ಭದ್ರಾವತಿ ಕಾಗದನಗರದ ನಗರಸಭೆ ವಾರ್ಡ್ ನಂ.೨೧ ಮತ್ತು ೨೨ರ ವ್ಯಾಪ್ತಿಯಲ್ಲಿ ಕೊರೋನಾ ಸೋಂಕಿಗೆ ಒಳಗಾಗಿ ಮನೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ನಗರಸಭಾ ಸದಸ್ಯ ಬಿ.ಕೆ ಮೋಹನ್ ನೇತೃತ್ವದಲ್ಲಿ ಶನಿವಾರ ಉಚಿತ ಔಷಧ ಸಾಮಗ್ರಿಗಳನ್ನು ವಿತರಿಸಲಾಯಿತು.
ಭದ್ರಾವತಿ, ಮೇ. ೨೨: ಒಂದೆಡೆ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಮತ್ತೊಂದೆಡೆ ಲಾಕ್‌ಡೌನ್ ವಿಸ್ತರಣೆಯಾಗಿದೆ. ಈ ನಡುವೆ ಸಾಕಷ್ಟು ಜನರು ತೀರ ಸಂಕಷ್ಟಕ್ಕೆ ಒಳಗಾಗಿದ್ದು, ದಿನದ ಊಟಕ್ಕೂ ಎದುರು ನೋಡುವಂತಾಗಿದೆ. ಇಂತಹ ಪರಿಸ್ಥಿತಿಯಲ್ಲಿ ವಿವಿಧ ರಾಜಕೀಯ ಪಕ್ಷಗಳು, ಸಂಘ-ಸಂಸ್ಥೆಗಳು, ಸ್ವಯಂ ಸೇವಾ ಸಂಸ್ಥೆಗಳು ವಿವಿಧ ರೀತಿಯಲ್ಲಿ ನೆರವಿಗೆ ಮುಂದಾಗಿವೆ.
ಉಚಿತ ಕೊರೋನಾ ಔಷಧ ಸಾಮಗ್ರಿ ವಿತರಣೆ:
ಕಾಗದನಗರದ ನಗರಸಭೆ ವಾರ್ಡ್ ನಂ.೨೧ ಮತ್ತು ೨೨ರ ವ್ಯಾಪ್ತಿಯಲ್ಲಿ ಕೊರೋನಾ ಸೋಂಕಿಗೆ ಒಳಗಾಗಿ ಮನೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ನಗರಸಭಾ ಸದಸ್ಯ ಬಿ.ಕೆ ಮೋಹನ್ ನೇತೃತ್ವದಲ್ಲಿ ಶನಿವಾರ ಉಚಿತ ಔಷಧ ಸಾಮಗ್ರಿಗಳನ್ನು ವಿತರಿಸಲಾಯಿತು.
ಒಟ್ಟು ಸುಮಾರು ೧ ಲಕ್ಷ ರು. ಮೌಲ್ಯದ ಔಷಧ ಸಾಮಗ್ರಿಗಳನ್ನು ವಿತರಿಸುವ ಮೂಲಕ ಸೋಂಕಿತರ ಸಂಕಷ್ಟಕ್ಕೆ ಸ್ಪಂದಿಸಲಾಯಿತು. ಮಾಜಿ ನಗರಸಭಾ ಸದಸ್ಯ ವೆಂಕಟಯ್ಯ, ಆಶಾ ಕಾರ್ಯಕತೆಯರು ಹಾಗು ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಸೇವಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
ಬಂಜಾರ ಸಮುದಾಯದಿಂದ ಉಚಿತ ಔಷಧ ಸಾಮಗ್ರಿ ವಿತರಣೆ:
ಬಂಜಾರ ಸಮುದಾಯದ ಬಹುತೇಕ ತಾಂಡಗಳು ನಗರ ಪ್ರದೇಶಗಳಿಂದ ಹೊರಭಾಗದಲ್ಲಿದ್ದು, ತಾಂಡಗಳಲ್ಲಿ ಕೊರೋನಾ ಸೋಂಕಿಗೆ ಒಳಗಾಗಿ ಮನೆಗಳಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವವರಿಗೆ ಅಗತ್ಯವಿರುವ ಔಷಧ ಸಾಮಾಗ್ರಿಗಳನ್ನು ವಿತರಿಸುವ ಮೂಲಕ ಸೋಂಕಿನ ಕುರಿತು ಜಾಗೃತಿ ಮೂಡಿಸಲಾಯಿತು.
ತಾಲೂಕು ಬಂಜಾರ ಯುವಕರ ಸಂಘದ ಅಧ್ಯಕ್ಷ ಕೃಷ್ಣನಾಯ್ಕ್, ರಾಜ್ಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಿರೀಶ್ ನಾಯ್ಕ್, ಪ್ರಮುಖರಾದ ಪ್ರವೀಣ್‌ಕುಮಾರ್, ನಾಗರಾಜನಾಯ್ಕ್, ಉಮಾಮಹೇಶ್ವರ, ಚಂದ್ರನಾಯ್ಕ್ ಸೇರಿದಂತೆ ಇನ್ನಿತರರು ಸೇವಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
ಬೆಂಗಳೂರಿನಲ್ಲಿ ಐಎಎಸ್ ಪರೀಕ್ಷೆ ತರಬೇತಿ ಪಡೆಯುತ್ತಿರುವ ತುಳಸಿ ಎಂಬುವರು ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಹಸಿದವರಿಗೆ ಅನ್ನಸೇವೆ ಕೈಗೊಳ್ಳಬೇಕೆಂಬ ಹಂಬಲದೊಂದಿಗೆ ಭದ್ರಾವತಿಯಲ್ಲಿ ಕರ್ನಾಟಕ ರಾಜ್ಯ ಕ್ರೈಸ್ತ ಸಂಘ ಸಂಸ್ಥೆಗಳ ಒಕ್ಕೂಟದ ನೆರವಿನೊಂದಿಗೆ ಒಂದು ದಿನದ ಸೇವಾ ಕಾರ್ಯ ನೆರವೇರಿಸುವ ಮೂಲಕ ಗಮನ ಸೆಳೆದರು.
