ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರುಗಳವರ ಇಷ್ಟಲಿಂಗ ಮಹಾಪೂಜೆ ಗುರುವಾರ ಭದ್ರಾವತಿ ಬಿ.ಎಚ್ ರಸ್ತೆ ಲೋಯರ್ ಹುತ್ತಾ ಸಹ್ಯಾದ್ರಿ ಬಡಾವಣೆಯ ಶ್ರೀರಂಗನಾಥ ಕೃಪಾ ನಿವಾಸದಲ್ಲಿ ನಡೆಯಿತು.
ಭದ್ರಾವತಿ, ಅ. ೨೭ : ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರುಗಳವರ ಇಷ್ಟಲಿಂಗ ಮಹಾಪೂಜೆ ಗುರುವಾರ ನಗರದ ಬಿ.ಎಚ್ ರಸ್ತೆ ಲೋಯರ್ ಹುತ್ತಾ ಸಹ್ಯಾದ್ರಿ ಬಡಾವಣೆಯ ಶ್ರೀರಂಗನಾಥ ಕೃಪಾ ನಿವಾಸದಲ್ಲಿ ನಡೆಯಿತು.
ಶ್ರೀರಂಗನಾಥ ಗ್ಯಾಸ್ ಸರ್ವಿಸ್ ಸಂಸ್ಥಾಪಕ ದಿವಂಗತ ಬಿ.ಎಚ್ ಮಹಾದೇವಪ್ಪ ಕುಟುಂಬದವರು ಇಷ್ಟಲಿಂಗ ಮಹಾಪೂಜೆ ನೆರವೇರಿಸಿದರು. ನಂತರ ನಡೆದ ಧರ್ಮಸಭೆಯಲ್ಲಿ ಶ್ರೀ ಜಗದ್ಗುರು ಪ್ರಸನ್ನ ರೇಣುಕಾ ಡಾ. ವೀರ ಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ದಿವ್ಯ ಸಾನಿಧ್ಯವಹಿಸಿದ್ದರು. ಶಾಸಕ ಬಿ.ಕೆ ಸಂಗಮೇಶ್ವರ್ ಧರ್ಮಸಭೆ ಉದ್ಘಾಟಿಸಿದರು. ತೀರ್ಥಹಳ್ಳಿ ಮಳಲಿ ಮಠದ ಶ್ರೀ ಗುರು ನಾಗಭೂಷಣ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸಿದ್ದರು.
ನಗರಸಭೆ ಮಾಜಿ ಅಧ್ಯಕ್ಷರಾದ ಬಿ. ಕೆ ಮೋಹನ್, ಗೀತಾ ರಾಜ್‌ಕುಮಾರ್, ಕೆ ಆರ್ ರಾಜು, ಎಸ್.ಎಸ್ ಜ್ಯೋತಿಪ್ರಕಾಶ್, ಮಹೇಶ್ವರಮೂರ್ತಿ ಸ್ವಾಮೀಜಿ, ಸಿದ್ದಲಿಂಗ ಸ್ವಾಮೀಜಿ, ಹೆಬ್ಬಂಡಿ ಶಿವರುದ್ರಪ್ಪ ಲೋಕಣ್ಣ, ಗಿರಿರಾಜ್, ಶಿವಮೂರ್ತಿ, ಆರ್ ಮಹೇಶ್ ಕುಮಾರ್, ಅಡವಿಶಯ್ಯ, ಹಳೇನಗರ ಪೊಲೀಸ್ ಠಾಣಾಧಿಕಾರಿ ಕವಿತ, ನಗರಸಭೆ ಮಾಜಿ ಸದಸ್ಯ ಕೆ.ಎನ್ ಭೈರಪ್ಪಗೌಡ, ಉದ್ಯಮಿ ಬಿ.ಕೆ ಜಗನ್ನಾಥ, ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯ ಧೀರರಾಜ್‌ಹೊನ್ನವಿಲೆ, ಬಾಸಿಂಗ ರುದ್ರಪ್ಪ, ವೀರಗಾಸೆ ಕಲಾವಿದ ಶಿವಕುಮಾರ್ ಸೇರಿದಂತೆ ಭಕ್ತ ವೃಂದದವರು ಪಾಲ್ಗೊಂಡಿದ್ದರು. ಕತ್ತಲಗೆರೆ ತಿಮ್ಮಪ್ಪ ಕಾರ್ಯಕ್ರಮ ನಿರೂಪಿಸಿದರು.