ಭದ್ರಾವತಿಯಲ್ಲಿ ವಿಐಎಸ್‌ಎಲ್ ಕಾರ್ಖಾನೆ ವತಿಯಿಂದ ಗುರುವಾರ ಭಾರತರತ್ನ ಸರ್.ಎಂ ವಿಶ್ವೇಶ್ವರಾಯ ಜನ್ಮದಿನ ಆಚರಿಸಲಾಯಿತು.
ಭದ್ರಾವತಿ, ಸೆ. ೧೫ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ, ರೈಲ್ವೆ ನಿಲ್ದಾಣ ಸೇರಿದಂತೆ ವಿವಿಧೆಡೆ ಗುರುವಾರ ಭಾರತರತ್ನ, ಕ್ಷೇತ್ರ ಅನ್ನದಾತ ಸರ್.ಎಂ ವಿಶ್ವೇಶ್ವರಾಯ ಅವರ ೧೬೨ನೇ ಜನ್ಮದಿನ ಆಚರಿಸಲಾಯಿತು.
ವಿಐಎಸ್‌ಎಲ್ ಕಾರ್ಖಾನೆ :
ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಜಗತ್ತಿನ ಶ್ರೇಷ್ಠ ಅಭಿಯಂತರ, ರಾಜನೀತಿಜ್ಞ, ದಾರ್ಶನಿಕ, ಸರ್. ಎಂ ವಿಶ್ವೇಶ್ವರಾಯರವರ ಜನ್ಮದಿನ, ಅಭಿಯಂತರರ ದಿನಾಚರಣೆ ಅಚರಿಸಲಾಯಿತು.
ಕಾರ್ಯಪಾಲಕ ನಿರ್ದೇಶಕ ಬಿ.ಎಲ್. ಚಂದ್ವಾನಿ ಸೇರಿದಂತೆ ಇನ್ನಿತರರು ಕಾರ್ಖಾನೆ ಆವರಣದಲ್ಲಿರುವ ಸರ್.ಎಂ ವಿಶ್ವೇಶ್ವರಾಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಮುಖ್ಯ ಮಹಾಪ್ರಬಂಧಕ(ಸ್ಥಾವರ) ಟಿ. ರವಿಚಂದ್ರನ್, ಮಹಾಪ್ರಬಂಧಕ(ಸಿಬ್ಬಂದಿ ಮತ್ತು ಸಾರ್ವಜನಿಕ ಸಂಪರ್ಕ) ಎಲ್. ಪ್ರವೀಣ್ ಕುಮಾರ್, ಕಾರ್ಮಿಕರ ಸಂಘದ ಅಧ್ಯಕ್ಷ ಜೆ. ಜಗದೀಶ್, ಅಧ್ಯಕ್ಷರು, ಅಧಿಕಾರಿಗಳ ಸಂಘದ ಅಧ್ಯಕ್ಷ ಸುಗಾಲಿ ಲೋಕನಾಥ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಕಾಯಂ ಹಾಗು ಗುತ್ತಿಗೆ ಕಾರ್ಮಿಕರು, ಭದ್ರತಾ ಪಡೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಭದ್ರಾವತಿ ರೈಲ್ವೆ ನಿಲ್ದಾಣದ ಬಳಿ ಜಾತ್ಯತೀತ ಜನತಾದಳ ವತಿಯಿಂದ ಸರ್.ಎಂ ವಿಶ್ವೇಶ್ವರಾಯ ಜನ್ಮದಿನ ಆಚರಿಸಲಾಯಿತು.
ರೈಲ್ವೆ ನಿಲ್ದಾಣದ ಬಳಿ :
ಜಾತ್ಯತೀತ ಜನತಾದಳ ವತಿಯಿಂದ ಪಕ್ಷದ ಮುಖಂಡರಾದ ಶಾರದ ಅಪ್ಪಾಜಿ ನೇತೃತ್ವದಲ್ಲಿ ನಗರದ ಬಿ.ಎಚ್ ರಸ್ತೆ ರೈಲ್ವೆ ನಿಲ್ದಾಣದ ಬಳಿ ಇರುವ ಸರ್.ಎಂ ವಿಶ್ವೇಶ್ವರಾಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಜನ್ಮದಿನ ಆಚರಿಸಲಾಯಿತು.