ಹುಟ್ಟುಹಬ್ಬದ ಪ್ರಯುಕ್ತ ಅನ್ನಸೇವೆ :
ಬೆಂಗಳೂರಿನಲ್ಲಿ ಐಎಎಸ್ ಪರೀಕ್ಷೆ ತರಬೇತಿ ಪಡೆಯುತ್ತಿರುವ ತುಳಸಿ ಎಂಬುವರು ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಹಸಿದವರಿಗೆ ಅನ್ನಸೇವೆ ಕೈಗೊಳ್ಳಬೇಕೆಂಬ ಹಂಬಲದೊಂದಿಗೆ ಕರ್ನಾಟಕ ರಾಜ್ಯ ಕ್ರೈಸ್ತ ಸಂಘ ಸಂಸ್ಥೆಗಳ ಒಕ್ಕೂಟದ ನೆರವಿನೊಂದಿಗೆ ಒಂದು ದಿನದ ಸೇವಾ ಕಾರ್ಯ ನೆರವೇರಿಸುವ ಮೂಲಕ ಗಮನ ಸೆಳೆದರು.
ಒಕ್ಕೂಟದ ವತಿಯಿಂದ ೧೧ ದಿನಗಳಿಂದ ಹಸಿದವರಿಗೆ ಅನ್ನ ನೀಡುವ ಸೇವೆ ಕೈಗೊಳ್ಳಲಾಗುತ್ತಿದೆ. ಆರಂಭದಲ್ಲಿ ೧೦೦ ಜನರಿಗೆ ಅನ್ನ ಸೇವೆ ನೀಡಲಾಗುತ್ತಿತ್ತು. ನಂತರ ದಿನದಿಂದ ದಿನಕ್ಕೆ ಹೆಚ್ಚಳವಾಗಿದ್ದು, ಇದೀಗ ೧೮೦ ಮಂದಿಗೆ ಸೇವೆ ಒದಗಿಸಲಾಗುತ್ತಿದೆ.
ನಗರಸಭಾ ಸದಸ್ಯರಾದ ಕಾಂತರಾಜ್, ಮಾಜಿ ಸದಸ್ಯರಾದ ಆರ್. ವೇಣುಗೋಪಾಲ್, ಪ್ರಾನ್ಸಿಸ್, ಮುಖಂಡರಾದ ಬ್ರದರ್, ಪ್ರೇಮ್, ಸೆಲ್ವರಾಜ್, ಎಂ.ಜಿ ರಾಮಚಂದ್ರನ್, ವಿಲ್ಸನ್‌ಬಾಬು, ದಾಸ್, ಎಸ್. ಪ್ರಸನ್ನಕುಮಾರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಹಸಿದವರ ಸಂಕಷ್ಟಕ್ಕೆ ಸ್ಪಂದಿಸುತ್ತಿರುವ ಜಯಕರ್ನಾಟಕ ಸಂಘಟನೆ ಸೇವಾ ಕಾರ್ಯಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಬೆಂಬಲ ವ್ಯಕ್ತಪಡಿಸಿ ಒಂದು ದಿನದ ಸೇವೆಯಲ್ಲಿ ಪಾಲ್ಗೊಂಡಿದ್ದರು.
ಜಯಕರ್ನಾಟಕ ಸಂಘಟನೆಯಿಂದ ಹಸಿದವರಿಗೆ ಅನ್ನ:
ಕೊರೋನಾ ಸಂಕಷ್ಟದ ಸಮಯದಲ್ಲಿ ಹಸಿವಿನಿಂದ ಬಳಲುತ್ತಿರುವವರ ನೆರವಿಗೆ ಜಯಕರ್ನಾಟಕ ಸಂಘಟನೆ ಮುಂದಾಗಿದ್ದು, ಸಂಘಟನೆ ತಾಲೂಕು ಅಧ್ಯಕ್ಷ ಅರುಣ್ ನೇತೃತ್ವದಲ್ಲಿ ಕಳೆದ ೭ ದಿನಗಳಿಂದ ನಗರದ ವಿವಿದೆಡೆ ಸೇವಾ ಕಾರ್ಯವನ್ನು ನೆರವೇರಿಸಿಕೊಂಡು ಬರಲಾಗುತ್ತಿದೆ.
ಸಂಘಟನೆ ಸೇವಾ ಕಾರ್ಯಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಬೆಂಬಲ ವ್ಯಕ್ತಪಡಿಸಿ ಒಂದು ದಿನದ ಸೇವೆಯಲ್ಲಿ ಪಾಲ್ಗೊಂಡಿದ್ದರು. ನಗರಸಭಾ ಸದಸ್ಯರಾದ ಮಣಿ ಎಎನ್‌ಎಸ್, ಕೆ. ಸುದೀಪ್‌ಕುಮಾರ್, ಸಂಘಟನೆ ಪ್ರಮುಖರಾದ ಬಿ.ಎಸ್ ಬಸವೇಶ್, ಚರಣ್, ಶರವಣ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.