ಹೆಣ್ಣು ಮಕ್ಕಳಿಗೆ ಕೌಶಲ್ಯಾಧಾರಿತ ಉಚಿತ ಡೇಟಾ ಎಂಟ್ರಿ ಮತ್ತು ಬ್ಯೂಟಿಷಿಯನ್ ತರಬೇತಿಗೆ ಭದ್ರಾವತಿ ನ್ಯೂಟೌನ್ ಸರ್ಕಾರಿ ಬಾಲಿಕಾ ಪ್ರೌಢಶಾಲೆಯಲ್ಲಿ ಚಾಲನೆ ನೀಡಲಾಯಿತು.
ಭದ್ರಾವತಿ, ಜ. ೯: ಹೆಣ್ಣು ಮಕ್ಕಳಿಗೆ ಕೌಶಲ್ಯಾಧಾರಿತ ಉಚಿತ ಡೇಟಾ ಎಂಟ್ರಿ ಮತ್ತು ಬ್ಯೂಟಿಷಿಯನ್ ತರಬೇತಿಗೆ ನಗರದ ನ್ಯೂಟೌನ್ ಸರ್ಕಾರಿ ಬಾಲಿಕಾ ಪ್ರೌಢಶಾಲೆಯಲ್ಲಿ ಚಾಲನೆ ನೀಡಲಾಯಿತು.
ಸರ್ವ ಶಿಕ್ಷಣ ಕರ್ನಾಟಕ(ಎಸ್‌ಎಸ್‌ಕೆ) ಡಿವೈಪಿಸಿಗಳಾದ ಗಣಪತಿ ಮತ್ತು ಉಮಾಮಹೇಶ್ವರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ೧೬ ರಿಂದ ೨೯ ವರ್ಷದೊಳಗಿನ ಶಾಲೆಯಿಂದ ಹೊರಗುಳಿದ ಹಾಗು ಶಿಕ್ಷಣವನ್ನು ಅರ್ಧದಲ್ಲಿಯೇ ಮೊಟಕುಗೊಳಿಸಿರುವ ಹೆಣ್ಣು ಮಕ್ಕಳು ಈ ತರಬೇತಿ ಪಡೆಯಬಹುದಾಗಿದೆ.
ತರಬೇತಿ ಪೂರ್ಣಗೊಳಿಸಿದವರಿಗೆ ಪ್ರಮಾಣಪತ್ರ ವಿತರಿಸಲಾಗುವುದು. ಇದರಿಂದ ಬ್ಯೂಟಿ ಪಾರ್ಲರ್‌ಗಳಲ್ಲಿ ಮತ್ತು ಐಟಿ ಹಬ್‌ಗಳಲ್ಲಿ ಉದ್ಯೋಗ ಪಡೆಯಲು ಸಾಧ್ಯವಾಗುತ್ತದೆ. ಅಲ್ಲದೆ ಸ್ವಾವಲಂಬಿಗಳಾಗಿ ಬದುಕು ರೂಪಿಸಿಕೊಳ್ಳಲು ಸಹ ಸಹಕಾರಿಯಾಗಲಿದೆ ಎಂದರು. ಉದ್ಘಾಟಿಸಲಾಯಿತು
ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಶಾಲೆಯ ಉಪಪ್ರಾಚಾರ್ಯರಾದ ಟಿ.ಎಸ್ ಸುಮನ ಅಧ್ಯಕ್ಷತೆ ವಹಿಸಿದ್ದರು.