ಭದ್ರಾವತಿ, ಅ. ೧೩: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಹಳೇನಗರ ವಲಯ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಆರಕ್ಷಕ ಠಾಣೆ, ಪತ್ರಕರ್ತರ ಸಂಘ ಹಾಗು ನವಜೀವನ ಸಮಿತಿ ಮತ್ತು ಇನ್ನಿತರ ಸ್ಥಳೀಯ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಲೋಯರ್ ಹುತ್ತಾ ಶ್ರೀ ಭದ್ರೇಶ್ವರ ಸಮುದಾಯ ಭವನದಲ್ಲಿ ಅ.೧೪ರಿಂದ ೨೧ರ ವರೆಗೆ ೧೬೦೪ನೇ ಮದ್ಯವರ್ಜನ ಶಿಬಿರ ಹಮ್ಮಿಕೊಳ್ಳಲಾಗಿದೆ.
ಜೆಡಿಎಸ್ ಪಕ್ಷದ ಮುಖಂಡರಾದ ಶಾರದ ಅಪ್ಪಾಜಿ ಅ.೧೪ರಂದು ಬೆಳಿಗ್ಗೆ ೧೦.೩೦ಕ್ಕೆ ಉದ್ಘಾಟಿಸುವರು. ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಜಿ. ಅನಂದಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಜಿಲ್ಲಾ ನಿರ್ದೇಶಕ ಜೆ. ಚಂದ್ರಶೇಖರ್, ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಪೊಲೀಸ್ ಉಪಾಧೀಕ್ಷಕ ಜಿತೇಂದ್ರಕುಮಾರ್ ದಯಾಮ, ಮದ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷೆ ಆರ್. ಕರುಣಾಮೂರ್ತಿ, ನ್ಯಾಯವಾದಿ ಮಂಗೋಟೆ ರುದ್ರೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ಓ ಶಕ್ತಿ ಡೆವಲಪರ‍್ಸ್ ಅಶೋಕ್ ಕುಮಾರ್, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಪಾಲಾಕ್ಷಪ್ಪ ಮತ್ತು ಜಯರಾಂ ಗೊಂದಿ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ.