Monday, August 8, 2022

ಭಾರಿ ಮಳೆಗೆ ಗೋಡೆ ಕುಸಿದು ಓರ್ವ ಗೃಹಿಣಿ ಮೃತ

    ಭದ್ರಾವತಿ, ಆ. ೮: ತಾಲೂಕಿನಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಸೋಮವಾರ ಕಾಚಗೊಂಡನಹಳ್ಳಿ ಗ್ರಾಮದ ಮನೆಯೊಂದರ ಗೋಡೆ ಕುಸಿದು ಬಿದ್ದ ಪರಿಣಾಮ ಗೃಹಿಣಿಯೋರ್ವಳು ಮೃತಪಟ್ಟಿರುವ ಘಟನೆ ನಡೆದಿದೆ.
    ನಗರಸಭೆ ವ್ಯಾಪ್ತಿಯ ಕಾಚಗೊಂಡನಹಳ್ಳಿ ಗ್ರಾಮದ ನಿವಾಸಿ ಭಾಗ್ಯಮ್ಮ(62) ಸ್ಥಳದಲ್ಲಿಯೇ ಮೃತಪಟ್ಟಿದ್ದು, ಕೃಷ್ಣಮೂರ್ತಿ  ಎಂಬುವರು ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
    ಮತ್ತೊಂದೆಡೆ ಭದ್ರಾ ಜಲಾಶಯ ವ್ಯಾಪ್ತಿಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ಹೊಳೆಹೊನ್ನೂರು ಗೇಜ್ ಮಾಹಿತಿಯಂತೆ ರಾತ್ರಿ ೧೦ರ ವೇಳೆಗೆ ಜಲಾಶಯದ ಒಳ ಹರಿವು ೭೬,೦೦೦ ಕ್ಯೂಸೆಕ್ಸ್ ಹೊಂದಿದ್ದು, ೧೮೩.೮ ಅಡಿ ಭರ್ತಿಯಾಗಿದೆ. ಮುನ್ನಚ್ಚರಿಕೆ ಕ್ರಮವಾಗಿ ಜಲಾಶಯದ ೪ ಕ್ರಸ್ಟ್ ಗೇಟ್‌ಗಳನ್ನು ೧೦ ಅಡಿ ತೆರೆದು ೫೬,೧೦೪.೨೯ ಕ್ಯೂಸೆಕ್ಸ್ ನೀರು ಹೊರ ಬಿಡಲಾಗುತ್ತಿದೆ ಎಂದು ತಹಸೀಲ್ದಾರ್ ಆರ್. ಪ್ರದೀಪ್ ತಿಳಿಸಿದ್ದಾರೆ.

ಆರ್‌ಎಎಫ್ ವತಿಯಿಂದ ಹರ್ ಘರ್ ತಿರಂಗಾ ಅಭಿಯಾನ ಜಾಗೃತಿ

ರಾಷ್ಟ್ರ ಧ್ವಜ ಖರೀದಿ ಮಾಡಿ ಜಾಗೃತಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಿಗೆ ರಾಷ್ಟ್ರ ಧ್ವಜ ವಿತರಣೆ

ಭದ್ರಾವತಿ ಮಿಲ್ಟ್ರಿಕ್ಯಾಂಪ್‌ನಲ್ಲಿರುವ ರ್‍ಯಾಪಿಡ್ ಆಕ್ಷನ್ ಫೋರ್ಸ್(ಆರ್‌ಎಎಫ್) ೯೭ ಬೆಟಾಲಿಯನ್ ವತಿಯಿಂದ ೭೫ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ ಅಂಗವಾಗಿ ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸೋಮವಾರ ರಾಷ್ಟ್ರ ಧ್ವಜಗಳನ್ನು ವಿತರಿಸಲಾಯಿತು.
