ಭದ್ರಾವತಿ ತಾಲೂಕಿನ ಕುವೆಂಪು ವಿಶ್ವ ವಿದ್ಯಾಯದ ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ (ಎಂಎಸ್ಡಬ್ಲ್ಯೂ) ವತಿಯಿಂದ ಸಮೀಪದ ತರೀಕೆರೆ ಲಕ್ಕವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆರೋಗ್ಯ ಶಿಬಿರ ಆಯೋಜಿಸಲಾಗಿತ್ತು.
ಭದ್ರಾವತಿ, ಆ. ೧೯ : ತಾಲೂಕಿನ ಕುವೆಂಪು ವಿಶ್ವ ವಿದ್ಯಾಯದ ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ (ಎಂಎಸ್ಡಬ್ಲ್ಯೂ) ವತಿಯಿಂದ ಸಮೀಪದ ತರೀಕೆರೆ ಲಕ್ಕವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆರೋಗ್ಯ ಶಿಬಿರ ಆಯೋಜಿಸಲಾಗಿತ್ತು.
ಶಿವಮೊಗ್ಗ ಮೆಟ್ರೋ ಯುನೈಟೆಡ್ ಹೆಲ್ತ್ ಕೇರ್ ಹಾಗು ಲಕ್ಕವಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ ನಡೆದ ಶಿಬಿರದಲ್ಲಿ ಕೆಸರಕೊಪ್ಪ, ಗುಂಡೇನಹಳ್ಳಿ ಹಾಗೂ ಸೋಮಪುರ ಗ್ರಾಮಗಳ ಗ್ರಾಮಸ್ಥರಿಗೆ ಆರೋಗ್ಯ ತಪಾಸಣೆ ಜೊತೆಗೆ ಅರೋಗ್ಯ ಸುಧಾರಣೆ ಹಾಗೂ ಸ್ವಚ್ಛತೆ ಕುರಿತು ಅರಿವು ಮೂಡಿಸಲಾಯಿತು.
ಶಿವಮೊಗ್ಗ ಮೆಟ್ರೋ ಯುನೈಟೆಡ್ ಹೆಲ್ತ್ ಕೇರ್ ವೈದ್ಯ ಡಾ. ದಿಲೀಪ್ ಕುಮಾರ್, ಡಾ. ಟಿ.ಡಿ ಸುನಿತಾ ಹಾಗು ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯರು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು. ಹಲಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಎಸ್ ಗಂಗಾಧರ್, ಸದಸ್ಯರಾದ ಮಹಮ್ಮದ್, ಇಬ್ರಾಹಿಂ, ಸರ್ಕಾರಿ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರು, ಶಾಲೆಯ ಸಿಬ್ಬಂದಿವರ್ಗದವರು, ಕುವೆಂಪು ವಿವಿ ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗು ಸುತ್ತಮುತ್ತಲಿನ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಭದ್ರಾವತಿ ತಾಲೂಕಿನ ಕುವೆಂಪು ವಿಶ್ವ ವಿದ್ಯಾಯದ ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ (ಎಂಎಸ್ಡಬ್ಲ್ಯೂ) ವತಿಯಿಂದ ಸಮೀಪದ ತರೀಕೆರೆ ಲಕ್ಕವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆರೋಗ್ಯ ಶಿಬಿರದಲ್ಲಿ ಕೆಸರಕೊಪ್ಪ, ಗುಂಡೇನಹಳ್ಳಿ ಹಾಗೂ ಸೋಮಪುರ ಗ್ರಾಮಗಳ ಗ್ರಾಮಸ್ಥರಿಗೆ ಕೆಸರಕೊಪ್ಪ, ಗುಂಡೇನಹಳ್ಳಿ ಹಾಗೂ ಸೋಮಪುರ ಗ್ರಾಮಗಳ ಗ್ರಾಮಸ್ಥರಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು.