Saturday, September 17, 2022

ಉಚಿತ ನೇತ್ರ ತಪಾಸಣಾ ಶಿಬಿರ, ಶಿಕ್ಷಕರ, ಅಭಿಯಂತರರ ದಿನಾಚರಣೆ

ಭದ್ರಾವತಿಯಲ್ಲಿ ಲಯನ್ಸ್ ಮತ್ತು ಲಿಯೋ ಕ್ಲಬ್ ಹಾಗು ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ ಮತ್ತು ಜನ್ನಾಪುರ ಶ್ರೀ ಮಲ್ಲೇಶ್ವರ ಸಮುದಾಯ ಭವನ ಟ್ರಸ್ಟ್ ವತಿಯಿಂದ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ್ ಶಿಕ್ಷಕರ ಮತ್ತು ಅಭಿಯಂತರರ ದಿನಾಚರಣೆ ಹಾಗು ಉಚಿತ ನೇತ್ರ ತಪಾಸಣಾ ಶಿಬಿರ ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕ ಬಿ.ಎಂ ನಾಸಿರ್‌ಖಾನ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಸೆ. ೧೭ : ನಗರದ ಲಯನ್ಸ್ ಮತ್ತು ಲಿಯೋ ಕ್ಲಬ್ ಹಾಗು ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ ಮತ್ತು ಜನ್ನಾಪುರ ಶ್ರೀ ಮಲ್ಲೇಶ್ವರ ಸಮುದಾಯ ಭವನ ಟ್ರಸ್ಟ್ ವತಿಯಿಂದ ವತಿಯಿಂದ ಶನಿವಾರ ಶಿಕ್ಷಕರ ಮತ್ತು ಅಭಿಯಂತರರ ದಿನಾಚರಣೆ ಹಾಗು ಉಚಿತ ನೇತ್ರ ತಪಾಸಣಾ ಶಿಬಿರ ಜರುಗಿತು.
    ನ್ಯೂಟೌನ್ ಲಯನ್ಸ್‌ಕ್ಲಬ್ ಭವನದಲ್ಲಿ ಸಂಜೆ ನಡೆದ ಕಾರ್ಯಕ್ರಮದಲ್ಲಿ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಬಿ.ಎಂ ನಾಸಿರ್‌ಖಾನ್, ನೆಹರು ನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಾವಿತ್ರಿಬಾಯಿ ಪುಲೆ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಎಸ್. ಶಶಿಕಲಾ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ಬಿ.ಆರ್ ದಯಾನಂದ ಮತ್ತು ಹಾಲಪ್ಪ ವೃತ್ತದ ನಿವಾಸಿ, ಅಭಿಯಂತರ ಬಾಬು ಶೆಟ್ಟಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಜನ್ನಾಪುರ ಶ್ರೀ ಮಲ್ಲೇಶ್ವರ ಸಮುದಾಯ ಭವನದಲ್ಲಿ ಬೆಳಿಗ್ಗೆ ೯.೩೦ ರಿಂದ ಮಧ್ಯಾಹ್ನ ೨.೩೦ರ ವರೆಗೆ ಉಚಿತ ನೇತ್ರ ತಪಾಸಣೆ ಶಿಬಿರ ನಡೆಯಿತು. ಶ್ರೀ ಮಲ್ಲೇಶ್ವರ ಸಮುದಾಯ ಭವನ ಟ್ರಸ್ಟ್ ಅಧ್ಯಕ್ಷ ಎಚ್.ವಿ ಶಿವರುದ್ರಪ್ಪ ಶಿಬಿರಕ್ಕೆ ಚಾಲನೆ ನೀಡಿದರು.
. ಲಯನ್ಸ್ ಕ್ಲಬ್ ಅಧ್ಯಕ್ಷ ಎ.ಎನ್ ಕಾರ್ತಿಕ್ ಅಧ್ಯಕ್ಷತೆವಹಿಸಿದ್ದರು. ಲಯನ್ಸ್ ೩೧೭ಸಿ ಪ್ರಾಂತ್ಯ-೨, ವಲಯ-೨ರ ಅಧ್ಯಕ್ಷ ಕೆ.ವಿ ಚಂದ್ರಶೇಖರ, ಮಾಜಿ ಗೌರ‍್ನರ್ ಬಿ. ದಿವಾಕರ ಶೆಟ್ಟಿ, ಡಾ. ರವೀಂದ್ರನಾಥ ಕೋಠಿ, ಕೆ. ಮಂಜಪ್ಪ, ಖಜಾಂಚಿ ಜಿ.ಪಿ ದರ್ಶನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪ್ರಧಾನಿ ಹುಟ್ಟುಹಬ್ಬ : ಬಿಜೆಪಿಯಿಂದ ರಕ್ತದಾನ ಶಿಬಿರ

