![](https://blogger.googleusercontent.com/img/b/R29vZ2xl/AVvXsEiHkvpJTKfdCw-k7vbQXVHeoUHTsN1Aa-hzNN9bTH3BTpf5BYNf2fPu_LR6J2gLiKXrhWIWxBLK4EVyg9cBuivZ0UxL3PHLdlgH2EA6x-v4zEJxyZBeDBIWEAYnxwuw_OWUSVrKD8Inzhyphenhyphen7/w400-h211-rw/D22-BDVT1-745936.jpg)
ದಾಸ ಶ್ರೇಷ್ಠ ಕನಕದಾಸರ ಜಯಂತಿ ಅಂಗವಾಗಿ ಭದ್ರಾವತಿ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಬ್ರೆಡ್ ಮತ್ತು ಬಿಸ್ಕತ್ ವಿತರಿಸಲಾಯಿತು.
ಭದ್ರಾವತಿ, ನ. ೨೨: ದಾಸ ಶ್ರೇಷ್ಠ ಕನಕದಾಸರ ಜಯಂತಿ ನಗರದ ವಿವಿಧೆಡೆ ಅದ್ದೂರಿಯಾಗಿ ಜರುಗಿತು. ಜಯಂತಿ ಅಂಗವಾಗಿ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಬ್ರೆಡ್ ಮತ್ತು ಬಿಸ್ಕತ್ ವಿತರಿಸಲಾಯಿತು.
ಕನಕ ಯುವಪಡೆ ಮತ್ತು ಕರ್ನಾಟಕ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ತಾಲೂಕು ಶಾಖೆ ವತಿಯಿಂದ ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ರೋಗಿಗಳಿಗೆ ಬ್ರೆಡ್ ಮತ್ತು ಬಿಸ್ಕತ್ ವಿತರಿಸಲಾಯಿತು.
ಶಾಸಕ ಬಿ.ಕೆ ಸಂಗಮೇಶ್ವರ್, ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಶಂಕರಪ್ಪ, ನಗರಸಭಾ ಸದಸ್ಯರಾದ ಶ್ರೇಯಸ್, ಕಾಂತರಾಜ್, ಅನಿತಾ ಮಲ್ಲೇಶ್, ಸುದೀಪ್‌ಕುಮಾರ್, ಕರ್ನಾಟಕ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು, ತಾಲೂಕು ಅಧ್ಯಕ್ಷ ಚಂದ್ರಶೇಖರ್, ಕಾರ್ಯಾಧ್ಯಕ್ಷ ಅಭಿಲಾಷ್, ತಾಂತ್ರಿಕ ಸಲಹೆಗಾರ ಮನೋಹರ್, ಶಿವಣ್ಣಗೌಡ್ರು, ಯುವ ಕಾಂಗ್ರೆಸ್ ಅಧ್ಯಕ್ಷ ವಿನೋದ್‌ಕುಮಾರ್, ಕನಕ ಯುವಪಡೆ ಅಧ್ಯಕ್ಷ ಕುಮಾರ್(ಡೈರಿ) ಗೌರವಾಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷ ಕೇಶವ, ಕಾರ್ಯದರ್ಶಿ ಲೋಕೇಶ್, ಕಾನೂನು ಸಲಹೆಗಾರ ಹನುಮಂತ, ಸಹ ಕಾರ್ಯದರ್ಶಿ ಮಹಾದೇವ್ ಮತ್ತು ಕಾರ್ಯದರ್ಶಿ ಶರತ್ ಹಾಗು ಕುರುಬ ಸಮಾಜ ಪ್ರಮುಖರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಭದ್ರಾವತಿ ಅಂಡರ್‌ಬ್ರಿಡ್ಜ್ ಬಳಿ ಅಂಬೇಡ್ಕರ್ ವೃತ್ತದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಜೊತೆಗೆ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.
