ನ್ಯಾಯಾಲಯದ ಆದೇಶ ಉಲ್ಲಂಘಿಸಿದ್ದಾರೆಂದು ಆರೋಪಿಸಿ ಕುಟುಂಬ ಸದಸ್ಯರು ಮಂಗಳವಾರ ಭದ್ರಾವತಿ ತಾಲೂಕು ದಂಡಾಧಿಕಾರಿ, ತಹಸೀಲ್ದಾರ್ರವರ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಭದ್ರಾವತಿ, ಜು. ೨೭: ನ್ಯಾಯಾಲಯದ ಆದೇಶ ಉಲ್ಲಂಘಿಸಿದ್ದಾರೆಂದು ಆರೋಪಿಸಿ ಕುಟುಂಬ ಸದಸ್ಯರು ಮಂಗಳವಾರ ತಾಲೂಕು ದಂಡಾಧಿಕಾರಿ, ತಹಸೀಲ್ದಾರ್ರವರ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ತಾಲೂಕಿನ ಸನ್ಯಾಸಿ ಕೋಡಮಗ್ಗಿ ಹೊಸೂರು ಗ್ರಾಮದ ನಿವಾಸಿ, ಸರ್ವೆ ನಂ. ೭೩, ೭೪ರ ಮಾಲೀಕರಾದ ದಾಕ್ಷಾಯಮ್ಮನವರ ಪರವಾಗಿ ನ್ಯಾಯಾಲಯ ಆದೇಶ ನೀಡಿದ್ದು, ಒತ್ತುವರಿಯಾಗಿರುವ ಜಾಗವನ್ನು ನ್ಯಾಯಾಲಯದ ಆದೇಶದಂತೆ ಆಳತೆ ಮಾಡಿ ತೆರವುಗೊಳಿಸಿಕೊಡುವಲ್ಲಿ ತಹಸೀಲ್ದಾರ್ರವರು ಹಿಂದೇಟು ಹಾಕುತ್ತಿದ್ದು, ಪ್ರಭಾವಿಗಳ ಒತ್ತಡಕ್ಕೆ ಮಣಿದು ನ್ಯಾಯಾಲಯದ ಆದೇಶ ಉಲ್ಲಂಘಿಸಿದ್ದಾರೆಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.
ಸ್ಥಳೀಯ ಮುಖಂಡ ಸುರೇಶಯ್ಯನವರ ನೇತೃತ್ವದಲ್ಲಿ ಕುಟುಂಬ ಸದಸ್ಯರು ಮಧ್ಯಾಹ್ನ ಪ್ರತಿಭಟನೆ ನಡೆಸಿ ತಹಸೀಲ್ದಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.