ಪ್ರಧಾನಿ ನರೇಂದ್ರ ಮೋದಿ ಅವರ ೭೨ನೇ ವರ್ಷದ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಭದ್ರಾವತಿ ತಾಲೂಕು ಬಿಜೆಪಿ ಮಂಡಲ ವತಿಯಿಂದ ಶನಿವಾರ ತಾಲೂಕು ಕಛೇರಿ ರಸ್ತೆಯಲ್ಲಿರುವ ವೀರಭದ್ರೇಶ್ವರ ಸ್ವಾಮಿ ಸಮುದಾಯ ಭವನದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. 
    ಭದ್ರಾವತಿ, ಸೆ. ೧೭: ಪ್ರಧಾನಿ ನರೇಂದ್ರ ಮೋದಿ ಅವರ ೭೨ನೇ ವರ್ಷದ ಹುಟ್ಟುಹಬ್ಬದ ಹಿನ್ನಲೆಯಲ್ಲಿ ತಾಲೂಕು ಬಿಜೆಪಿ ಮಂಡಲ ವತಿಯಿಂದ ಶನಿವಾರ ತಾಲೂಕು ಕಛೇರಿ ರಸ್ತೆಯಲ್ಲಿರುವ ವೀರಭದ್ರೇಶ್ವರ ಸ್ವಾಮಿ ಸಮುದಾಯ ಭವನದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
    ಮಂಡಲ ತಾಲೂಕು ಅಧ್ಯಕ್ಷ ಜಿ. ಧರ್ಮಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ರಕ್ತದಾನ ಶಿಬರಕ್ಕೂ ಮೊದಲು ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
    ಪಕ್ಷದ ಪ್ರಮುಖರಾದ ಎಸ್. ಕುಮಾರ್, ವಿ. ಕದಿರೇಶ್, ಕೆ. ಮಂಜುನಾಥ್, ಮಂಗೋಟೆ ರುದ್ರೇಶ್, ಕೃಷ್ಣ ಛಲವಾದಿ, ನಕುಲ್, ಗೋಕುಲ್ ಕೃಷ್ಣ, ರಾಜಶೇಖರ್ ಉಪ್ಪಾರ, ಪಿ. ಗಣೇಶ್‌ರಾವ್, ರಾಮಲಿಂಗಯ್ಯ, ಕರೀಗೌಡ, ಎಂ. ಪ್ರಭಾಕರ್, ಧನುಷ್ ಬೋಸ್ಲೆ, ವಿಜಯ್, ರಾಮನಾಥ ಬರ್ಗೆ, ಆರ್.ಎಸ್ ಶೋಭಾ, ಅನ್ನಪೂರ್ಣ ಸಾವಂತ್, ಶೋಭಾ ಪಾಟೀಲ್, ಮಂಜುಳಾ, ಅನುಷಾ, ಶಕುಂತಲ, ನಾಗಮಣಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಶಿಕ್ಷಣವಂತರಾಗುವ ಜೊತೆಗೆ ಒಳ್ಳೆಯ ಗುಣಗಳನ್ನು ಮೈಗೂಡಿಸಿಕೊಳ್ಳಿ