ನಗರದ ಹೊಸ ಸೇತುವೆ ರಸ್ತೆಯಲ್ಲಿರುವ ಕೆಎಸ್‌ಆರ್‌ಟಿಸಿ ಘಟಕ ಸಮೀಪದ ವೃತ್ತದಲ್ಲಿ ಹಾಗು ಅಂಡರ್‌ಬ್ರಿಡ್ಜ್ ಬಳಿ ಅಂಬೇಡ್ಕರ್ ವೃತ್ತದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಜೊತೆಗೆ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಸಾರ್ವಜನಿಕರಿಗೆ ಅನ್ನಸಂತರ್ಪಣೆ ನೆರವೇರಿಸಲಾಯಿತು.
ಕನಕ ಆಟೋ ನಿಲ್ದಾಣದಲ್ಲಿ ಕನಕ ಜಯಂತಿ:
ನಗರದ ತಾಲೂಕು ಪಂಚಾಯಿತಿ ಕಛೇರಿ ಸಮೀಪದಲ್ಲಿರುವ ಕನಕ ಆಟೋ ನಿಲ್ದಾಣದಲ್ಲಿ ಕನಕದಾಸರ ಜಯಂತಿಯನ್ನು ಅದ್ದೂರಿಯಾಗಿ ಅಚರಿಸಲಾಯಿತು. ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನದೊಂದಿಗೆ ಸ್ವರ ಸಂಗೀತ ಹಾಗು ಅನ್ನ ಸಂತರ್ಪಣೆ ಕಾರ್ಯಕ್ರಮಗಳು ಜರುಗಿದವು.
ಭದ್ರಾವತಿ ತಾಲೂಕು ಪಂಚಾಯಿತಿ ಕಛೇರಿ ಸಮೀಪದಲ್ಲಿರುವ ಕನಕ ಆಟೋ ನಿಲ್ದಾಣದಲ್ಲಿ ಕನಕದಾಸರ ಜಯಂತಿಯನ್ನು ಅದ್ದೂರಿಯಾಗಿ ಅಚರಿಸಲಾಯಿತು. ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನದೊಂದಿಗೆ ಸ್ವರ ಸಂಗೀತ ಹಾಗು ಅನ್ನ ಸಂತರ್ಪಣೆ ಕಾರ್ಯಕ್ರಮಗಳು ಜರುಗಿದವು.
ಕನಕ ಆಟೋ ಚಾಲಕರ ಸಂಘದ ಅಧ್ಯಕ್ಷ ಸುರೇಶ್, ರವಿ, ರಮೇಶ್, ಚೇತನ್, ವೆಂಕಟೇಶ್, ತ್ಯಾಗರಾಜ್, ಮಂಜುನಾಥ್, ರಘು ದೇವರಹಳ್ಳಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ತಾಲೂಕು ರಾಷ್ಟ್ರೀಯ ಹಬ್ಬಗಳ ಅಚರಣಾ ಸಮಿತಿ :
ವಿಧಾನಪರಿಷತ್ ಚುನಾವಣೆ ನೀತಿ ಸಂಹಿತೆ ಹಿನ್ನಲೆಯಲ್ಲಿ ಕನಕದಾಸರ ಜಯಂತಿಯನ್ನು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸರಳವಾಗಿ ಆಚರಿಸಲಾಯಿತು.
ವಿಧಾನಪರಿಷತ್ ಚುನಾವಣೆ ನೀತಿ ಸಂಹಿತೆ ಹಿನ್ನಲೆಯಲ್ಲಿ ಕನಕದಾಸರ ಜಯಂತಿಯನ್ನು ಭದ್ರಾವತಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸರಳವಾಗಿ ಆಚರಿಸಲಾಯಿತು.
ತಹಸೀಲ್ದಾರ್ ಆರ್ ಪ್ರದೀಪ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭಾ ಸದಸ್ಯರಾದ ಜಾರ್ಜ್, ಟಿಪ್ಪುಸುಲ್ತಾನ್, ಸುದೀಪ್‌ಕುಮಾರ್, ಮೋಹನ್, ಬಿ. ಗಂಗಾಧರ್, ತಹಸೀಲ್ದಾರ್ ಗ್ರೇಡ್-೨ ರಂಗಮ್ಮ, ಉಪತಹಸೀಲ್ದಾರ್‌ಗಳಾದ ಮಂಜಾನಾಯ್ಕ, ಅರಸು, ರಾಧಕೃಷ್ಣಭಟ್ ಸೇರಿದಂತೆ ಕಛೇರಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.