ಯುವ ಕಾಂಗ್ರೆಸ್ ವತಿಯಿಂದ ಭದ್ರಾವತಿಯಲ್ಲಿ ಕಳೆದ ೩ ದಿನಗಳಿಂದ 'ಹಸಿದವರಿಗೆ ಅನ್ನ' ಎಂಬ ಕಾರ್ಯಕ್ರಮದಡಿ ದೀನದಲಿತರು, ನಿಗರ್ತಿಕರು, ಅಸಹಾಯಕರ ಹಸಿವು ನೀಗಿಸುವ ಕಾರ್ಯ ಕೈಗೊಳ್ಳಲಾಗುತ್ತಿದೆ.
ಭದ್ರಾವತಿ, ಮೇ. ೧೦: ಕೊರೋನಾ ಸೋಂಕು ೨ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ನಡುವೆಯೂ ಯುವ ಕಾಂಗ್ರೆಸ್ ವತಿಯಿಂದ ಕಳೆದ ೩ ದಿನಗಳಿಂದ 'ಹಸಿದವರಿಗೆ ಅನ್ನ' ಎಂಬ ಕಾರ್ಯಕ್ರಮದಡಿ ದೀನದಲಿತರು, ನಿಗರ್ತಿಕರು, ಅಸಹಾಯಕರ ಹಸಿವು ನೀಗಿಸುವ ಕಾರ್ಯ ಕೈಗೊಳ್ಳಲಾಗುತ್ತಿದೆ.
ಯುವ ಕಾಂಗ್ರೆಸ್ ನಗರ ಅಧ್ಯಕ್ಷ ಜಿ.ವಿನೋದ್‌ಕುಮಾರ್ ನೇತೃತ್ವದಲ್ಲಿ ಜನ್ನಾಪುರ ನಿರಾಶ್ರಿತರ ಕೇಂದ್ರ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಹಾಗು ಪ್ರಮುಖ ರಸ್ತೆಗಳಲ್ಲಿ ದೀನದಲಿತರು, ನಿಗರ್ತಿಕರು, ಅಸಹಾಯಕರಿಗೆ ಸಿದ್ದಪಡಿಸಿದ ಆಹಾರದ ಜೊತೆಗೆ ನೀರಿನ ಬಾಟಲ್ ಸಹ ವಿತರಿಸಲಾಯಿತು. ಜೊತೆಗೆ ಮಹಾಮಾರಿ ಕೊರೋನಾ ನಿಯಂತ್ರಣಕ್ಕೆ ಎಚ್ಚರ ವಹಿಸುವ ಜೊತೆಗೆ ಕಡ್ಡಾಯ ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಲಾಯಿತು.
ನಗರ ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಎ.ಪಿ ಗಣೇಶ್, ಭರತ್, ಸಂತೋಷ್, ಯೋಗೇಶ್, ತೇಜಸ್, ವಿನ್‌ಸ್ಟನ್ ಮತ್ತು ಆದರ್ಶ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಟಿ.ಎಂ.ಎ.ಇ.ಎಸ್ ವತಿಯಿಂದ ಆಹಾರ ಪದಾರ್ಥ ವಿತರಣೆ:
ಟಿ.ಎಂ.ಎ.ಇ.ಎಸ್ ಆಯುರ್ವೇದ ಮಹಾವಿದ್ಯಾಲಯ ವತಿಯಿಂದ ಜನ್ನಾಪುರ ಎನ್‌ಟಿಬಿ ಕಛೇರಿ ಆವರಣದಲ್ಲಿರುವ ನಿರಾಶ್ರಿತರ ಕೇಂದ್ರದಲ್ಲಿರುವ ನಿರ್ಗತಿಕರಿಗೆ ಆಹಾರ ಪದಾರ್ಥಗಳನ್ನು ವಿತರಿಸಲಾಯಿತು.
ಮಹಾವಿದ್ಯಾಲಯದ ಆಡಳಿತಾಧಿಕಾರಿ ಹಿರೇಮಠ್, ಪೌರಾಯುಕ್ತ ಮನೋಹರ್, ಸಮುದಾಯ ಸಂಘಟನಾ ಅಧಿಕಾರಿಗಳಾದ ಸುಹಾಸಿನಿ, ಈಶ್ವರಪ್ಪ, ಡಿಎಸ್‌ಎಸ್ ಅಂಗವಿಕಲರ ವಿಭಾಗದ ಜಿಲ್ಲಾಧ್ಯಕ್ಷ ಕಾಣಿಕ್‌ರಾಜ್, ಜೀವ ಸಂಸ್ಥೆಯ ಅರಿಲಾ ಆನ್ಸ್, ಲಕ್ಷ್ಮಮ್ಮ, ಜಿಂಕ್‌ಲೈನ್ ಮಣಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಟಿ.ಎಂ.ಎ.ಇ.ಎಸ್ ಆಯುರ್ವೇದ ಮಹಾವಿದ್ಯಾಲಯ ವತಿಯಿಂದ ಭದ್ರಾವತಿ ಜನ್ನಾಪುರ ಎನ್‌ಟಿಬಿ ಕಛೇರಿ ಆವರಣದಲ್ಲಿರುವ ನಿರಾಶ್ರಿತರ ಕೇಂದ್ರದಲ್ಲಿರುವ ನಿರ್ಗತಿಕರಿಗೆ ಆಹಾರ ಪದಾರ್ಥಗಳನ್ನು ವಿತರಿಸಲಾಯಿತು.