ಭದ್ರಾವತಿ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾಂಸ್ಕೃತಿಕ ಮತ್ತು ಸಹಪಠ್ಯ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್, ಕಾಲೇಜಿನ ಪ್ರಾಂಶುಪಾಲ ಡಾ. ಧನಜಂಜಯ ಸೇರಿದಂತೆ ಇನ್ನಿತರರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಸೆ. ೧೭: ವಿದ್ಯಾರ್ಥಿಗಳು ಶಿಕ್ಷಣವಂತರಾಗುವ ಜೊತೆಗೆ ಒಳ್ಳೆಯ ಗುಣಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
    ಅವರು ಶನಿವಾರ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾಂಸ್ಕೃತಿಕ ಮತ್ತು ಸಹಪಠ್ಯ ಚಟುವಟಿಕೆಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
    ಪ್ರಸ್ತುತ ಸಮಾಜದಲ್ಲಿ ಒಳ್ಳೆಯ ಗುಣಗಳನ್ನು ಹೊಂದಿರುವವರನ್ನು ಜನರು ಗುರುತಿಸುತ್ತಾರೆ. ಉತ್ತಮ ಪ್ರಜೆಯಾಗಿ ಭವಿಷ್ಯ ರೂಪಿಸಿಕೊಳ್ಳಲು ಶಿಕ್ಷಣ ಸಹಕಾರಿಯಾಗಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸುವಂತೆ ಸಲಹೆ ನೀಡಿದರು.
    ನಗರಸಭೆ ಪ್ರಭಾರ ಅಧ್ಯಕ್ಷ ಚನ್ನಪ್ಪ ಮಾತನಾಡಿ, ಸಾವಿರಾರು ಜನರಿಗೆ ಶಿಕ್ಷಣ ನೀಡಿರುವ ಈ ಕಾಲೇಜು ತನ್ನದೇ ಆದ ಪರಂಪರೆ, ವಿಶಿಷ್ಟತೆಯನ್ನು ಹೊಂದಿದೆ. ನಾನು ಸಹ ಈ ಕಾಲೇಜಿನಲ್ಲಿಯೇ ವಿದ್ಯಾಭ್ಯಾಸ ಮಾಡುವ ಮೂಲಕ ಸಮಾಜದಲ್ಲಿ ಎಲ್ಲಾ ರೀತಿಯಿಂದಲೂ ಬೆಳವಣಿಗೆ ಹೊಂದಲು ಈ ಕಾಲೇಜಿನ ಶಿಕ್ಷಣ ವ್ಯವಸ್ಥೆ ಇಂದಿಗೂ ಪೂರಕವಾಗಿದೆ. ಇಂತಹ ಕಾಲೇಜಿನ ಪರಿಸರವನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಪೂರಕವಾದ ಎಲ್ಲಾ ಸೌಲಭ್ಯಗಳನ್ನು ಶಾಸಕ ಬಿ.ಕೆ ಸಂಗಮೇಶ್ವರ್‌ರವರು ಕಲ್ಪಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
    ವೈದ್ಯ ಡಾ. ನರೇಂದ್ರ ಭಟ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಸದಸ್ಯರಾದ ಬಿ.ಪಿ ಸರ್ವಮಂಗಳ, ಮಣಿ ಎಎನ್‌ಎಸ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಅನಿಲ್‌ಕುಮಾರ್, ಎ. ಚಂದ್ರಶೇಖರ್, ಜಯರಾಜ್, ಅಭಿದಾಲಿ, ಪ್ರಾನ್ಸಿಸ್, ಬಿ.ಕೆ ಪ್ರಮೋದ್‌ಕುಮಾರ್, ಎಂ. ಮುಸ್ವೀರ್ ಬಾಷಾ, ಜಿ. ಕಿರಣ್, ಇಸ್ರಾಯಿಲ್, ವಿನೋದ್ ವಿನ್ಸಂಟ್ ಮತ್ತು ಕೆ. ಮೋಹನ್ ರಾಜ್, ಅಮೋಸ್, ಎಸ್.ಎಸ್ ಭೈರಪ್ಪ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


    ಕಾಲೇಜಿನ ಪ್ರಾಂಶುಪಾಲ ಡಾ. ಧನಂಜಯ ಅಧ್ಯಕ್ಷತೆ ವಹಿಸಿದ್ದರು. ಪ್ರಾಧ್ಯಾಪಕ ಡಾ. ವರದರಾಜ ನಿರೂಪಿಸಿದರು. ಪ್ರಾಧ್ಯಾಪಕರಾದ ಡಾ. ಬಿ.ಎಂ ನಾಸಿರ್‌ಖಾನ್, ಡಾ. ಡಿ. ಶಿವಲಿಂಗೇಗೌಡ, ಎಂ. ವೆಂಕಟೇಶ್, ಆರ್. ಸೀಮಾ, ಬಿ. ಗುರುಪ್ರಸಾದ್, ಡಾ. ದ್ರಾಕ್ಷಾಯಿಣಿ ಎಂ. ಡೋಂಗ್ರೆ ಮತ್ತು ಆರ್. ವೆಂಕಟೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಇದಕ್ಕೂ ಕಾಲೇಜಿನ ಮುಖ್ಯದ್ವಾರದಲ್ಲಿ ಕಾಲೇಜಿನ ಆವರಣದಲ್ಲಿ ಕೈಗೊಳ್ಳಲಾಗಿರುವ ಹಲವು ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿದರು. ಮಧ್ಯಾಹ್ನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.

ಎಸ್‌ಎವಿ ಸರ್ಕಲ್ ವಿನಾಯಕಮೂರ್ತಿ ವಿಸರ್ಜನೆ

ಭದ್ರಾವತಿ ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ (ಎಸ್‌ಎವಿ ಸರ್ಕಲ್)ಬಳಿ ಪ್ರತಿಷ್ಠಾಪಿಸಲಾಗಿರುವ ಶ್ರೀ ವಿನಾಯಕ ಮೂರ್ತಿ ವಿಸರ್ಜನೆ ಶನಿವಾರ ನಡೆಯಿತು. 
    ಭದ್ರಾವತಿ, ಸೆ. ೧೭: ನಗರದ ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ (ಎಸ್‌ಎವಿ ಸರ್ಕಲ್)ಬಳಿ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ಶ್ರೀ ವಿನಾಯಕ ಮೂರ್ತಿ ವಿಸರ್ಜನೆ ಶನಿವಾರ ನಡೆಯಿತು. 
ಪ್ರತಿವರ್ಷದಂತೆ ಈ ಬಾರಿ ಸಹ ವಿನಾಯಕ ಮೂರ್ತಿ ಪ್ರತಿಷ್ಠಾಪಿಸುವ ಮೂಲಕ ಧಾರ್ಮಿಕ ಆಚರಣೆಗಳನ್ನು ನೆರವೇರಿಸಿಕೊಂಡು ಬರಲಾಗಿದೆ. ವಿಸರ್ಜನೆ ಅಂಗವಾಗಿ ಅನ್ನಸಂತರ್ಪಣೆ ನೆರವೇರಿತು. ಈ ಭಾಗದ ಪ್ರಮುಖ ರಸ್ತೆಗಳಲ್ಲಿ ಡೊಳ್ಳು ಕುಣಿತ, ಮಂಗಳ ವಾದ್ಯ ಸೇರಿದಂತೆ ಇನ್ನಿತರ ಕಲಾ ತಂಡಗಳೊಂದಿಗೆ ಮೆರವಣಿಗೆ ನಡೆಸಲಾಯಿತು. ಓಂ ಚಿತ್ತಾರ ಹಾಗು ಮಡಕೆ ಒಡೆಯುವ ಸ್ಪರ್ಧೆಯೊಂದಿಗೆ ಯುವಕರು ಕುಣಿದು ಸಂಭ್ರಮಿಸಿದರು. 


ಕಲಾವಿದ ವಿಷ್ಣು ಅವರ ಆಂಜನೇಯ ಕಲಾಕೃತಿ ಮೆರವಣಿಗೆಯ ಆಕರ್ಷಕ ಕೇಂದ್ರ ಬಿಂದುವಾಗಿ ಕಂಡು ಬಂದಿತು. ಹಿರಿಯೂರು ಚಾನಲ್‌ನಲ್ಲಿ ಮೂರ್ತಿ ವಿಸರ್ಜಿಸಲಾಯಿತು. 



