ನೂತನ ನಗರಸಭಾ ಸದಸ್ಯರಿಗೆ ಸನ್ಮಾನ, ಅಭಿನಂದನೆ
ಕೆಂಪೇಗೌಡ ಯುವ ಪಡೆ ವತಿಯಿಂದ ಭಾನುವಾರ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡ ಹಾಗು ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ನೂತನ ನಗರಸಭಾ ಸದಸ್ಯರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಭದ್ರಾವತಿ, ಜೂ. ೨೭: ಕೆಂಪೇಗೌಡ ಯುವ ಪಡೆ ವತಿಯಿಂದ ಭಾನುವಾರ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡ ಹಾಗು ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ನೂತನ ನಗರಸಭಾ ಸದಸ್ಯರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ನೂತನ ನಗರಸಭಾ ಸದಸ್ಯರಾದ ಆರ್. ಮೋಹನ್‌ಕುಮಾರ್, ಪಲ್ಲವಿ ದಿಲೀಪ್, ವಿಜಯ, ಲತಾ ಚಂದ್ರಶೇಖರ್, ಜಯಶೀಲ ಸುರೇಶ್ ಮತ್ತು ಸವಿತಾ ಉಮೇಶ್ ಅವರನ್ನು ಸನ್ಮಾನಿಸಲಾಯಿತು. ಕೆಂಪೇಗೌಡ ಯುವ ಪಡೆ ಅಧ್ಯಕ್ಷ ಆರ್. ಮೋಹನ್‌ಕುಮಾರ್, ಪ್ರಧಾನ ಕಾರ್ಯದರ್ಶಿ ದುಷ್ಯಂತ(ದಿಲೀಪ), ಖಜಾಂಚಿ ಪ್ರಕಾಶ್ ಮತ್ತು ಶರತ್ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಆರಂಭದಲ್ಲಿ ನಾಡಪ್ರಭು ಕೆಂಪೇಗೌಡ ಹಾಗು ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ, ಜಿಲ್ಲಾ ಪಂಚಾಯಿತಿ ಸದಸ್ಯ ಎಸ್. ಮಣಿಶೇಖರ್, ಯುವ ಮುಖಂಡ ಎಂ.ಎ ಅಜಿತ್, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಟಿ ರವಿ, ಶಿಮೂಲ್ ಅಧ್ಯಕ್ಷ ಆನಂದ್, ಟಿ. ಚಂದ್ರೇಗೌಡ, ಕಬಡ್ಡಿ ಕೃಷ್ಣೇಗೌಡ, ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿವಲಿಂಗೇಗೌಡ, ಧರ್ಮೇಗೌಡ, ಅಶೋಕ್‌ಕುಮಾರ್, ಚುಂಜಾದ್ರಿ ಮಹಿಳಾ ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಸೇರಿದಂತೆ ಉಪಸ್ಥಿತರಿದ್ದರು.