ಭದ್ರಾವತಿ ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆಯ ಕನ್ನಡ ಪ್ರಾಥಮಿಕ ಶಾಲೆ ಪಕ್ಕದಲ್ಲಿ ಟ್ರೆಂಚ್(ಕಂದಕ)ನಲ್ಲಿ ಹಸು ಸಿಕ್ಕಿಹಾಕಿಕೊಂಡಿರುವುದು.
ಭದ್ರಾವತಿ, ಜೂ. ೧೬: ನಗರದ ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆಯ ಕನ್ನಡ ಪ್ರಾಥಮಿಕ ಶಾಲೆ ಪಕ್ಕದಲ್ಲಿ ಟ್ರೆಂಚ್(ಕಂದಕ)ನಲ್ಲಿ ಹಸು ಸಿಕ್ಕಿಹಾಕಿಕೊಂಡ ಘಟನೆ ನಡೆದಿದ್ದು, ತಕ್ಷಣ ಸ್ಥಳೀಯರು ಹಸುವನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶಾಲೆಯ ಪಕ್ಕದಲ್ಲಿ ಟ್ರೆಂಚ್ ಹೊಡೆದು ಹಲವು ದಿನಗಳು ಕಳೆದಿದ್ದು, ಆದರೆ ಟ್ರಂಚ್ ಮುಚ್ಚದ ಕಾರಣ ಹಸುವೊಂದು ಸಿಕ್ಕಿ ಹಾಕಿಕೊಂಡಿದೆ. ಸ್ಥಳೀಯರು ಹಸು ಸಿಕ್ಕಿ ಹಾಕಿಕೊಂಡ ತಕ್ಷಣ ಕಾರ್ಯಪ್ರವೃತರಾಗಿ ಟ್ರಂಚ್ ಅಕ್ಕಪಕ್ಕ ಮಣ್ಣು ಹೊರ ತೆಗೆದು ಸಡಿಲಗೊಳಿಸುವ ಮೂಲಕ ರಕ್ಷಿಸಿದ್ದಾರೆ. ಈ ನಡುವೆ ಘಟನೆಗೆ ಬಿಎಸ್‌ಎನ್‌ಎಲ್ ನಿರ್ಲಕ್ಷ್ಯತನ ಕಾರಣ ಎಂದು ಸ್ಥಳೀಯರು ಆರೋಪಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಾಲೆ ಪಕ್ಕದಲ್ಲಿಯೇ ಟ್ರೆಂಚ್ ಇರುವ ಕಾರಣ ಒಂದು ವೇಳೆ ಶಾಲಾ ಮಕ್ಕಳು ಟ್ರಂಚ್‌ನಲ್ಲಿ ಸಿಕ್ಕಿ ಹಾಕಿಕೊಂಡು ಅವಘಡಗಳು ಸಂಭವಿಸುವ ಸಾಧ್ಯತೆ ಹೆಚ್ಚಾಗಿದ್ದು, ತಕ್ಷಣ ಟ್ರಂಚ್ ಮುಚ್ಚುವ ಕಾರ್ಯ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಭದ್ರಾವತಿ ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆಯ ಕನ್ನಡ ಪ್ರಾಥಮಿಕ ಶಾಲೆ ಪಕ್ಕದಲ್ಲಿ ಟ್ರೆಂಚ್(ಕಂದಕ)ನಲ್ಲಿ ಹಸು ಸಿಕ್ಕಿಹಾಕಿಕೊಂಡ ಘಟನೆ ನಡೆದಿದ್ದು, ತಕ್ಷಣ ಸ್ಥಳೀಯರು ಹಸುವನ್ನು ರಕ್ಷಿಸುವಲ್ಲಿ ಯಶಸ್ವಿಯಾದರು.