ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್‌ಗಳ ಸಹಯೋಗದೊಂದಿಗೆ ಭದ್ರಾವತಿ ತಾಲೂಕು ಪಂಚಾಯಿತಿ ಕಛೇರಿ ಬಳಿ ನಿರ್ಮಿಸಲಾಗಿರುವ ಸಾರ್ವಜನಿಕ ಬಸ್ ತಂಗುದಾಣವನ್ನು ಭಾನುವಾರ ಶಾಸಕ ಬಿ.ಕೆ ಸಂಗಮೇಶ್ವರ್ ಸೇವೆಗೆ ಸಮರ್ಪಿಸಿದರು.
ಭದ್ರಾವತಿ, ಜು. ೨೫: ಲಯನ್ಸ್ ಕ್ಲಬ್ ಹಲವು ಸೇವಾ ಕಾರ್ಯಗಳ ಮೂಲಕ ಸಮಾಜಮುಖಿಯಾಗಿ ಗುರುತಿಸಿಕೊಂಡಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಶಾಸಕ ಸಂಗಮೇಶ್ವರ್ ಮೆಚ್ಚುಗೆ ವ್ಯಕ್ತಪಡಿಸದರು.
ಅವರು ಭಾನುವಾರ ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್‌ಗಳ ಸಹಯೋಗದೊಂದಿಗೆ ನಗರದ ತಾಲೂಕು ಪಂಚಾಯಿತಿ ಕಛೇರಿ ಬಳಿ ನಿರ್ಮಿಸಲಾಗಿರುವ ಸಾರ್ವಜನಿಕ ಬಸ್ ತಂಗುದಾಣವನ್ನು ಸೇವೆಗೆ ಸಮರ್ಪಿಸಿ ಮಾತನಾಡಿದರು.
8520ಲಯನ್ಸ್ ಕ್ಲಬ್ ಅದರಲ್ಲೂ ಸಂಕಷ್ಟದ ಸಮಯದಲ್ಲಿ ಸೇವಾ ಕಾರ್ಯಗಳನ್ನು ಅತ್ಯಂತ ಯಶಸ್ವಿಯಾಗಿ ಕೈಗೊಳ್ಳುವ ಮೂಲಕ ಮುಂಚೂಣಿಯಲ್ಲಿದ್ದು, ಇಂತಹ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
50ಕ್ಲಬ್ ಅಧ್ಯಕ್ಷ ಕೆ.ವಿ ಚಂದ್ರಶೇಖರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಗೌರ‍್ನರ್ ನೀಲಕಂಠ ಎಂ. ಹೆಗಡೆ, ಕ್ಲಬ್ ಕಾರ್ಯದರ್ಶಿ ರಾಮಮೂರ್ತಿ, ಖಜಾಂಚಿ ಎನ್. ಶಿವಕುಮಾರ್, ಹಿರಿಯ ಸದಸ್ಯರಾದ ಕೆ.ಸಿ ವೀರಭದ್ರಪ್ಪ, ಬಿ. ದಿವಾಕರಶೆಟ್ಟಿ, ಅನಂತಕೃಷ್ಣ ನಾಯಕ್, ರಾಜ್‌ಕುಮಾರ್, ನಗರಸಭಾ ಸದಸ್ಯ ಬಿ.ಎಂ ಮಂಜುನಾಥ, ತಂಗುದಾಣ ನಿರ್ಮಾಣಕ್ಕೆ ಸಹಕರಿಸಿದ ದಾನಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಪುರಸಭಾ ಮಾಜಿ ಸದಸ್ಯ ಭೂತನಗುಡಿಯ ದಿವಂಗತ ಪಿ. ತಮ್ಮಯ್ಯನವರ ಸ್ಮರಣಾರ್ಥವಾಗಿ ಈ ಬಸ್ ತಂಗುದಾಣ ನಿರ್ಮಿಸಲಾಗಿದೆ. ಈ ಹಿಂದೆ ಇದೆ ಸ್ಥಳದಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅನುದಾನದಲ್ಲಿ ತಂಗುದಾಣ ನಿರ್ಮಿಸಲಾಗಿತ್ತು. ರಸ್ತೆ ಅಗಲೀಕರಣ ಹಿನ್ನಲೆಯಲ್ಲಿ ಈ ತಂಗುದಾಣವನ್ನು ನೆಲಸಮಗೊಳಿಸಲಾಗಿತ್ತು. ಇದೆ ಸ್ಥಳದಲ್ಲಿ ಪುನಃ ತಂಗುದಾಣ ನಿರ್ಮಿಸಬೇಕೆಂದು ಸಾರ್ವಜನಿಕರು ಹಲವು ಬಾರಿ ಹೋರಾಟ ನಡೆಸಿ ಒತ್ತಾಯಿಸಿದ ಪರಿಣಾಮ ಇದೀಗ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ತಂಗುದಾಣ ನಿರ್ಮಾಣಗೊಂಡಿದೆ.