Wednesday, August 3, 2022

ವಿಐಎಸ್‌ಎಲ್ ಕಾರ್ಖಾನೆಗೆ ಬಂಡವಾಳ ತೊಡಗಿಸಿ : ಬಿ.ವೈ ರಾಘವೇಂದ್ರ

ಕೇಂದ್ರ ಉಕ್ಕು ಪ್ರಾಧಿಕಾರದ ಅಧ್ಯಕ್ಷೆ ರಾಧ ಸೋಮಮಂಡಲ್ ಜೊತೆ ಚರ್ಚೆ

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ತೊಡಗಿಸುವುದು ಹಾಗು ನಿವೃತ್ತ ಕಾರ್ಮಿಕರ ವಿವಿಧ ಬೇಡಿಕೆಗಳ ಕುರಿತು ಬುಧವಾರ ದೆಹಲಿಯಲ್ಲಿ ಸಂಸದ ಬಿ.ವೈ ರಾಘವೇಂದ್ರ ಪ್ರಾಧಿಕಾರದ ಅಧ್ಯಕ್ಷೆ ರಾಧ ಸೋಮಮಂಡಲ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
    ಭದ್ರಾವತಿ, ಆ. ೩: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ತೊಡಗಿಸುವುದು ಹಾಗು ನಿವೃತ್ತ ಕಾರ್ಮಿಕರ ವಿವಿಧ ಬೇಡಿಕೆಗಳ ಕುರಿತು ಬುಧವಾರ ದೆಹಲಿಯಲ್ಲಿ ಸಂಸದ ಬಿ.ವೈ ರಾಘವೇಂದ್ರ ಪ್ರಾಧಿಕಾರದ ಅಧ್ಯಕ್ಷೆ ರಾಧ ಸೋಮಮಂಡಲ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
    ತಕ್ಷಣ ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ತೊಡಗಿಸುವುದು, ಕಾರ್ಖಾನೆಯ ವಸತಿ ಗೃಹಗಳನ್ನು ದೀರ್ಘಾವಧಿ ಬಾಡಿಗೆಗೆ ನೀಡುವುದು, ಮೆಡಿ ಕ್ಲೈಮ್ ಇನ್ಸೂರೆನ್ಸ್ ಪಾಲಿಸಿಯಿಂದ ವಂಚಿತರಾದ ನಿವೃತ್ತ ಕಾರ್ಮಿಕರಿಗೆ ಉಪಯೋಗವಾಗುವಂತೆ ಅವಕಾಶ ಕಲ್ಪಿಸಿಕೊಡುವುದು. ೩೩ ತಿಂಗಳ ಅವಧಿಗೆ ವಸತಿ ಗೃಹಗಳ ಕರಾರು ನವೀಕರಣಗೊಳಿಸುವುದು  ಹಾಗು ಖಾಲಿ ಇರುವ ಸುಮಾರು ೫೦೦ ವಸತಿ ಗೃಹಗಳನ್ನು ನಿವೃತ್ತ ಕಾರ್ಮಿಕರಿಗೆ ಬಾಡಿಗೆಗೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಸಂಸದರು ಅಧ್ಯಕ್ಷರೊಂದಿಗೆ ಚರ್ಚೆ ನಡೆಸಿದರು.
    ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ಅಧ್ಯಕ್ಷ ಬಿ.ಜಿ ರಾಮಲಿಂಗಯ್ಯ, ಸೈಲ್ ನಿವೃತ್ತ ಕಾರ್ಮಿಕರ ಸಂಘದ ಕೇಂದ್ರ ಒಕ್ಕೂಟದ ಉಪಾಧ್ಯಕ್ಷ ಸಿ.ಎಸ್ ನಾಗಭೂಷಣ್ ಹಾಗು ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.

ಜಾನಪದ ಕಲಾವಿದ ಉಮೇಶ್‌ನಾಯ್ಕರಿಗೆ ಸನ್ಮಾನ : ಆಕಾಡೆಮಿಗೆ ಆಯ್ಕೆ

ಜಾನಪದ ಕಲೆಯಲ್ಲಿ ಸುಮಾರು ೨೫ ವರ್ಷಗಳಿಂದ ತೊಡಗಿಸಿಕೊಂಡು ರಾಜ್ಯಾದ್ಯಂತ ಸಂಚರಿಸಿ ಜಾನಪದ ಕಲೆ ಕುರಿತು ಯುವ ಸಮುದಾಯಕ್ಕೆ ಜಾಗೃತಿ ಮೂಡಿಸುತ್ತಿರುವ ಕಲಾವಿದ ಉಮೇಶ್ ನಾಯ್ಕ ಅವರನ್ನು ಶಿವಮೊಗ್ಗ "ಆಸರೆ" ಮಹಿಳಾ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಆ. ೩: ಜಾನಪದ ಕಲೆಯಲ್ಲಿ ಸುಮಾರು ೨೫ ವರ್ಷಗಳಿಂದ ತೊಡಗಿಸಿಕೊಂಡು ರಾಜ್ಯಾದ್ಯಂತ ಸಂಚರಿಸಿ ಜಾನಪದ ಕಲೆ ಕುರಿತು ಯುವ ಸಮುದಾಯಕ್ಕೆ ಜಾಗೃತಿ ಮೂಡಿಸುತ್ತಿರುವ ಕಲಾವಿದ ಉಮೇಶ್ ನಾಯ್ಕ ಅವರನ್ನು ಶಿವಮೊಗ್ಗ "ಆಸರೆ" ಮಹಿಳಾ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
    ನಮ್ಮ ಹಿರಿಯರು ಗ್ರಾಮೀಣ ಸೊಗಡಿನ ಆಡು ಭಾಷೆಯಲ್ಲಿ ಜಾನಪದ ಪದಗಳನ್ನು ಕಟ್ಟುತ್ತಾ ಮನಸ್ಸನ್ನು ಹಗುರವಾಗಿಸಿಕೊಳ್ಳುತ್ತಿದ್ದರು. ಇಂತಹ ಜಾನಪದ ಕಲೆ ಪ್ರಸ್ತುತ ದಿನಮಾನಗಳಲ್ಲಿ ಕಣ್ಮರೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಮೂಲತಃ ದಾವಣಗೆರೆ ತಾಲೂಕು ಚಿನ್ನಸಮುದ್ರದ ನಿವಾಸಿ ಉಮೇಶ್‌ನಾಯ್ಕ ಅವರು ಜಾನಪದ ಕಲೆಯನ್ನು ಉಳಿಸಿಬೆಳೆಸುವ ಕಾಯಕದಲ್ಲಿ ತೊಡಗಿಸಿಕೊಂಡಿದ್ದಾರೆ.  
    ಯಾವುದೇ ಫಲಾಪೇಕ್ಷೆ ಇಲ್ಲದೆ ಪ್ರತಿ ಹಳ್ಳಿಹಳ್ಳಿಗೂ ಕಾಲ್ನಾಡಿಗೆಯಲ್ಲಿ ಸಂಚರಿಸಿ ಜಾನಪದ ಕಲೆ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಜೊತೆಗೆ ಕಲೆಯನ್ನು ಮೈಗೂಡಿಸಿಕೊಳ್ಳುವಂತೆ ಪ್ರೋತ್ಸಾಹಿಸುತ್ತಿದ್ದಾರೆ. ಇವರ ಕಲಾ ಸೇವೆಯನ್ನು ಗುರುತಿಸಿ "ಆಸರೆ" ಮಹಿಳಾ ಸಂಘ ಸನ್ಮಾನಿಸಿ ಗೌರವಿಸಿದೆ. ಸಂಘದ ಪದಾಧಿಕಾರಿಗಳು, ಮಹಿಳಾ ಪ್ರಮುಖರು ಉಪಸ್ಥಿತರಿದ್ದರು.  


ಜಾನಪದ ಕಲಾವಿದ ಉಮೇಶ್ ನಾಯ್ಕ
    ಲಂಬಾಣಿ ಸಂಸ್ಕೃತಿ ಮತ್ತು ಭಾಷಾ ಆಕಾಡೆಮಿಗೆ ನೇಮಕ :
    ಇವರ ಕಲಾ ಸೇವೆಯನ್ನು ಗುರುತಿಸಿ ಸರ್ಕಾರ ಲಂಬಾಣಿ ಸಂಸ್ಕೃತಿ ಮತ್ತು ಭಾಷಾ ಆಕಾಡೆಮಿ ಸದಸ್ಯರನ್ನಾಗಿ ನೇಮಕಗೊಳಿಸಿದೆ.
    ಇತ್ತೀಚೆಗೆ ನಡೆದ ಆಕಾಡೆಮಿಯ ಮೊದಲ ಸರ್ವ ಸದಸ್ಯರ ಸಭೆಯಲ್ಲಿ ರಾಜ್ಯದ ೩ ಮಂದಿಯನ್ನು ಸದಸ್ಯರನ್ನಾಗಿ ಆಯ್ಕೆ ಮಾಡಿಕೊಳ್ಳಲು ತೀರ್ಮಾನಿಸಲಾಗಿದ್ದು, ಈ ೩ ಜನರ ಪೈಕಿ ಉಮೇಶ್ ನಾಯ್ಕ ಸಹ ಒಬ್ಬರಾಗಿದ್ದಾರೆ. ಇವರಿಗೆ ಜನಪ್ರತಿನಿಧಿಗಳು, ಗಣ್ಯರು, ಜಾನಪದ ಕಲಾವಿದರು ಅಭಿನಂದಿಸಿದ್ದಾರೆ.

