Thursday, December 23, 2021
ನಗರಸಭೆಯಲ್ಲಿ ಭ್ರಷ್ಟಾಚಾರ, ಮೂಲಸೌಕರ್ಯ ಕೊರತೆ ಖಂಡಿಸಿ ಬಿಜೆಪಿ ಪ್ರತಿಭಟನೆ
Wednesday, December 22, 2021
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿ ಹೊಳೆಹೊನ್ನೂರಿನ ಸತೀಶ್ ಅವಿರೋಧ ಆಯ್ಕೆ
ಭದ್ರಾವತಿ, ಡಿ. ೨೩ : ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿ ಹೊಳೆಹೊನ್ನೂರಿನ ಸತೀಶ್ ಗುರುವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು. ಒಟ್ಟು ೧೭ ಸ್ಥಾನಗಳನ್ನು ಹೊಂದಿರುವ ಸಮಿತಿಯಲ್ಲಿ ಹೊಂದಾಣಿಕೆ ಯಂತೆ ಹಿಂದೆ ಲವೇಶ್ ಗೌಡ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಇದೀಗ ನೂತನ ಅಧ್ಯಕ್ಷರಾಗಿ ಸತೀಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು, ಚುನಾವಣಾಧಿಕಾರಿಯಾಗಿ ತಾಲೂಕು ದಂಡಾಧಿಕಾರಿ ತಹಸಿಲ್ದಾರ್ ಆರ್. ಪ್ರದೀಪ್ ಕರ್ತವ್ಯ ನಿರ್ವಹಿಸಿದರು. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಜಿಲ್ಲಾ ಉಪನಿರ್ದೇಶಕ ಜಯಕುಮಾರ್, ಕಾರ್ಯದರ್ಶಿ ಸತೀಶ್ ಉಪಸ್ಥಿತರಿದ್ದರು. ಸದಸ್ಯರಾದ ಕುಬೇಂದ್ರಪ್ಪ, ಎಂ.ಎಸ್ ಚಂದ್ರಶೇಖರ್, ಎಂ.ಎಸ್ ಬಸವರಾಜಪ್ಪ, ಟಿ.ಎಂ ರತ್ನಮ್ಮ, ಟಿ.ವಿ ಸುಜಾತ, ಲವೇಶ್‌ಗೌಡ, ರಾಜಾನಾಯ್ಕ, ಜಯರಾಂ, ಖಾಸಿಂ ಸಾಬ್, ಲಕ್ಷ್ಮಣಪ್ಪ ಮತ್ತು ಡಾ. ಎಚ್. ನಾಗೇಶ್ ಸೇರಿದಂತೆ ಒಟ್ಟು ೧೨ ಮಂದಿ ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಅಧ್ಯಕ್ಷ ಸ್ಥಾನಕ್ಕೆ ಕೇವಲ ಒಂದೇ ಒಂದು ನಾಮಪತ್ರ ಸಲ್ಲಿಕ್ಕೆಯಾದ ಹಿನ್ನೆಲೆಯಲ್ಲಿ ಅವಿರೋಧ ಆಯ್ಕೆ ಘೋಷಿಸಲಾಯಿತು. ನೂತನ ಅಧ್ಯಕ್ಷರನ್ನು ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ, ಜೆಡಿಎಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೀತಾ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್ ಕುಮಾರ್, ತಾಲೂಕು ಕ್ಷತ್ರಿಯ ಮರಾಠ ಸಮಾಜದ ಅಧ್ಯಕ್ಷ ಯಶವಂತರಾವ್ ಘೋರ್ಪಡೆ ಸೇರಿದಂತೆ ಇನ್ನಿತರರು ಅಭಿನಂದಿಸಿದರು.
ಕಾರ್ಯಾಧ್ಯಕ್ಷರಾಗಿ ಡಾ. ಸಿ. ರಾಮಚಾರಿ ನೇಮಕ
ಡಿ.೨೪ರಂದು ಸರ್ವಸದಸ್ಯರ ವಾರ್ಷಿಕ ಮಹಾಸಭೆ
ಎಂ.ಇ.ಎಸ್ ಸಂಘಟನೆ ನಿಷೇಧಿಸಿ : ಬಂಧಿತ ೨೭ ಮಂದಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ
ಜಯಕರ್ನಾಟಕ ಸಂಘಟನೆ ವತಿಯಿಂದ ತಹಸೀಲ್ದಾರ್‌ಗೆ ಮನವಿ