ಭದ್ರಾವತಿ ಬಂಟರ ಭವನದಲ್ಲಿ ಮಾ.೧೨ರಂದು ಆಯೋಜಿಸಲಾಗಿರುವ 'ಮಧುರ ಮಿಲನ' ಸಮ್ಮೇಳನ ಕುರಿತು ಸಮ್ಮೇಳನ ಸಮಿತಿ ಅಧ್ಯಕ್ಷ ಎಂ.ಎಸ್ ಜನಾರ್ಧನ ಅಯ್ಯಂಗಾರ್ ಮಾಹಿತಿ ನೀಡಿದರು.
ಭದ್ರಾವತಿ, ಮಾ. ೯: ದಿ ಇಂಟರ್‌ನ್ಯಾಷನಲ್ ಅಸೋಸಿಯೇಷನ್ ಆಫ್ ಲಯನ್ಸ್ ಕ್ಲಬ್ ಡಿಸ್ಟ್ರಿಕ್-೩೧೭ಸಿ ರಿಜಿಯನ್-೭ರ ಸಮ್ಮೇಳನ 'ಮಧುರ ಮಿಲನ' ಮಾ.೧೨ರಂದು ಮಧ್ಯಾಹ್ನ ೩ ಗಂಟೆಗೆ ಜನ್ನಾಪುರ ಬಂಟರ ಭವನದಲ್ಲಿ ಆಯೋಜಿಸಲಾಗಿದೆ ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಎಂ.ಎಸ್ ಜನಾರ್ಧನ ಅಯ್ಯಂಗಾರ್ ಹೇಳಿದರು.
ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಿಜಿಯನ್-೭ರ ಅಧ್ಯಕ್ಷ ಹೆಬ್ಬಂಡಿ ಬಿ. ನಾಗರಾಜ್ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದು, ರಿಜಿಯನ್-೭ರ ಪ್ರಥಮ ಮಹಿಳೆ ಕೆ.ಎಚ್ ದೀಪಶ್ರೀ ಉದ್ಘಾಟಿಸುವರು ಎಂದರು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಜೀವ ವೈವಿಧ್ಯ ಮಂಡಳಿ ಮಾಜಿ ಅಧ್ಯಕ್ಷ ಅನಂತ ಹೆಗಡೆ ಆಶಿಸಿರ, ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಲಯನ್ಸ್ ಕ್ಲಬ್ ಡಿಸ್ಟ್ರಿಕ್-೩೧೭ಸಿ ಗೌರ್‍ನರ್ ಡಾ. ಎಂ.ಕೆ ಭಟ್ ಮತ್ತು ರಿಜಿಯನ್-೭ರ ಮಾರ್ಗದರ್ಶಕ ಬಿ. ದಿವಾಕರ ಶೆಟ್ಟಿ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ. ಲಯನ್ಸ್ ಕ್ಲಬ್ ಎಲ್ಲಾ ವಿಭಾಗಗಳ ಪದಾಧಿಕಾರಿಗಳು, ರಿಜಿಯನ್ ಕ್ಲಬ್‌ಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಮ್ಮೇಳನ ಯಶಸ್ವಿಗೊಳಿಸುವಂತೆ ಕೋರಿದರು.
ಪತ್ರಿಕಾಗೋಷ್ಠಿಯಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷ ಬಿ.ಎಸ್ ಮಹೇಶ್‌ಕುಮಾರ್, ಕಾರ್ಯದರ್ಶಿ ಡಿ. ಶಂಕರಮೂರ್ತಿ, ಖಜಾಂಚಿ ವಿನೋದ್ ಗಿರಿ, ವಲಯ ಸಲಹೆಗಾರ ಜಿ.ಎಸ್ ಕುಮಾರ್, ಸಮ್ಮೇಳನ ಸಮಿತಿ ಕಾರ್ಯದರ್ಶಿ ಎ.ಎನ್ ಕಾರ್ತಿಕ್, ಖಜಾಂಚಿ ಎಂ. ಪರಮೇಶ್ವರಪ್ಪ, ಜೋನ್-೧ರ ಎ.ಎಸ್ ಕುಮಾರಸ್ವಾಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.