ಅಣ್ಣನಿಂದ ತಮ್ಮನ ಮೇಲೆ ಗುಂಡು


    ಭದ್ರಾವತಿ, ಜು. ೩: ದಾರಿ ಮಧ್ಯದಲ್ಲಿ ಹೂವಿನ ಗಿಡಗಳನ್ನು ನೆಟ್ಟು ಜಮೀನಿಗೆ ಹೋಗದಂತೆ ಅಡ್ಡಿಪಡಿಸುತ್ತಿದ್ದಾರೆಂದು ಆಕ್ರೋಶಗೊಂಡ ವ್ಯಕ್ತಿಯೋರ್ವ ತಮ್ಮನ ಕುಟುಂಬವನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊನೆಗೆ ಮನೆಯಲ್ಲಿದ್ದ ನಾಡಬಂದೂಕಿನಿಂದ ತಮ್ಮನ ಮೇಲೆ ಗುಂಡು ಹಾರಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
    ತಾಲೂಕಿನ ಸಿದ್ದರಮಟ್ಟಿ ಗ್ರಾಮದ ಮುನಿಸ್ವಾಮಿ ಎಂಬುವರು ತಮ್ಮ ಮುರುಗೇಶ್(೩೫) ಮೇಲೆ ಗುಂಡು ಹಾರಿಸಿದ್ದು, ಸದ್ಯ ಗುಂಡು ಎದೆಗೆ ಬೀಳದೆ ತೊಡೆಗೆ ತಗುಲಿದೆ. ಇದರಿಂದಾಗಿ ಪ್ರಾಣಾಪಾಯ ತಪ್ಪಿದೆ. ಗಾಯಗೊಂಡಿರುವ ಮುರುಗೇಶ್ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    ಘಟನೆ ವಿವರ :
    ಗ್ರಾಮದ ನಿವಾಸಿ ಆರ್ಮುಗಂ ಎಂಬುವರು ೨ ಎಕರೆ ಜಮೀನು ಹೊಂದಿದ್ದು, ಇವರು ನಿಧನ ಹೊಂದಿದ್ದ ನಂತರ ೭ ಜನ ಮಕ್ಕಳಿಗೆ ಜಮೀನು ಹಂಚಿಕೆಯಾಗಿದೆ. ಹಿರಿಯ ಮಗ ಮುನಿಸ್ವಾಮಿ ಮತ್ತು ಕಿರಿಯ ಮಗ ಮುರುಗೇಶ್ ಕುಟುಂಬದ ನಡುವೆ ಜಮೀನು ಸಂಬಂಧ ಗಲಾಟೆ ನಡೆಯುತ್ತಿದ್ದು, ಮುನಿಸ್ವಾಮಿ ಮಂಗಳವಾರ ಬೆಳಿಗ್ಗೆ  ತಮ್ಮನ ಪತ್ನಿ, ಮಗಳು ಹಾಗು ಮಾವನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವಿಚಾರ ತಿಳಿದು ಪ್ರಶ್ನಿಸಲು ಬಂದ ಮುರುಗೇಶ್ ಮೇಲೂ ಆಕ್ರೋಶಗೊಂಡು ಮನೆಯಲ್ಲಿದ್ದ ನಾಡಬಂದೂಕಿನಿಂದ ಗುಂಡು ಹಾರಿಸಲಾಗಿದೆ. ಸದ್ಯ ಗುಂಡು ಮುರುಗೇಶ್ ತೊಡಗೆ ತಗುಲಿದೆ ಎನ್ನಲಾಗಿದೆ.
    ಮುರುಗೇಶ್ ಮೊದಲು ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ತೆರಳಿ ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ವೀರಾಪುರ ಗ್ರಾಮದ ರೈತರ ಜಮೀನುಗಳಿಗೆ ಕಾಡಾ ಅಧ್ಯಕ್ಷೆ ಭೇಟಿ : ಕಾಲುವೆಗಳ ಪರಿಶೀಲನೆ