    ಭದ್ರಾವತಿ, ಆ. ೮: ನಗರದ ಮಿಲ್ಟ್ರಿಕ್ಯಾಂಪ್‌ನಲ್ಲಿರುವ ರ್‍ಯಾಪಿಡ್ ಆಕ್ಷನ್ ಫೋರ್ಸ್(ಆರ್‌ಎಎಫ್) ೯೭ ಬೆಟಾಲಿಯನ್ ವತಿಯಿಂದ ೭೫ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ ಅಂಗವಾಗಿ ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸೋಮವಾರ ರಾಷ್ಟ್ರ ಧ್ವಜಗಳನ್ನು ವಿತರಿಸಲಾಯಿತು.
    ಕಾರ್ಯಕ್ರಮಕ್ಕೆ ತಹಸೀಲ್ದಾರ್ ಆರ್. ಪ್ರದೀಪ್ ಚಾಲನೆ ನೀಡಿದರು. ರಂಗಪ್ಪ ವೃತ್ತ, ತಾಲೂಕು ಕಛೇರಿ ರಸ್ತೆ, ಸಿ.ಎನ್ ರಸ್ತೆ, ಹೊಸಮನೆ ಮುಖ್ಯ ರಸ್ತೆಗಳಲ್ಲಿ ಅಂಗಡಿ ಮುಂಗಟ್ಟುಗಳ ಮಾಲೀಕರಿಗೆ ರಾಷ್ಟ್ರ ಧ್ವಜಗಳನ್ನು ವಿತರಿಸಿ ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸುವಂತೆ ಜಾಗೃತಿ ಮೂಡಿಸಲಾಯಿತು.
    ಆರ್‌ಎಎಫ್ ೯೭ ಬೆಟಾಲಿಯನ್ ಅಸಿಸ್ಟೆಂಟ್ ಕಮಾಂಡೆಂಟ್ ಭಾರತಿ, ಎಎಸ್‌ಐ ಈಶ್ವರ್,  ಪೊಲೀಸ್ ಇನ್ಸ್‌ಪೆಕ್ಟರ್ ರವಿಕುಮಾರ್, ಮಾಜಿ ಸೈನಿಕರ ಸಂಘದ ಪ್ರಮುಖರಾದ ಸುಬೇದಾರ್ ಗುಳ್‌ಗುಳೆ, ಬೋರೇಗೌಡ, ಉಮೇಶ್, ರಮೇಶ್, ಕೃಷ್ಣೋಜಿರಾವ್, ಗಿರೀಶ್, ಶ್ರೀಧರ್, ಕವಿತಾರಾವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ಭದ್ರಾವತಿ ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು, ಸದಸ್ಯರು ಸೋಮವಾರ ರಾಷ್ಟ್ರ ಧ್ವಜ ಖರೀದಿಸಿ ಪ್ರದರ್ಶಿಸುವ ಮೂಲಕ ಜಾಗೃತಿ ಮೂಡಿಸಿದರು.
    ರಾಷ್ಟ್ರ ಧ್ವಜ ಖರೀದಿ :
    ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು, ಸದಸ್ಯರು ಸೋಮವಾರ ರಾಷ್ಟ್ರ ಧ್ವಜ ಖರೀದಿಸಿ ಪ್ರದರ್ಶಿಸುವ ಮೂಲಕ ಜಾಗೃತಿ ಮೂಡಿಸಿದರು.
    ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ತಮ್ಮ ಸ್ವಂತ ಹಣದಲ್ಲಿ ರಾಷ್ಟ್ರ ಖರೀದಿಸಿ ದೇಶದ ೭೫ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ ಅವಿಸ್ಮರಣೀಯವಾಗಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ ಅಭಿಯಾನ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
    ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್ ಕುಮಾರ್, ಪೌರಾಯುಕ್ತ ಮನುಕುಮಾರ್, ಸಹಾಯಕ ಕಾರ್ಯಪಾಲಕ ಅಭಿಯಂತರ ಪ್ರಭಾಕರ್, ಕಂದಾಯಾಧಿಕಾರಿ ಎಂ.ಎಸ್ ರಾಜ್‌ಕುಮಾರ್, ವ್ಯವಸ್ಥಾಪಕಿ ಸುನೀತಾಕುಮಾರಿ, ಸಮುದಾಯ ಸಂಘಟನಾಧಿಕಾರಿ ಸುವಾಸಿನಿ ಸೇರಿದಂತೆ ನಗರಸಭೆ ಸದಸ್ಯರು, ಸಿಬ್ಬಂದಿಗಳು, ಪೌರಕಾರ್ಮಿಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ಭದ್ರಾವತಿ ತಾಲೂಕಿನಾದಾದ್ಯಂತ ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಭಾರತೀಯ ಜನತಾ ಪಕ್ಷ ತಾಲೂಕು ಮಂಡಲ ಮುಂದಾಗಿದ್ದು, ಬೂತ್‌ಮಟ್ಟದಲ್ಲಿ ಅಭಿಯಾನ ಕುರಿತು ಜಾಗೃತಿ ಮೂಡಿಸಲು ಮಹಾಶಕ್ತಿ ಕೇಂದ್ರದ ಅಧ್ಯಕ್ಷರುಗಳಿಗೆ ರಾಷ್ಟ್ರ ಧ್ವಜ ವಿತರಿಸಲಾಗಿದೆ.
    ಮಹಾಶಕ್ತಿ ಕೇಂದ್ರದ ಅಧ್ಯಕ್ಷರಿಗೆ ರಾಷ್ಟ್ರ ಧ್ವಜ ವಿತರಣೆ :
    ತಾಲೂಕಿನಾದಾದ್ಯಂತ ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಭಾರತೀಯ ಜನತಾ ಪಕ್ಷ ತಾಲೂಕು ಮಂಡಲ ಮುಂದಾಗಿದ್ದು, ಬೂತ್‌ಮಟ್ಟದಲ್ಲಿ ಅಭಿಯಾನ ಕುರಿತು ಜಾಗೃತಿ ಮೂಡಿಸಲು ಮಹಾಶಕ್ತಿ ಕೇಂದ್ರದ ಅಧ್ಯಕ್ಷರುಗಳಿಗೆ ರಾಷ್ಟ್ರ ಧ್ವಜ ವಿತರಿಸಲಾಗಿದೆ.
ವೀರಭದ್ರೇಶ್ವರ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಪ್ರಮುಖರು ಅಭಿಯಾನ ಕುರಿತು ಹೆಚ್ಚಿನ ಮಾಹಿತಿ ನೀಡುವ ಮೂಲಕ ಯಶಸ್ವಿಗೊಳಿಸುವಂತೆ ಕೋರಿದರು.

ಸಣ್ಣ ಸಣ್ಣ ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಮಾರಾಟ ನಿಷೇಧಿಸಿ : ಮಕ್ಕಳಲ್ಲಿ ಜಾಗೃತಿ ಮೂಡಿಸಿ

ಭದ್ರಾವತಿ ನಗರದೆಲ್ಲೆಡೆ ಅಂಗಡಿ ಮುಂಗಟ್ಟುಗಳಲ್ಲಿ ಸಣ್ಣ ಸಣ್ಣ ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಮಾರಾಟ ಮಾಡುತ್ತಿರುವುದು ಕಂಡು ಬರುತ್ತಿದ್ದು, ತಕ್ಷಣ ಮಾರಾಟ ಮಾಡುವುದನ್ನು ತಡೆಗಟ್ಟುವ ಮೂಲಕ ಮಕ್ಕಳಲ್ಲಿ ರಾಷ್ಟ್ರ ಧ್ವಜದ ಬಗ್ಗೆ ಅರಿವು ಮೂಡಿಸಬೇಕೆಂದು ಆಗ್ರಹಿಸಿ ಸೋಮವಾರ ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಅವರಿಗೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಆ. ೮: ನಗರದೆಲ್ಲೆಡೆ ಅಂಗಡಿ ಮುಂಗಟ್ಟುಗಳಲ್ಲಿ ಸಣ್ಣ ಸಣ್ಣ ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಮಾರಾಟ ಮಾಡುತ್ತಿರುವುದು ಕಂಡು ಬರುತ್ತಿದ್ದು, ತಕ್ಷಣ ಮಾರಾಟ ಮಾಡುವುದನ್ನು ತಡೆಗಟ್ಟುವ ಮೂಲಕ ಮಕ್ಕಳಲ್ಲಿ ರಾಷ್ಟ್ರ ಧ್ವಜದ ಬಗ್ಗೆ ಅರಿವು ಮೂಡಿಸಬೇಕೆಂದು ಆಗ್ರಹಿಸಿ ಸೋಮವಾರ ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಅವರಿಗೆ ಮನವಿ ಸಲ್ಲಿಸಲಾಯಿತು.