ಪಕ್ಷದ ನಗರ ಘಟಕದ ಅಧ್ಯಕ್ಷ ಆರ್. ಕರುಣಾಮೂರ್ತಿ, ಮುಖಂಡರಾದ ಡಿ.ಟಿ ಶ್ರೀಧರ್, ಎನ್. ರಾಮಕೃಷ್ಣ, ಭಾಗ್ಯಮ್ಮ, ನಗರಸಭಾ ಸದಸ್ಯರಾದ ವಿಜಯ, ರೂಪಾವತಿ ಗುಣಶೇಖರ್, ರೇಖಾ ಪ್ರಕಾಶ್, ನಾಗರತ್ನ ಅನಿಲ್‌ಕುಮಾರ್, ಬಸವರಾಜ ಬಿ. ಆನೇಕೊಪ್ಪ, ಉದಯಕುಮಾರ್, ಮಂಜುಳ ಸುಬ್ಬಣ್ಣ, ಜಯಶೀಲ ಸುರೇಶ್, ಪಲ್ಲವಿ ದಿಲೀಪ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಆಶ್ರಿತದ ಭದ್ರಾವತಿ ಹೊಸ ಸೇತುವೆ ರಸ್ತೆಯಲ್ಲಿರುವ ವಿಶೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಸರ್ ಎಂ. ವಿಶ್ವೇಶ್ವರಯ್ಯನವರ ಜನ್ಮದಿನ ಆಚರಿಸಲಾಯಿತು.
ವಿಶ್ವೇಶ್ವರಾಯ ವಿದ್ಯಾಸಂಸ್ಥೆ :
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಆಶ್ರಿತದ ನಗರದ ಹೊಸ ಸೇತುವೆ ರಸ್ತೆಯಲ್ಲಿರುವ ವಿಶೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಸರ್ ಎಂ. ವಿಶ್ವೇಶ್ವರಯ್ಯನವರ ಜನ್ಮದಿನ ಆಚರಿಸಲಾಯಿತು.
ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಡಾ. ಎಸ್.ಪಿ ರಾಕೇಶ್ ವಿಶ್ವೇಶ್ವರಯ್ಯನವರ ಪುತ್ಥಳಿಗೆ ಮಾಲಾರ್ಪಣೆ ನೆರವೇರಿಸಿದರು. ವಿದ್ಯಾಸಂಸ್ಥೆಯ ಎಲ್ಲಾ ವಿಭಾಗದ ಮುಖ್ಯಸ್ಥರು, ಉಪನ್ಯಾಸಕರು, ಶಿಕ್ಷಕರು, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಗುತ್ತಿಗೆ ಕಾರ್ಮಿಕರ ಸಂಘದಿಂದ ಜಗತ್ತಿನ ಶ್ರೇಷ್ಠ ಅಭಿಯಂತರ, ರಾಜನೀತಿಜ್ಞ, ದಾರ್ಶನಿಕ, ಸರ್. ಎಂ ವಿಶ್ವೇಶ್ವರಾಯರವರ ಜನ್ಮದಿನ, ಅಭಿಯಂತರರ ದಿನಾಚರಣೆ ಅಚರಿಸಲಾಯಿತು.
ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರ ಸಂಘ:
ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಗುತ್ತಿಗೆ ಕಾರ್ಮಿಕರ ಸಂಘದಿಂದ ಜಗತ್ತಿನ ಶ್ರೇಷ್ಠ ಅಭಿಯಂತರ, ರಾಜನೀತಿಜ್ಞ, ದಾರ್ಶನಿಕ, ಸರ್. ಎಂ ವಿಶ್ವೇಶ್ವರಾಯರವರ ಜನ್ಮದಿನ, ಅಭಿಯಂತರರ ದಿನಾಚರಣೆ ಅಚರಿಸಲಾಯಿತು.
ಕಾರ್ಖಾನೆ ಆವರಣದಲ್ಲಿರುವ ಸರ್.ಎಂ ವಿಶ್ವೇಶ್ವರಾಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಗುತ್ತಿಗೆ ಕಾರ್ಮಿಕರು ಉಪಸ್ಥಿತರಿದ್ದರು.