ಸೌಲಭ್ಯಪಡೆದುಕೊಳ್ಳಲು ಎಲ್ಲಾ ರೀತಿಯ ಸಹಕಾರ : ಮುಮ್ತಾಜ್ ಬೇಗಂ
ಭದ್ರಾವತಿ ಹಳೇನಗರದ ಸವಿತಾ ಸಮಾಜದಲ್ಲಿ ಇ-ಶ್ರಮ್ ಕಾರ್ಡ್ ನೋಂದಾಣಿಗೆ ಚಾಲನೆ ನೀಡಿದ ಕಾರ್ಮಿಕ ನಿರೀಕ್ಷಕಿ ಮುಮ್ತಾಜ್ ಬೇಗಂ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ, ಡಿ. ೨೮: ಇ-ಶ್ರಮ್ ಯೋಜನೆಯಡಿ ಸರ್ಕಾರದಿಂದ ಸೌಲಭ್ಯಗಳನ್ನು ಪಡೆದುಕೊಳ್ಳಲು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಕಾರ್ಮಿಕ ನಿರೀಕ್ಷಕಿ ಮುಮ್ತಾಜ್ ಬೇಗಂ ಹೇಳಿದರು.
ಅವರು ಮಂಗಳವಾರ ಹಳೇನಗರದ ಸವಿತಾ ಸಮಾಜದಲ್ಲಿ ಇ-ಶ್ರಮ್ ಕಾರ್ಡ್ ನೋಂದಾಣಿಗೆ ಚಾಲನೆ ನೀಡಿ ಮಾತನಾಡಿದರು.
ಇ-ಶ್ರಮ್ ಯೋಜನೆ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಹಕಾರಿಯಾಗಿದ್ದು, ಇದರ ಸದುಪಯೋಗಪಡೆದುಕೊಳ್ಳುವಂತೆ ಮನವಿ ಮಾಡಿದರು.
ಕರ್ನಾಟಕ ಸ್ಟೇಟ್ ಕನ್ಸಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್‌ಬಾಬು ಹಾಗು ಸರ್.ಎಂ ವಿಶ್ವೇಶ್ವರಾಯ ದ್ವಿಚಕ್ರ ವಾಹನ ದುರಸ್ತಿಗಾರರ ಸಂಘದ ಅಧ್ಯಕ್ಷ ಬಾಬು ಯೋಜನೆಯ ಮಹತ್ವ ಕುರಿತು ವಿವರಿಸಿದರು.
ಸವಿತಾ ಸಮಾಜದ ಅಧ್ಯಕ್ಷ ವಿಶ್ವನಾಥ್ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಎಂ. ಪರಮೇಶ್, ಸವಿತಾ ಸಮಾಜದ ಪದಾಧಿಕಾರಿಗಳು ಹಾಗು ಕಾರ್ಮಿಕ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.