    ದೇಶದ ರಾಷ್ಟ್ರ ಧ್ವಜ ತನ್ನದೇ ಆದ ವಿಶಿಷ್ಟತೆ ಹಾಗು ಗೌರವ ಸ್ಥಾನಮಾನಗಳನ್ನು ಹೊಂದಿದ್ದು, ಇಂತಹ ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡುವಂತೆ ಪ್ಲಾಸ್ಟಿಕ್ ಬಳಸಿ ಸಣ್ಣ ಸಣ್ಣ ಧ್ವಜಗಳನ್ನು ತಯಾರಿಸಿ ಮಾರಾಟ ಮಾಡುತ್ತಿರುವುದು ಕಂಡು ಬರುತ್ತಿದೆ. ಪ್ರಾಥಮಿಕ ಹಂತದ ಕೆಲವು ಶಾಲಾ ಮಕ್ಕಳಿಗೆ ದೇಶದ ರಾಷ್ಟ್ರ ಧ್ವಜದ ಬಗ್ಗೆ ಅರಿವು ಕಡಿಮೆ ಇದ್ದು, ಮಕ್ಕಳು ಧ್ವಜವನ್ನು ಎಲ್ಲಿ ಬೇಕೆಂದರಲ್ಲಿ ಹಾಕುವ ಸಾಧ್ಯತೆ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಮಕ್ಕಳಲ್ಲಿ ರಾಷ್ಟ್ರ ಪ್ರೇಮ, ಗೌರವ ಮತ್ತು ರಕ್ಷಣೆ ಬಗ್ಗೆ ಅರಿವು ಮೂಡಿಸಲು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಬೇಕೆಂದು ಮನವಿ ಮಾಡಲಾಯಿತು.  
    ಸಣ್ಣ ಸಣ್ಣ ಪ್ಲಾಸ್ಟಿಕ್ ಧ್ವಜಗಳನ್ನು ಮಾರಾಟ ಮಾಡುವುದು ಖಂಡನೀಯವಾಗಿದ್ದು, ಪ್ಲಾಸ್ಟಿಕ್ ಪರಿಸರಕ್ಕೆ ಮಾರಕವಾಗಿದೆ. ಈಗಾಗಲೇ ಸರ್ಕಾರ ಪ್ಲಾಸ್ಟಿಕ್ ನಿಷೇಧಗೊಳಿಸಿ ಆದೇಶ ಹೊರಡಿಸಿದೆ. ಈ ಹಿನ್ನಲೆಯಲ್ಲಿ ಪ್ಲಾಸ್ಟಿಕ್ ಧ್ವಜಗಳನ್ನು ಮಾರಾಟ ಮಾಡದಂತೆ ಅಂಗಡಿಮುಂಗಟ್ಟುಗಳಿಗೆ ಆದೇಶಿಸಬೇಕೆಂದು ಆಗ್ರಹಿಸಲಾಗಿದೆ.
