ಭದ್ರಾವತಿ, ಮಾ. ೨೭: ಶ್ರೀ ಕೈವಾರ ಸದ್ಗುರು ಯೋಗಿನಾರೇಯಣ ತಾತಯ್ಯನವರ ೧೮೬ನೇ ಆರಾಧನಾ ಮಹೋತ್ಸವ ಮಾ.೨೮ರಂದು ಬೆಳಿಗ್ಗೆ ೧೦.೩೦ಕಕ್ಕೆ ಹಳೇನಗರದ ಬಲಿಜ ಸಮುದಾಯ ಭವನದಲ್ಲಿ ನಡೆಯಲಿದೆ.
ಕುಳ್ಳೂರು ಸುಕ್ಷೇತ್ರ ಶ್ರಿ ಶಿವಯೋಗಿಶ್ವರ ಸಂಸ್ಥಾನ ಮಠದ ಶ್ರೀ ಬಸವಾನಂದ ಭಾರತಿ ಮಹಾಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಲಿದ್ದು, ಹಿರಿಯೂರು ಅಚಲ ಸದ್ಗುರು ಆಶ್ರಮದ ಶ್ರೀ ಲಕ್ಷ್ಮಣಾರ್ಯ ಸ್ವಾಮೀಜಿ ಉಪಸ್ಥಿತರಿರುವರು.
ಎಂ.ಎಸ್ ರಾಮಯ್ಯ ಶಿಕ್ಷಣ ಸಂಸ್ಥೆ ವೈಸ್ ಛೇರ್‌ಮನ್ ಎಂ.ಎಸ್ ಸೀತರಾಮ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್, ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್, ನಗರಸಭೆ ಪೌರಾಯುಕ್ತ ಮನೋಹರ್, ಮಹಿಳಾ ಬಲಿಜ ಸಮಾಜದ ಅಧ್ಯಕ್ಷೆ ಶಾಂತಮ್ಮ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಬಲಿಜ ಸಂಘದ ಅಧ್ಯಕ್ಷ ಎಸ್.ಎನ್ ಸುಬ್ರಮಣ್ಯ ಅಧ್ಯಕ್ಷತೆ ವಹಿಸಲಿದ್ದಾರೆ.