ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆ ಮುಂಭಾಗದಲ್ಲಿ ಕಂಡು ಬಂದ ಹಸಿರು ಬಣ್ಣದ ಓತಿಕ್ಯಾತ ಚಲನವಲನಗಳನ್ನು ಆಕರ್ಷಕವಾಗಿ ಸೆರೆ ಹಿಡಿದಿರುವ ಮಂಜುನಾಥ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಚಿತ್ರ.
ಭದ್ರಾವತಿ, ಆ. ೧೦: ಇತ್ತೀಚಿನ ಕೆಲವು ವರ್ಷಗಳಿಂದ ನಗರ ಪ್ರದೇಶದ ವ್ಯಾಪ್ತಿಯಲ್ಲಿ ಅಳಿವಿನಂಚಿನಲ್ಲಿರುವ ಜೀವಿಗಳ ಪೈಕಿ ಓತಿಕ್ಯಾತ ಸಹ ಒಂದಾಗಿದೆ. ಇಂತಹ ಅಪರೂಪದ ಜೀವಿಯ ಚಲನವಲನಗಳನ್ನು ಆಕರ್ಷಕವಾಗಿ ಸೆರೆ ಹಿಡಿಯುವ ಮೂಲಕ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಸಾರ್ವಜನಿಕ ಸಂಪರ್ಕ ಇಲಾಖೆಯ ನೌಕರ ಮಂಜುನಾಥ್ ಗಮನ ಸೆಳೆದಿದ್ದಾರೆ.
ಬಯಲು ಸೀಮೆಯಲ್ಲಿ ಹೆಚ್ಚಾಗಿ ಕಂಡು ಬರುವ ಸರಿಸೃಪಗಳ ಜಾತಿಗೆ ಸೇರಿದ ಓತಿಕ್ಯಾತ ಕುರಿತು ಇಂದಿನ ಯುವ ಪೀಳಿಗೆಗೆ ಸರಿಯಾದ ಮಾಹಿತಿಯೇ ಇಲ್ಲ. ಇದಕ್ಕೆ ಕಾರಣ ಓತಿಕ್ಯಾತಗಳು ಅಳಿವಿನಂಚಿನಲ್ಲಿವೆ. ಅದರಲ್ಲೂ ನಗರ ಪ್ರದೇಶದಲ್ಲಿ ಅಪರೂಪವಾಗಿ ಕಂಡು ಬರುವ ಇವುಗಳನ್ನು ವೀಕ್ಷಿಸುವುದೇ ಒಂದು ರೀತಿಯ ವಿಸ್ಮಯವಾಗಿದೆ.
ವಿಐಎಸ್‌ಎಲ್ ಕಾರ್ಖಾನೆ ಮುಂಭಾಗದಲ್ಲಿ ಕಂಡು ಬಂದ ಹಸಿರು ಬಣ್ಣದ ಓತಿಕ್ಯಾತ ಚಲನವಲನಗಳನ್ನು ಆಕರ್ಷಕವಾಗಿ ಸೆರೆ ಹಿಡಿದಿರುವ ಮಂಜುನಾಥ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಸಾರ್ವಜನಿಕ ಸಂಪರ್ಕಾಧಿಕಾರಿ ಎಲ್ ಪ್ರವೀಣ್‌ಕುಮಾರ್ ಸೇರಿದಂತೆ ಇನ್ನಿತರರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.