ಭದ್ರಾವತಿಯಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ನಗರಸಭೆ ಹಾಗು ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಮಾಜ ಮತ್ತು ವಿವಿಧ ಸಂಘಟನೆಗಳ ವತಿಯಿಂದ ಹಳೇನಗರದ ಶ್ರೀ ವೀರಶೈವ ಸಭಾ ಭವನದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪ್ರತಿಭಾವಂತೆ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ, ಅ. ೨೦: ಭಾರತೀಯರ ಬದುಕಿನ ಭವ್ಯ ಪರಂಪರೆ ಬಿಂಬಿಸುವ ರಾಮಾಯಣ ಮಹಾಕಾವ್ಯ ರಚಿಸುವ ಮೂಲಕ ಶ್ರೀ ಮಹರ್ಷಿ ವಾಲ್ಮೀಕಿಯವರು ಈ ದೇಶದ ಇತಿಹಾಸದಲ್ಲಿ ಅಚ್ಚಳಿಯದಂತೆ ಉಳಿದುಕೊಂಡಿದ್ದಾರೆಂದು ಶಿವಮೊಗ್ಗ ಸಹ್ಯಾದ್ರಿ ಕಲಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಮೋಹನ್ ಚಂದ್ರಗುತ್ತಿ ಹೇಳಿದರು.
ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ನಗರಸಭೆ ಹಾಗು ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಮಾಜ ಮತ್ತು ವಿವಿಧ ಸಂಘಟನೆಗಳ ವತಿಯಿಂದ ಹಳೇನಗರದ ಶ್ರೀ ವೀರಶೈವ ಸಭಾ ಭವನದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.
ಆದರ್ಶ ಪುರುಷ ಶ್ರೀರಾಮನ ಪರಿಕಲ್ಪನೆಯಲ್ಲಿ ನಾವೆಲ್ಲರೂ ನ್ಯಾಯ, ನೀತಿ, ಸಂಸ್ಕೃತಿಯ ನೆಲೆಕಟ್ಟಿನಲ್ಲಿ ಬದುಕು ಸಾಗಿಸುತ್ತಿದ್ದೇವೆ. ರಾಮಾಯಣ ಮಹಕಾವ್ಯವನ್ನು ಪವಿತ್ರ ಗ್ರಂಥವಾಗಿ ಒಪ್ಪಿಕೊಂಡಿದ್ದೇವೆ. ಇದಕ್ಕೆ ಕಾರಣಕರ್ತರಾಗಿರುವ ಶ್ರೀ ಮಹರ್ಷಿ ವಾಲ್ಮೀಕಿಯರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ತಹಸೀಲ್ದಾರ್ ಆರ್. ಪ್ರದೀಪ್ ಕಾರ್ಯಕ್ರಮ ಉದ್ಘಾಟಿಸಿದರು. ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಹಿರಿಯ ಸದಸ್ಯರಾದ ಬಿ.ಕೆ ಮೋಹನ್, ಟಿಪ್ಪು ಸುಲ್ತಾನ್, ಪೌರಾಯುಕ್ತ ಕೆ. ಪರಮೇಶ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಿದ್ದಬಸಪ್ಪ, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಕಾಗದನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಇ.ಓ ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎಸ್. ಗೋಪಿನಾಥ್, ಮಹರ್ಷಿ ವಾಲ್ಮೀಕಿ ನಾಯಕ ಸಮಾಜದ ಗ್ರಾಮಾಂತರ ಅಧ್ಯಕ್ಷ ಎಲ್. ರಂಗಪ್ಪ, ನಗರಸಭೆ ಮಾಜಿ ಸದಸ್ಯೆ ಲಕ್ಷ್ಮೀದೇವಿ, ಬಸವರಾಜಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಅತಿಹೆಚ್ಚು ಅಂಕಗಳಿಸಿದ ವಾಲ್ಮೀಕಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.