ಭದ್ರಾವತಿ ತಾಲೂಕಿನ ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ವೀರಾಪುರ ಗ್ರಾಮದ ರೈತರ ಜಮೀನು(ತೋಟ)ಗಳಿಗೆ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷೆ ಪವಿತ್ರ ರಾಮಯ್ಯ ಬುಧವಾರ ಭೇಟಿ ನೀಡಿ ಕಾಲುವೆಗಳ ಪರಿಶೀಲನೆ ನಡೆಸಿದರು.
    ಭದ್ರಾವತಿ, ಆ. ೩: ತಾಲೂಕಿನ ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ವೀರಾಪುರ ಗ್ರಾಮದ ರೈತರ ಜಮೀನು(ತೋಟ)ಗಳಿಗೆ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷೆ ಪವಿತ್ರ ರಾಮಯ್ಯ ಭೇಟಿ ನೀಡಿ ಕಾಲುವೆಗಳ ಪರಿಶೀಲನೆ ನಡೆಸಿದರು.
ವೀರಾಪುರ ರೈತರು ಈ ಹಿಂದೆ ಅಧ್ಯಕ್ಷರನ್ನು ಖುದ್ದಾಗಿ ಭೇಟಿಯಾಗಿ ಕಾಲುವೆಗಳ ಸಮಸ್ಯೆ ವಿವರಿಸುವ ಜೊತೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದ್ದರು.
     ಮನವಿಗೆ ಸ್ಪಂದಿಸಿರುವ ಅಧ್ಯಕ್ಷರು ಬುಧವಾರ ಖುದ್ದಾಗಿ ಸ್ಥಳ ವೀಕ್ಷಣೆ ಮಾಡಿ, ಸಂಬಂಧ ಪಟ್ಟ ಅಭಿಯಂತರರ ಜೊತೆ ಚರ್ಚಿಸಿ, ಕಾಲುವೆ ಕಾಮಗಾರಿಗೆ ಅಂದಾಜು ಮೊತ್ತದ ಪಟ್ಟಿ ಸಿದ್ದಪಡಿಸಿ ಕೊಡುವಂತೆ ಸೂಚಿಸಿದರು.   ನೀರಾವರಿ ಇಲಾಖೆ ಅಭಿಯಂತರರು, ಗ್ರಾಮದ ಪ್ರಮುಖರು, ರೈತರು ಉಪಸ್ಥಿತರಿದ್ದರು.