Friday, September 16, 2022

೩೨ನೇ ವರ್ಷದ ವಿನಾಯಕ ಮೂರ್ತಿ ವಿಸರ್ಜನೆ : ಸೆ.೧೭ರಂದು ಅನ್ನಸಂತರ್ಪಣೆ

ಭದ್ರಾವತಿ ನ್ಯೂಟೌನ್ ಕೂಲಿಬ್ಲಾಕ್ ಶೆಡ್ ಶ್ರೀರಾಮ ಮಂದಿರದ ಬಳಿ ಶ್ರೀರಾಮ ಹಿಂದೂ ಸೇವಾ ಸಮಿತಿ ವತಿಯಿಂದ ೩೨ನೇ ವರ್ಷದ ಅಂಗವಾಗಿ ಪ್ರತಿಷ್ಠಾಪಿಸಲಾಗಿರುವ ವಿನಾಯಕ ಮೂರ್ತಿ.
    ಭದ್ರಾವತಿ, ಸೆ. ೧೬ : ನ್ಯೂಟೌನ್ ಕೂಲಿಬ್ಲಾಕ್ ಶೆಡ್  ಶ್ರೀರಾಮ ಮಂದಿರದ ಬಳಿ ಶ್ರೀರಾಮ ಹಿಂದೂ ಸೇವಾ ಸಮಿತಿ ವತಿಯಿಂದ ೩೨ನೇ ವರ್ಷದ ಅಂಗವಾಗಿ ಪ್ರತಿಷ್ಠಾಪಿಸಲಾಗಿರುವ ವಿನಾಯಕ ಮೂರ್ತಿ ವಿಸರ್ಜನೆ ಸೆ.೧೮ರಂದು ನಡೆಯಲಿದೆ.
    ವಿಸರ್ಜನೆ ಅಂಗವಾಗಿ ಸೆ.೧೭ರಂದು ಪ್ರತಿ ವರ್ಷದಂತೆ ಈ ಬಾರಿ ಬೆಳಿಗ್ಗೆ ಹೋಮ-ಹವನ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಲಿವೆ. ಮಧ್ಯಾಹ್ನ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ. ಸೆ.೧೮ರಂದು ಬೆಳಿಗ್ಗೆ ಪ್ರಮುಖ ರಸ್ತೆಗಳಲ್ಲಿ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.

ಮಹಾಬಲಿ ಚಿತ್ರದ ನಿರ್ದೇಶಕ, ನಿರ್ಮಾಪಕ ಮಲ್ಲೇಶ್ ಹುಟ್ಟುಹಬ್ಬ ಆಚರಣೆ

ಮಹಾಬಲಿ ಚಿತ್ರದ ನಿರ್ದೇಶಕ, ನಿರ್ಮಾಪಕ ಮಲ್ಲೇಶ್ ಅವರ ಹುಟ್ಟುಹಬ್ಬದ ನಗರಸಭೆ ವ್ಯಾಪ್ತಿಯ ಸಿದ್ದಾಪುರದ ಸುರಕ್ಷಾ ವೃದ್ಧಾಶ್ರಮ ಮತ್ತು ಅನಾಥಾಶ್ರಮದಲ್ಲಿ ನಡೆಯಿತು. 
    ಭದ್ರಾವತಿ, ಸೆ. ೧೬ : ಮಹಾಬಲಿ ಚಿತ್ರದ ನಿರ್ದೇಶಕ, ನಿರ್ಮಾಪಕ ಮಲ್ಲೇಶ್ ಅವರ ಹುಟ್ಟುಹಬ್ಬದ ನಗರಸಭೆ ವ್ಯಾಪ್ತಿಯ ಸಿದ್ದಾಪುರದ ಸುರಕ್ಷಾ ವೃದ್ಧಾಶ್ರಮ ಮತ್ತು ಅನಾಥಾಶ್ರಮದಲ್ಲಿ ನಡೆಯಿತು.  
    ಸುರಕ್ಷಾ ಸೇವಾ ಟ್ರಸ್ಟ್ ವತಿಯಿಂದ ಸುರಕ್ಷಾ ವೃದ್ಧಾಶ್ರಮ ಮತ್ತು ಅನಾಥಾಶ್ರಮ ನಡೆಸಲಾಗುತ್ತಿದ್ದು, ವೃದ್ಧರು ಮತ್ತು ಅನಾಥರೊಂದಿಗೆ ಮಲ್ಲೇಶ್ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳುವ ಮೂಲಕ ವಿಶೇಷವಾಗಿ ಗಮನ ಸೆಳೆದರು. ಟ್ರಸ್ಟ್ ಹಾಗು ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್ ಮಲ್ಲೇಶ್ ಅವರನ್ನು ಸನ್ಮಾನಿಸಿ ಗೌರವಿಸಿದರು. ಮಹಾಬಲಿ ಚಿತ್ರದ ನಾಯಕ ಪೃಥ್ವಿರಾಜ್ ಹಾಗು ತಂಡದವರು, ಸುರಕ್ಷಾ ಸೇವಾ ಟ್ರಸ್ಟ್ ಟ್ರಸ್ಟಿಗಳು ಮತ್ತು ಸಲಹಾ ಮಂಡಳಿ ಪ್ರಮುಖರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಕಾಲುವೆಗೆ ಬಿದ್ದ ತಂದೆ-ಮಗ : ಇಬ್ಬರ ಸಾವು

