![](https://blogger.googleusercontent.com/img/b/R29vZ2xl/AVvXsEj6WZUq0IdgDF4Z5PwD2WBEIjWSTF-6YlDxlyQa50Ay-_LvZhTR95lHSuRHSH3NFzoOxY7jYyez2Te7Ly3TCE37wIfLgH0ZKu4mk25ikDULbzu5hRhraqezvXscQFx02oNKwIpnCwtxcmYO/w400-h214-rw/D19-BDVT1-738249.jpg)
ಭದ್ರಾವತಿಯಲ್ಲಿ ಅಪೇಕ್ಷ ನೃತ್ಯ ಕಲಾ ವೃಂದ ಹಾಗು ಶ್ರೀ ಬಸವೇಶ್ವರ ಧರ್ಮಸಂಸ್ಥೆ ವತಿಯಿಂದ ಶಿವಮೊಗ್ಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಸಿದ್ದರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಕನ್ನಡ ರಾಜ್ಯೋತ್ಸವ ಹಾಗು ಸಂಗೀತ ನೃತ್ಯ ಸಂಭ್ರಮ, ವಿವಿಧ ಕ್ಷೇತ್ರದ ಸಾಧಕರಿಗೆ ಪುರಸ್ಕಾರ ಮತ್ತು ಸನ್ಮಾನ ಮತ್ತು ಕನ್ನಡದಲ್ಲಿ ೧೨೫ಕ್ಕೆ ೧೨೫ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಕನ್ನಡ ಕುವರ/ಕುವರಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಆನೇಕೊಪ್ಪ ಸಂಜೀವಿನಿ ಹಿರಿಯ ನಾಗರೀಕರ ಆರೈಕೆ ಕೇಂದ್ರದ ಮುಖ್ಯಸ್ಥೆ ಸವಿತಾ ಅವರಿಗೆ ಸಮಾಜ ಸೇವಾ ರತ್ನ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಭದ್ರಾವತಿ, ನ. 19: ಅಪೇಕ್ಷ ನೃತ್ಯ ಕಲಾ ವೃಂದ ಹಾಗು ಶ್ರೀ ಬಸವೇಶ್ವರ ಧರ್ಮಸಂಸ್ಥೆ ವತಿಯಿಂದ ಶಿವಮೊಗ್ಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಸಿದ್ದರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಕನ್ನಡ ರಾಜ್ಯೋತ್ಸವ ಹಾಗು ಸಂಗೀತ ನೃತ್ಯ ಸಂಭ್ರಮ, ವಿವಿಧ ಕ್ಷೇತ್ರದ ಸಾಧಕರಿಗೆ ಪುರಸ್ಕಾರ ಮತ್ತು ಸನ್ಮಾನ ಮತ್ತು ಕನ್ನಡದಲ್ಲಿ ೧೨೫ಕ್ಕೆ ೧೨೫ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಕನ್ನಡ ಕುವರ/ಕುವರಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಅಪೇಕ್ಷ ನೃತ್ಯ ಕಲಾ ವೃಂದದ ಅಧ್ಯಕ್ಷೆ ಭಾರತಿ ಗೋವಿಂದಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಿದ್ದಬಸಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್. ಉಮೇಶ್, ಉದ್ಯಮಿ ಬಿ.ಕೆ ಜಗನ್ನಾಥ ಹಾಗು ಶ್ರೀ ಬಸವೇಶ್ವರ ಧರ್ಮ ಸಂಸ್ಥೆ ಅಧ್ಯಕ್ಷ ಟ್ರಸ್ಟಿ ಶಿವಕುಮಾರ್ ಸೇರಿದಂತೆ ಇನ್ನಿತರರು ಕಾರ್ಯಕ್ರಮ ಉದ್ಘಾಟಿಸಿದರು. ಅಪೇಕ್ಷ ನೃತ್ಯ ಕಲಾ ವೃಂದದ ಕಾರ್ಯದರ್ಶಿ ಅಪೇಕ್ಷ ಮಂಜುನಾಥ್ ಆಶಯ ನುಡಿಗಳನ್ನಾಡಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಮಣಿಶೇಖರ್, ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ ಡಿ. ಪ್ರಭಾಕರ ಬೀರಯ್ಯ, ತುಳು ಕೂಟದ ಅಧ್ಯಕ್ಷ ಸುಧಾಕರ ಶೆಟ್ಟಿ, ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಎಲ್. ದೇವರಾಜ್, ಕರ್ನಾಟಕ ರಾಜ್ಯ ಅಲೆಮಾರಿ ದೊಂಬಿದಾಸ ಸಂಘದ ರಾಜ್ಯಾಧ್ಯಕ್ಷ ರಾಜು ಆರ್. ದೊಂಬಿದಾಸ ಮತ್ತು ಆನೇಕೊಪ್ಪ ಸಂಜೀವಿನಿ ಹಿರಿಯ ನಾಗರೀಕರ ಆರೈಕೆ ಕೇಂದ್ರದ ಮುಖ್ಯಸ್ಥೆ ಸವಿತಾ ಅವರಿಗೆ ಸಮಾಜ ಸೇವಾ ರತ್ನ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಬಿಜಾಪುರ ಮಹಿಳಾ ವಿಶ್ವವಿದ್ಯಾಲಯದ ಎಮೆರಿಟರ್‍ಸ್ ಪ್ರಾಧ್ಯಾಪಕಿ ಡಾ. ವಿಜಯಾದೇವಿಗೆ ಸಾಹಿತ್ಯ ರತ್ನ, ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಹಿರಿಯ ವೈದ್ಯ ಡಾ. ಡಿ.ಎಸ್ ಶಿವಪ್ರಕಾಶ್‌ಗೆ ವೈದ್ಯಕೀಯ ರತ್ನ, ರಾಜ್ಯ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ. ಬಾಲಾಜಿಗೆ ಜಾನಪದ ಕಲಾ ಸಾಮ್ರಾಟ, ಇಂಡಿಯಾ ಬುಕ್ ಆಪ್ ರೆಕಾರ್ಡ್ ಪ್ರತಿಭಾನ್ವಿತ ಬಾಲಕಿ ಬೇಬಿ ತನಿಷಾ ಗೌಡಗೆ ಪ್ರತಿಭಾ ರತ್ನ, ಬೆಂಗಳೂರಿನ ಆಧುನಿಕ ಕೃಷಿ ತಜ್ಞ ಕೃಷ್ಣಪ್ಪ ಗೌಡ ಪಡ್ಡಂಬೈಲ್‌ರಿಗೆ ಆಧುನಿಕ ಕೃಷಿ ಸಾಮ್ರಾಟ, ಮಂಗಳೂರಿನ ಕಾದಂಬರಿಕಾರ ಪಿ.ವಿ ಪ್ರದೀಪ್‌ಕುಮಾರ್‌ಗೆ ಕಾದಂಬರಿ ಸಾಮ್ರಾಟ, ಶಿವಮೊಗ್ಗ ಕಸ್ತೂರಬಾ ಬಾಲಕಿಯರ ಪ್ರೌಢಶಾಲೆ ಸಂಗೀತ ಶಿಕ್ಷಕಿ ಕೆ.ಎಸ್ ದಾಕ್ಷಾಯಿಣಿ ರಾಜ್‌ಕುಮಾರ್‌ಗೆ ಸಂಗೀತ ರತ್ನ, ಶಿವಮೊಗ್ಗದ ಸುಗಮ ಸಂಗೀತ ಗಾಯಕಿ ರೇವತಿ ರಾಜ್‌ಕುಮಾರ್ ಮತ್ತು ಹಿರಿಯ ಗಾಯಕ ಹರೀಶ್‌ಗೆ ಗಾಯನಶ್ರೀ, ಶಿವಮೊಗ್ಗ ಅಭಿನವ ಕಲಾ ಕೇಂದ್ರದ ನೃತ್ಯ ಶಿಕ್ಷಕಿ ವೇದಾವತಿ ಸೋಮಸುಂದರ್‌ಗೆ ನೃತ್ಯಕಲಾ ರತ್ನ ರಾಜ್ಯ ಪ್ರಶಸ್ತಿಗಳನ್ನು ನೀಡಲಾಯಿತು.
ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಸಿ.ಕೆ ರಮೇಶ್, ಬೆಳ್ತಂಗಡಿ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಶಂಕರ್ ದೇವಾಡಿಗ, ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಎನ್.ಕೆ ಪಾಲಾಕ್ಷಪ್ಪ, ನಿವೃತ್ತ ಶಿಕ್ಷಕಿ ಮೀನಾಕ್ಷಿ ಮತ್ತು ಶಿವಮೊಗ್ಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ರಾಧಾಬಾಯಿ ಅವರಿಗೆ ಶಿಕ್ಷಣ ಸೇವಾ ರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು
ಪ್ರಸ್ತಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಭಾಷೆ ಕನ್ನಡದಲ್ಲಿ ೧೨೫ಕ್ಕೆ ೧೨೫ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಕನ್ನಡ ಕುವರ/ಕುವರಿ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.
ಕಸಾಪ ಪ್ರಮುಖರಾದ ಸಿ. ಚನ್ನಪ್ಪ, ಜಿ.ಎನ್ ಸತ್ಯಮೂರ್ತಿ, ವೈ.ಕೆ ಹನುಮಂತಯ್ಯ, ಅರಳೇಹಳ್ಳಿ ಅಣ್ಣಪ್ಪ, ಸಾಹಿತಿ ಜೆ.ಎನ್ ಬಸವರಾಜಪ್ಪ, ಹಿಂದಿ ಶಿಕ್ಷಕ ನಾಗರಾಜ್ ಹಾಗು ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.