    ವೇದಿಕೆ ಅಧ್ಯಕ್ಷೆ ಜಗದೀಶ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಪ್ರಮುಖರಾದ ನಗರಸಭೆ ಮಾಜಿ ಸದಸ್ಯ ಫ್ರಾನ್ಸಿಸ್, ಮಾಜಿ ಸೈನಿಕ ರವಿ, ಬಿ.ಆರ್ ಮಂಜುಳ ರಾಮಚಂದ್ರ, ಸುಮಿತ್ರಾ ಅಂಬೋರೆ, ಬಿ.ಕೆ ಗೀತಾ, ಸತ್ಯ ಜಗದೀಶ್, ಬಿ.ಎಂ ಅನಿತಾ, ಪ್ರಸನ್ನಕುಮಾರ್, ಸುಬ್ಬು, ರಾಜೇಶ್, ಅಶೋಕ್, ಆರ್. ಭೂಪಾಲ, ಶ್ರೀನಿವಾಸ್ ಮತ್ತು ಪುರುಷೋತ್ತಮ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಎಎಪಿ ಅಧ್ಯಕ್ಷರಾಗಿ ಡಿ.ಎಸ್ ಪರಮೇಶ್ವರ ಆಚಾರ್ ನೇಮಕ

ಡಿ.ಎಸ್ ಪರಮೇಶ್ವರ ಆಚಾರ್
    ಭದ್ರಾವತಿ, ಆ. ೮: ಆಮ್ ಆದ್ಮಿ ಪಾರ್ಟಿ(ಎಎಪಿ) ತಾಲೂಕು ಅಧ್ಯಕ್ಷರಾಗಿ ಪಕ್ಷದ ಹಿರಿಯ ಕಾರ್ಯಕರ್ತರಾದ ಡಿ.ಎಸ್ ಪರಮೇಶ್ವರ ಆಚಾರ್ ಅವರನ್ನು ನೇಮಕಗೊಳಿಸಲಾಗಿದೆ.
    ಪಕ್ಷದ ಜಿಲ್ಲಾ ಸಂಘಟನಾ ಸಂಯೋಜಕ ನವಿಲೇಶ್ ಅವರು ಪಕ್ಷದ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕಗೊಳಿಸಿದ್ದಾರೆ.
    ಸುಮಾರು ೮ ವರ್ಷಗಳಿಂದ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಡಿ.ಎಸ್ ಪರಮೇಶ್ವರ ಆಚಾರ್ ಅವರನ್ನು ಅಧ್ಯಕ್ಷರನ್ನಾಗಿ, ಚಂದರಪ್ಪ ಅವರನ್ನು ಗೌರವ ಅಧ್ಯಕ್ಷರನ್ನಾಗಿ, ಪ್ರಧಾನ ಕಾರ್ಯದರ್ಶಿಯಾಗಿ ಎ. ಮಸ್ತಾನ್, ಮಾಧ್ಯಮ ಸಲಹೆಗಾರರಾಗಿ ಅಬ್ದುಲ್ ಖದೀರ್, ಅಂತರಜಾಲತಾಣಗಳ ವಕ್ತಾರರಾಗಿ ಟಿ.ವಿ ಜೋಸೆಫ್ ಹಾಗು ಮಹಿಳಾ ಘಟಕದ ಅಧ್ಯಕ್ಷರಾಗಿ ರೇಷ್ಮಾಬಾನು ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.
    ಮುಂಬರುವ ೨೦೨೪ರ ವಿಧಾನಸಭಾ ಚುನಾವಣೆಗೆ ಈಗಾಗಲೇ ಯುವ ಮುಖಂಡ, ಉದ್ಯಮಿ ಮಾರುತಿ ಮೆಡಿಕಲ್ ಆನಂದ್ ನೇತೃತ್ವದಲ್ಲಿ ಗ್ರಾಮಾಂತರ ಭಾಗದಲ್ಲಿ ಪ್ರಚಾರ ಕಾರ್ಯ ಆರಂಭಗೊಂಡಿದೆ. ಪ್ರತಿ ಮನೆ ಮನೆಗೆ ತೆರಳಿ ಪಕ್ಷದ ಸಾಧನೆಗಳು ಹಾಗು ಭವಿಷ್ಯದಲ್ಲಿ ಪಕ್ಷ ಹೊಂದಿರುವ ಆಶಯಗಳನ್ನು ಮನವರಿಕೆ ಮಾಡಿಕೊಡಲಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ಇದೀಗ ನೂತನ ಪದಾಧಿಕಾರಿಗಳನ್ನು ನೇಮಕಗೊಳಿಸಲಾಗಿದೆ.

ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಭದ್ರಾವತಿ ಬಿ.ಎಚ್ ರಸ್ತೆ ಅಂಡರ್ ಬ್ರಿಡ್ಜ್ ಬಳಿ ಅಂಬೇಡ್ಕರ್ ವೃತ್ತದಲ್ಲಿ ಬೆಲೆ ಏರಿಕೆ ಖಂಡಿಸಿ ಸೋಮವಾರ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
    ಭದ್ರಾವತಿ, ಆ. ೮: ನಗರದ ಬಿ.ಎಚ್ ರಸ್ತೆ ಅಂಡರ್ ಬ್ರಿಡ್ಜ್ ಬಳಿ ಅಂಬೇಡ್ಕರ್ ವೃತ್ತದಲ್ಲಿ ಬೆಲೆ ಏರಿಕೆ ಖಂಡಿಸಿ ಸೋಮವಾರ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. 
ಪ್ರತಿಭಟನೆಯಲ್ಲಿ ಪ್ರಮುಖರು ಮಾತನಾಡಿ, ಬಿಜೆಪಿ ಸರ್ಕಾರಕ್ಕೆ ಬಡವರ ಬಗ್ಗೆ ಕಾಳಜಿ ಇಲ್ಲವಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಬಡ ಜನರು ಜೀವನ ನಡೆಸುವುದು ಅಸಾಧ್ಯವಾಗಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬಡ ಜನರಿಗೆ ಉಚಿತ ಅಕ್ಕಿ, ಕಡಿಮೆ ದರದಲ್ಲಿ ಅಡುಗೆ ಅನಿಲ ವಿತರಣೆ ಸೇರಿದಂತೆ ಬಡ ಜನರಿಗೆ ಅನುಕೂಲ ಕಲ್ಪಿಸುವ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿತ್ತು. ಈ ಹಿನ್ನಲೆಯಲ್ಲಿ ಮುಂದಿನ ದಿನಗಳಲ್ಲಿ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕೆಂದು ಆಗ್ರಹಿಸಿದರು.
ನಗರ ಸಭೆ ಉಪಾಧ್ಯಕ್ಷ ಚನ್ನಪ್ಪ, ಸದಸ್ಯರಾದ ಲತಾ ಚಂದ್ರಶೇಖರ್, ಕಾಂತರಾಜ್, ಮಾಜಿ ಸದಸ್ಯ ಆಂಜನಪ್ಪ,  ಪ್ರಮುಖರಾದ ಅಮೀರ್‌ಜಾನ್, ಬಿ. ಗಂಗಾಧರ್, ನಾಗರಾಜ್, ಕೃಷ್ಣಾನಾಯ್ಕ್, ಸಚಿನ್ ಸಿಂಧ್ಯಾ, ಜಿ. ವಿನೋದ್‌ಕುಮಾರ್, ಅಫ್ತಾಬ್ ಅಹಮದ್, ಅಮೋಸ್, ತಬ್ರೇಜ್ ಖಾನ್, ಅಭಿಷೇಕ್, ಸಜ್ಜದ್, ಹರೀಶ್, ಸಯ್ಯದ್, ಕೃಷ್ಣ, ಜಬಿವುಲ್ಲಾ ವಿನಯ್(ಗುಂಡ), ಜಂಕ್ಷನ್ ಇಮ್ರಾನ್  ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 

Sunday, August 7, 2022

ಭದ್ರಾವತಿ ನಗರಸಭೆ ವತಿಯಿಂದ ಮಳಿಗೆಗಳ ತೆರವು ಕಾರ್ಯಚರಣೆ


ಭದ್ರಾವತಿ ಹಳೇನಗರದ ಸಂತೆ ಮೈದಾನದಲ್ಲಿರುವ ನಗರಸಭೆಗೆ ಯಾವುದೇ ರೀತಿ ಆದಾಯವಿಲ್ಲದ ಸುಮಾರು ೭-೮ ಮಳಿಗೆಗಳನ್ನು ಸೋಮವಾರ ನಗರಸಭೆ ಪೌರಾಯುಕ್ತ ಮನು ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ತೆರವುಗೊಳಿಸಲಾಯಿತು.