    ಭದ್ರಾವತಿ, ಸೆ. ೧೬:  ತಾಲೂಕಿನ ಮಾವಿನಕೆರೆ ಕಾಲೋನಿಯ ತಂದೆ-ಮಗ ಇಬ್ಬರು ಕಾಲುವೆಯಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ.
    ಮಾವಿನಕೆರೆ ಕಾಲೋನಿ ನಿವಾಸಿಗಳಾದ ಮಹಮ್ಮದ್ ಆಸಂ(೬೭) ಮತ್ತು ಮಹಮ್ಮದ್ ಸನಾಉಲ್ಲಾ (೨೨) ಸಾವನ್ನಪ್ಪಿದ ತಂದೆ-ಮಗ ಎಂದು ಗುರುತಿಸಲಾಗಿದೆ.
    ಮನೆ ಸಮೀಪದಲ್ಲಿಯೇ ಕಾಲುವೆ ಇದ್ದು, ಮಹಮ್ಮದ್ ಆಸಂ ಅವರಿಗೆ ಇಬ್ಬರು ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳಿದ್ದು, ಈ ಪೈಕಿ ಕೊನೆಯ ಮಗನಾದ ಮಹಮ್ಮದ್ ಸನಾಉಲ್ಲಾ  ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದನು ಎನ್ನಲಾಗಿದೆ. ಮಗನ ಆರೈಕೆಯನ್ನು ತಂದೆಯೇ ನೋಡಿಕೊಳ್ಳುತ್ತಿದ್ದರು. ಕಳೆದ ೩ ದಿನಗಳ ಹಿಂದೆ ಸನಾಉಲ್ಲಾ ಕಾಲುವೆಗೆ ಬಿದ್ದಿದ್ದು, ಈ ಸಂದರ್ಭದಲ್ಲಿ ತಂದೆ ಅಸಂ ಸಹ ಕಾಲುವೆ ಬಿದ್ದಿದ್ದಾರೆ ಎನ್ನಲಾಗಿದೆ. ಆದರೆ ಕಾಲುವೆಗೆ ಬೀಳಲು ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ.
    ಎರಡು ದಿನ ಕಾಲುವೆಯಲ್ಲಿ ಹುಡುಕಾಟ ನಡೆಸಿದರೂ ಇಬ್ಬರ ಮೃತದೇಹ ಪತ್ತೆಯಾಗಿರಲಿಲ್ಲ .ಅಸಂ ಮೃತದೇಹ ಕಾಲುವೆಗೆ ಬಿದ್ದ ಜಾಗದಿಂದ ಅರ್ಧ ಕಿ.ಮೀ ದೂರದಲ್ಲಿ  ಹಾಗು ಮಗ ಸನಾಉಲ್ಲಾ ಮೃತದೇಹ ಹೊಳೆಹೊನ್ನೂರು ಠಾಣಾ ವ್ಯಾಪ್ತಿಯ ಹಂಚಿನ ಸಿದ್ದಾಪುರದಲ್ಲಿ ಪತ್ತೆಯಾಗಿದೆ. ಈ ಸಂಬಂಧ ಕುಟುಂಬಸ್ಥರು ಹೊಳೆಹೊನ್ನೂರು ಮತ್ತು ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.