಗಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಭದ್ರಾವತಿ, ಡಿ. ೩: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಮಸೂದೆ ಹಿಂಪಡೆಯಲು ಆಗ್ರಹಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ವತಿಯಿಂದ ಗುರುವಾರ ನಗರದ ರಂಗಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರೈತ ಮುಖಂಡರು ಹಾಗೂ ವಿವಿಧ ಸಂಘಟನೆಗಳ ಪ್ರಮುಖರು ಮಾತನಾಡಿ, ಪ್ರಸ್ತುತ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಮಸೂದೆಗಳು ದೇಶದಲ್ಲಿ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳಲಿವೆ. ಕೃಷಿಯನ್ನು ನಂಬಿ ಬದುಕುತ್ತಿರುವ ರೈತರು ಭೂಮಿ ಕಳೆದುಕೊಳ್ಳುವ ಆತಂಕ ಎದುರಾಗಿದೆ. ಈ ಮಸೂದೆಗಳು ಬಂಡವಾಳ ಶಾಹಿಗಳಿಗೆ ನೆರವಾಗಲಿವೆ ಎಂದು ಆರೋಪಿಸಿದರು.
ತಕ್ಷಣ ಕೇಂದ್ರ ಸರ್ಕಾರ ರೈತ ವಿರೋಧಿ ಕೃಷಿ ಮಸೂದೆಗಳನ್ನು ಹಿಂಪಡೆಯಬೇಕು. ರೈತರಿಗೆ ಅಗತ್ಯವಿರುವ ನೆರವು ಕಲ್ಪಿಸಿ ಹಿತ ಕಾಪಾಡಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಯಶವಂತರಾವ್ ಘೋರ್ಪಡೆ, ಹಿರಿಯಣ್ಣಯ್ಯ, ಡಿ.ವಿ ವೀರೇಶ್, ರಾಮಚಂದ್ರರಾವ್, ಮೋಹನ್, ಬಸವರಾಜ, ತಿಮ್ಮಣ್ಣ, ರುದ್ರೇಶ್, ವಸಂತ, ವೀರೇಶ್, ಆಮ್ ಆದ್ಮಿ ಪಕ್ಷದ ಎಚ್. ರವಿಕುಮಾರ್, ಜೋಸೆಫ್, ಪರಮೇಶ್ವರಚಾರ್, ಇಬ್ರಾಹಿಂ ಖಾನ್, ಜನಶಕ್ತಿ ಜಿ. ರಾಜು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.