    ಭದ್ರಾವತಿ: ಹಳೇನಗರದ ಸಂತೆ ಮೈದಾನದಲ್ಲಿರುವ ನಗರಸಭೆಗೆ ಯಾವುದೇ ರೀತಿ ಆದಾಯವಿಲ್ಲದ ಸುಮಾರು ೭-೮ ಮಳಿಗೆಗಳನ್ನು ಸೋಮವಾರ ನಗರಸಭೆ ಪೌರಾಯುಕ್ತ ಮನು ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ತೆರವುಗೊಳಿಸಲಾಯಿತು.
  ಹಲವಾರು ವರ್ಷಗಳಿಂದ ನಗರಸಭೆಗೆ ಯಾವುದೇ ಕಂದಾಯ ಪಾವತಿ ಮಾಡದೆ ಅಕ್ರಮವಾಗಿ ಮಳಿಗೆಗಳನ್ನು ನಿರ್ಮಿಸಿಕೊಂಡು ವ್ಯಾಪಾರದಲ್ಲಿ ತೊಡಗಿಸಿಕೊಂಡಿದ್ದರು. ಈ ಹಿನ್ನಲೆಯಲ್ಲಿ ಜೆಸಿಬಿ ಯಂತ್ರದ ಮೂಲಕ ಸುಮಾರು ೨ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ತೆರವುಗೊಳಿಸಲಾಯಿತು. 
ತೆರವುಗೊಂಡ ಸ್ಥಳದಲ್ಲಿ ಪ್ಲಾಟ್ ಫಾರಂ ನಿರ್ಮಿಸಿ ಸಂತೆ ಮೈದಾನದಲ್ಲಿ ರಸ್ತೆ ಪಕ್ಕದಲ್ಲಿ ಮಾರಾಟ ಮಾಡುವ ವ್ಯಾಪಾರಸ್ಥರಿಗೆ ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ನಗರಸಭೆ ಅಧಿಕಾರಿಗಳು ಪತ್ರಿಕೆಗೆ ಮಾಹಿತಿ ನೀಡಿದರು.
ಹಿರಿಯ ಆರೋಗ್ಯ ನಿರೀಕ್ಷಕ ಆರ್.ಬಿ ಸತೀಶ್, ಕಿರಿಯ ಆರೋಗ್ಯ ಸಹಾಯಕಿ ಶೃತಿ, ಪ್ರಭಾರ ಸಹಾಯಕ ಕಾರ್ಯಪಾಲಕ ಇಂಜಿಯರ್ ಪ್ರಸಾದ್, ಇಂಜಿನಿಯರ್ ಸಂತೋಷ್ ಪಾಟೀಲ್, ಪ್ರಭಾಕರ್ ಸೇರಿದಂತೆ ಇನ್ನಿತರ ಅಧಿಕಾರಿಗಳು, ಸಿಬ್ಬಂದಿಗಳು, ಪೌರಕಾರ್ಮಿಕರು ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು. ಹಳೇನಗರ ಪೊಲೀಸ್ ಠಾಣೆ ಸಿಬ್ಬಂದಿ ಬಂದೋಬಸ್ತ್ ಕೈಗೊಂಡಿದ್ದರು.



೭೫ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ ಅದ್ಭುತ ಕಲ್ಪನೆ : ಜಿ. ಧರ್ಮಪ್ರಸಾದ್

ಭದ್ರಾವತಿ ಹಳೇನಗರದ ತಾಲೂಕು ಕಛೇರಿ ರಸ್ತೆಯಲ್ಲಿರುವ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಭಾರತ ಮಾತೆಯ ಭಾವಚಿತ್ರ ಬಿಡುಗಡೆಗೊಳಿಸಲಾಯಿತು.
    ಭದ್ರಾವತಿ, ಆ. ೭: ದೇಶದ ೭೫ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ ಪ್ರಪಂಚದಲ್ಲಿ ಯಾರೂ ಸಹ ನಿರೀಕ್ಷಿಸಲು ಸಾಧ್ಯವಿಲ್ಲ. ಭವಿಷ್ಯದಲ್ಲೂ ಇಂತಹ ಆಚರಣೆ ಅಸಾಧ್ಯ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಹೇಳಿದರು.
