Thursday, January 27, 2022
ಇ-ಶ್ರಮ್ ಕಾರ್ಡ್ ಸದುಪಯೋಗ ಪಡೆದುಕೊಳ್ಳಿ : ಕೆ. ಮಂಜುನಾಥ್
Wednesday, January 26, 2022
ಕಾರು- ಲಾರಿ ನಡುವೆ ಮುಖಾಮುಖಿ ಡಿಕ್ಕಿ ಇಬ್ಬರು ಸ್ಥಳದಲ್ಲೇ ಸಾವು
ಭದ್ರಾವತಿ: ನಗರದ ಜೇಡಿಕಟ್ಟೆ ಸಮೀಪ ಗುರುವಾರ ಬೆಳಗ್ಗೆ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಕಾಗದ ನಗರದ ನಿವಾಸಿ ಬಿಜೆಪಿ ಮುಖಂಡ ಷಣ್ಮುಖ ಮತ್ತು ಬೀಡಾ ಸ್ಟಾಲ್ ಮಾಲೀಕ ರಾಮಚಂದ್ರ ಮತಪಟ್ಟಿದ್ದಾರೆ.
ಅಪಘಾತ ಬೆಳಗ್ಗೆ ಸುಮಾರು 6.30 ರ ಸಮಯದಲ್ಲಿ ನಡೆದಿದ್ದು ಶಿವಮೊಗ್ಗ ಕಡೆಯಿಂದ ಭದ್ರಾವತಿ ಮಾರ್ಗವಾಗಿ ಬರುತ್ತಿದ್ದ ಲಾರಿ ಹಾಗೂ ಭದ್ರಾವತಿಯಿಂದ ಶಿವಮೊಗ್ಗ ಮಾರ್ಗವಾಗಿ ಚಲಿಸುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಅಪಘಾತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಷಣ್ಮುಖ
ರಾಮಚಂದ್ರ
ಷಣ್ಮುಖ ರವರು ಕಾಗದ ನಗರ ಎಂಪಿಎಂ ಇಎಸ್ ಕಾಲೇಜಿನ ಉಪನ್ಯಾಸಕಿ ಪರಿಮಳ ಅವರ ಪತ್ನಿಯಾಗಿದ್ದು, ಹಲವಾರು ವರ್ಷಗಳಿಂದ ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದರು.
ರಾಮಚಂದ್ರ ಅವರು ಕಾಗದ ನಗರದಲ್ಲಿ ಹಲವಾರು ವರ್ಷಗಳಿಂದ ಸಣ್ಣ ಪ್ರಮಾಣದಲ್ಲಿ ಬೀಡಾ ಸ್ಟಾಲ್ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದರು.
ಮೃತರ ನಿಧನಕ್ಕೆ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು, ಸ್ಥಳೀಯರು ಸಂತಾಪ ಸೂಚಿಸಿದ್ದಾರೆ.