ಭದ್ರಾವತಿ: ನಗರದ ಸಿ.ಎನ್ ರಸ್ತೆಯಲ್ಲಿರುವ ಬಟ್ಟೆ ಅಂಗಡಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಹೆಚ್ಚಿನ ಹಾನಿ ಸಂಭವಿಸಿದೆ.
ಮಾಧವಾಚಾರ್ ವೃತ್ತದ ಸಮೀಪದಲ್ಲಿರುವ ಕೆಎಂಎಸ್ ಸಿಲ್ಕ್ಸ್ ಅಂಡ್ ಸ್ಯಾರಿಸ್ ಬಟ್ಟೆ ಅಂಗಡಿಯಲ್ಲಿ ರಾತ್ರಿ ವೇಳೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಬಟ್ಟೆ ಅಂಗಡಿಯಲ್ಲಿನ ವಸ್ತುಗಳು ಬಹುತೇಕ ಸುಟ್ಟು ಕರಕಲಾಗಿವೆ. ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಕೈಗೊಂಡ ಹಿನ್ನೆಲೆಯಲ್ಲಿ ಅಕ್ಕಪಕ್ಕದ ಅಂಗಡಿ ಮುಂಗಟ್ಟುಗಳಿಗೆ ಯಾವುದೇ ಹಾನಿ ಸಂಭವಿಸಿಲ್ಲ. ಕೆಎಂಎಸ್ ಸಿಲ್ಕ್ಸ್ ಬಟ್ಟೆ ಅಂಗಡಿಯಲ್ಲಿ ರಾತ್ರಿ ವೇಳೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಬಟ್ಟೆ ಅಂಗಡಿಯಲ್ಲಿನ ವಸ್ತುಗಳು ಬಹುತೇಕ ಸುಟ್ಟು ಕರಕಲಾಗಿವೆ. ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಕೈಗೊಂಡ ಹಿನ್ನೆಲೆಯಲ್ಲಿ ಅಕ್ಕಪಕ್ಕದ ಅಂಗಡಿ ಮುಂಗಟ್ಟುಗಳಿಗೆ ಯಾವುದೇ ಹಾನಿ ಸಂಭವಿಸಿಲ್ಲ.
ಬೆಂಕಿ ದುರ್ಘಟನೆಗೆ ಇದುವರೆಗೂ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಸೇರಿದಂತೆ ಸ್ಥಳೀಯ ಮುಖಂಡರು ಬೇಟೆ ನೀಡಿ ಪರಿಶೀಲನೆ ನಡೆಸಿದರು.
ಹಳೆಯ ಕಟ್ಟಡ ನವೀಕರಣ:
ಈ ಬಟ್ಟೆ ಅಂಗಡಿ ಮಲ್ಲಿಕಾರ್ಜುನ ಎಂಬುವರಿಗೆ ಸೇರಿದ್ದಾಗಿದ್ದು, ಇದು ತುಂಬಾ ಹಳೆಯ ಕಟ್ಟಡವಾಗಿದೆ. ಯಾವುದೇ ಅಗ್ನಿ ಸುರಕ್ಷತಾ ವ್ಯವಸ್ಥೆಗಳನ್ನು ಹೊಂದಿಲ್ಲ ಎಂದು ತಿಳಿದು ಬಂದಿದೆ.
ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಬೆಂಕಿ ಅವಘಡ :
ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ಬೆಂಕಿ ಅವಘಡಗಳು ಹೆಚ್ಚಾಗುತ್ತಿವೆ. ಅದರಲ್ಲೂ ಕೆಲವು ತಿಂಗಳು ಹಿಂದೆ ಹೊಸ ಸೇತುವೆ ರೆಸ್ತೆಯಲ್ಲಿರುವ ಸಾಮಿಲ್‌ನಲ್ಲಿ ಬೃಹತ್ ಬೆಂಕಿ ಅವಘಡ ಸಂಭವಿಸಿತ್ತು. ಇದಲ್ಲದೆ ಬ್ಯಾಂಕ್ ಕಟ್ಟಡ, ಚಪ್ಪಲಿ ಅಂಗಡಿಯಲ್ಲೂ ಬೆಂಕಿ ಅವಘಡಗಳು ಸಂಭವಿಸಿದ್ದವು.