ಗೌರವ ಡಾಕ್ಟರೇಟ್ ಪದವಿ ಪುರಸ್ಕೃತ ರೇವಣಪ್ಪರಿಗೆ ಶಾಸಕರಿಂದ ಸನ್ಮಾನ, ಅಭಿನಂದನೆ

ಇಂಟರ್‌ನ್ಯಾಷನಲ್ ಪೀಸ್ ಯೂನಿವರ್ಸಿಟಿ(ಐಪಿಯು) ವಿಶ್ವ ವಿದ್ಯಾನಿಲಯದ ಗೌರವ ಡಾಕ್ಟರೇಟ್ ಪದವಿ ಪುರಸ್ಕೃತರಾದ ಭದ್ರಾವತಿ ತಾಲೂಕಿನ ಸುಲ್ತಾನ್‌ಮಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ರಾಜ್ಯ ಪ್ರಶಸ್ತಿ ಶಿಕ್ಷಕ, ಜಾನಪದ ಕಲಾವಿದ ಎಂ.ಆರ್ ರೇವಣಪ್ಪ ಅವರನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಸನ್ಮಾನಿಸಿ ಅಭಿನಂದಿಸಿದರು.
    ಭದ್ರಾವತಿ, ಆ. ೩ :  ಇಂಟರ್‌ನ್ಯಾಷನಲ್ ಪೀಸ್ ಯೂನಿವರ್ಸಿಟಿ(ಐಪಿಯು) ವಿಶ್ವ ವಿದ್ಯಾನಿಲಯದ ಗೌರವ ಡಾಕ್ಟರೇಟ್ ಪದವಿ ಪುರಸ್ಕೃತರಾದ ತಾಲೂಕಿನ ಸುಲ್ತಾನ್‌ಮಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ರಾಜ್ಯ ಪ್ರಶಸ್ತಿ ಶಿಕ್ಷಕ, ಜಾನಪದ ಕಲಾವಿದ ಎಂ.ಆರ್ ರೇವಣಪ್ಪ ಅವರನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಸನ್ಮಾನಿಸಿ ಅಭಿನಂದಿಸಿದರು.
    ರೇವಣಪ್ಪ ಅವರು ಶಿಕ್ಷಕ ವೃತ್ತಿಯೊಂದಿಗೆ ಜಾನಪದ ಸಾಹಿತ್ಯ, ರಂಗಭೂಮಿ ಕಲೆಯನ್ನು ಸಹ ಮೈಗೂಡಿಸಿಕೊಂಡಿದ್ದು, ರಾಷ್ಟ್ರ ಹಾಗು ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಇವರ ಜೀವಮಾನ ಸಾಧನೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ಪದವಿ ನೀಡಲಾಗಿದೆ.
    ರೇವಣಪ್ಪ ಅವರನ್ನು ಸನ್ಮಾನಿಸಿದ ಶಾಸಕರು, ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ ಜಾನಪದ ಸಾಹಿತ್ಯ, ರಂಗಭೂಮಿ ಕಲೆಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
    ಯುವ ಮುಖಂಡ ಬಿ.ಎಸ್ ಗಣೇಶ್, ಬುಲೆಟ್ ಪ್ರಕಾಶ್, ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಮಾಜಿ ರಾಜ್ಯ ಸಂಘಟನಾ ಕಾರ್ಯದರ್ಶಿ ಭಾರತಿ, ಬಾಳೆಮಾರನಹಳ್ಳಿ ಪ್ರೌಢ ಶಾಲೆ ಮುಖ್ಯ ಶಿಕ್ಷಕ ಗಣೇಶ್, ತಾಲೂಕು ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ಸದದಸ್ಯರುಗಳಾದ  ಡಿ.ಎಸ್ ಬಸವಂತರಾವ್ ದಾಳೆ, ಆರ್.ಟಿ ಲೋಹಿತ್, ಯು. ಮಹಾದೇವಪ್ಪ, ಎ.ಕೆ ಲಿಂಗರಾಜು, ದೇವರಾಜ್ ನಾಯ್ಕ್, ಅನವೇರಿ ಜಗದೀಶ್, ನರಸಿಂಹಮೂರ್ತಿ, ಸಿ. ಚನ್ನಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ರಾಜ್ಯಾಧ್ಯಕ್ಷ ಬಿ. ಸಿದ್ದಬಸಪ್ಪರಿಗೆ ವಿಇಎಸ್ ವಿದ್ಯಾಸಂಸ್ಥೆಯಿಂದ ಸನ್ಮಾನ


ಭದ್ರಾವತಿ ಹೊಸ ಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಬಿ. ಸಿದ್ದಬಸಪ್ಪ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಅವರನ್ನು ವಿದ್ಯಾಸಂಸ್ಥೆ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಆ. ೩: ನಗರದ ಹೊಸ ಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಬಿ. ಸಿದ್ದಬಸಪ್ಪ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಅವರನ್ನು ವಿದ್ಯಾಸಂಸ್ಥೆ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.
    ಬಿ. ಸಿದ್ದಬಸಪ್ಪ ಅವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರೂ ಸಹ ಆಗಿದ್ದು, ಇತ್ತೀಚೆಗೆ ನಡೆದ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
    ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಬಿ.ಎಲ್ ರಂಗಸ್ವಾಮಿ, ನಿರ್ದೇಶಕ ಎ ಜೆ ರಂಗನಾಥ ಪ್ರಸಾದ್,  ಆಡಳಿತಾಧಿಕಾರಿ ಡಾ. ಎಸ್ ಪಿ ರಾಕೇಶ್, ದೈಹಿಕ ಶಿಕ್ಷಣ ನಿರ್ದೇಶಕ ಶಿವಲಿಂಗೇಗೌಡ, ಪಿಯು ವಿಭಾಗದ ಪ್ರಾಂಶುಪಾಲರು, ಮುಖ್ಯ ಶಿಕ್ಷಕರು, ಉಪನ್ಯಾಸಕ ವರ್ಗ, ಶಿಕ್ಷಕ ವರ್ಗ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Tuesday, August 2, 2022