    ಅವರು ಭಾನುವಾರ ಹಳೇನಗರದ ತಾಲೂಕು ಕಛೇರಿ ರಸ್ತೆಯಲ್ಲಿರುವ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
    ಪ್ರಧಾನಿ ನರೇಂದ್ರ ಮೋದಿ ಅವರು, ಈ ಬಾರಿ ೭೫ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆಯನ್ನು ವಿಶಿಷ್ಟವಾಗಿ ಆಚರಿಸುವ ಮೂಲಕ ಭಾರತ ಮಾತೆಗೆ ಗೌರವ ತಂದುಕೊಡುವ ನಿಟ್ಟಿನಲ್ಲಿ ಪಣ ತೊಟ್ಟಿದ್ದಾರೆ. ಇಂತಹ ಆಚರಣೆ ಪ್ರಪಂಚದಲ್ಲಿ ಯಾರು ನಕಲು ಮಾಡಲು ಸಹ ಸಾಧ್ಯವಿಲ್ಲ. ಪ್ರತಿ ಮನೆ ಮನೆಯ ಮೇಲೆ ರಾಷ್ಟ್ರ ಧ್ವಜ ಹಾರಾಡಬೇಕೆಂಬ ಅವರ ಕಲ್ಪನೆ ಅದ್ಭುತವಾಗಿದೆ. ಇಂತಹ ಮಹತ್ಕಾರ್ಯವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಪಕ್ಷದ ಪ್ರತಿಯೊಬ್ಬರು ಹೆಚ್ಚಿನ ಶ್ರಮವಹಿಸಬೇಕೆಂದರು.
    ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ ಶ್ರೀನಾಥ್ ಭಾರತ ಮಾತೆ ಭಾವಚಿತ್ರ ಅನಾವರಣಗೊಳಿಸಿ ಸಭೆ ಉದ್ಘಾಟಿಸಿದರು. ರಾಷ್ಟ್ರ ಧ್ವಜ ಅನಾವರಣಗೊಳಿಸುವ ಜೊತೆಗೆ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರುಗಳಿಗೆ ಧ್ವಜಗಳನ್ನು ವಿತರಿಸಲಾಯಿತು.
ಪಕ್ಷದ ಪ್ರಮುಖರಾದ ಜಿಲ್ಲಾ ಕಾರ್ಯದರ್ಶಿ ಎಂ. ಪ್ರಭಾಕರ್, ಬಿ.ಎಸ್ ನಾರಾಯಣಪ್ಪ, ಮ್ಯಾಮ್‌ಕೋಸ್ ನಿರ್ದೇಶಕ ವಿರುಪಾಕ್ಷಪ್ಪ ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಪಕ್ಷದ ಪ್ರಮುಖರಾದ ಎಸ್. ಕುಮಾರ್, ವಿ. ಕದಿರೇಶ್, ಮಂಗೋಟೆ ರುದ್ರೇಶ್, ಎಂ. ಮಂಜುನಾಥ್, ಚನ್ನೇಶ್, ಕೆ. ಮಂಜುನಾಥ್, ಬಿ.ಕೆ ಚಂದ್ರಪ್ಪ, ಕರೀಗೌಡ, ಜಿ. ಆನಂದಕುಮಾರ್, ಚಂದ್ರು ದೇವರನರಸೀಪುರ, ಮಂಜುನಾಥ್, ಹೇಮಾವತಿ ವಿಶ್ವನಾಥ್, ಅನ್ನಪೂರ್ಣ ಸಾವಂತ್, ಮಂಜುಳ, ಕವಿತಾ ರಾವ್, ಅನ್ನಪೂರ್ಣ, ರೇಖಾ ಪದ್ಮಾವತಿ, ನಾಗಮಣಿ  ಸೇರಿದಂತೆ ಪಕ್ಷದ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರುಗಳು ಪಾಲ್ಗೊಂಡಿದ್ದರು.  ಆನಂದ್ ನಿರೂಪಿಸಿದರು.