ಪ್ರಸ್ತುತ ಆಂಗ್ಲ ಭಾಷೆ ಕಲಿಕೆ ಬಹುಮುಖ್ಯ : ಬಿ. ಸಿದ್ದಬಸಪ್ಪ

ಭದ್ರಾವತಿ ಹೊಸಸೇತುವೆ ರಸ್ತೆಯಲ್ಲಿರುವ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ  ಕಛೇರಿ ಸಹಯೋಗದೊಂದಿಗೆ ಆಂಗ್ಲ ಭಾಷಾ ಶಿಕ್ಷಕರ ವೇದಿಕೆ (ಸ್ಟೀಲ್‌ಟೌನ್ ಇಂಗ್ಲೀಷ್ ಟೀಚರ್‍ಸ್ ಪೋರಮ್) ವತಿಯಿಂದ ಆಯೋಜಿಸಲಾಗಿದ್ದ ಆಂಗ್ಲ ಭಾಷಾ ಕಾರ್ಯಾಗಾರದಲ್ಲಿ ಬಿ.ಸಿದ್ದಬಸಪ್ಪ, ಕೆ. ಬಸವರಾಜಪ್ಪ ಮತ್ತು ಎ.ಕೆ ನಾಗೇಂದ್ರಪ್ಪ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. 
    ಭದ್ರಾವತಿ, ಆ. ೨: ಪ್ರಸ್ತುತ ಆಂಗ್ಲ ಭಾಷೆ ಕಲಿಕೆ ಬಹುಮುಖ್ಯವಾಗಿದ್ದು, ಭವಿಷ್ಯದಲ್ಲಿ ಇದರಿಂದ ಹೆಚ್ಚಿನ ಪ್ರಯೋಜನವಾಗಲಿದೆ ಎಂದು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಬಿ. ಸಿದ್ದಬಸಪ್ಪ ಹೇಳಿದರು.
    ಅವರು ನಗರದ ಹೊಸಸೇತುವೆ ರಸ್ತೆಯಲ್ಲಿರುವ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ  ಕಛೇರಿ ಸಹಯೋಗದೊಂದಿಗೆ ಆಂಗ್ಲ ಭಾಷಾ ಶಿಕ್ಷಕರ ವೇದಿಕೆ (ಸ್ಟೀಲ್‌ಟೌನ್ ಇಂಗ್ಲೀಷ್ ಟೀಚರ್‍ಸ್ ಪೋರಮ್) ವತಿಯಿಂದ ಆಯೋಜಿಸಲಾಗಿದ್ದ ಆಂಗ್ಲ ಭಾಷಾ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
    ಕಲಿಕಾ ಚೇತರಿಕೆ ಕಾರ್ಯಕ್ರಮದಲ್ಲಿ ಆರಂಭದಲ್ಲಿ ಇದ್ದ ಎಲ್ಲಾ ತೊಡಕುಗಳು ಇದೀಗ ಬಗೆಹರಿದಿವೆ. ಇಂಗ್ಲೀಷ್ ಕಲಿಕಾ ಚೇತರಿಕೆಯಲ್ಲಿರುವ ಎಲ್ಲಾ ಚಟುವಟಿಕೆಗಳು ಪಠ್ಯ ಪುಸ್ತಕಕ್ಕೆ ಪೂರಕವಾಗಿವೆ. ಒಟ್ಟಾರೆ ಕಲಿಕಾ ನ್ಯೂನತೆಗಳು ಇದರಿಂದ ದೂರವಾಗಿ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡುತ್ತದೆ ಎಂದರು.
    ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ನಿರ್ದೇಶಕ ಕೆ. ಬಸವರಾಜಪ್ಪ, ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಡಾ. ಎಸ್.ಪಿ ರಾಕೇಶ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ನವೀದ್ ಅಹಮದ್ ಪರ್ವೀಜ್, ದೈಹಿಕ ಶಿಕ್ಷಣ ನಿರ್ದೇಶಕ ಶಿವಲಿಂಗೇಗೌಡ, ಶಿಕ್ಷಣ ಸಂಯೋಜಕ ರವಿಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
     ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ದಿವಾಕರ್ ಎಂ, ಜಯಕುಮಾರ್, ಇಮ್ತಿಯಾಜ್, ಪ್ರಕಾಶ್ ಮತ್ತು ಅಶ್ವಿನಿ ಜಾಧವ್ ಪಾಲ್ಗೊಂಡಿದ್ದರು.