ಭದ್ರಾವತಿ ಅಪ್ಪರ್ ಹುತ್ತಾದಲ್ಲಿರುವ ಶ್ರೀ ಕೆಂಪೇಗೌಡ ಸಮುದಾಯ ಭವನದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಶ್ರೀ ಭೈರವಿ ಒಕ್ಕಲಿಗ ಮಹಿಳಾ ಚಾರಿಟೇಬಲ್ ಟ್ರಸ್ಟ್ ಉದ್ಘಾಟನೆ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥಸ್ವಾಮೀಜಿ ನೆರವೇರಿಸಿದರು.
ಭದ್ರಾವತಿ, ನ. ೨ : ಒಕ್ಕಲಿಗ ಸಮುದಾಯದ ಮಹಿಳೆಯರ ಹಿತರಕ್ಷಣೆ ಹಾಗು ಸಮಾಜಮುಖಿ ಚಿಂತನೆಗಳೊಂದಿಗೆ ನೂತನವಾಗಿ ಶ್ರೀ ಭೈರವಿ ಒಕ್ಕಲಿಗ ಮಹಿಳಾ ಚಾರಿಟೇಬಲ್ ಟ್ರಸ್ಟ್ ಅಸ್ತಿತ್ವಕ್ಕೆ ತರಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷೆ, ನಗರಸಭಾ ಸದಸ್ಯೆ ಲತಾ ಚಂದ್ರಶೇಖರ್ ಹೇಳಿದರು.
ಅವರು ಬುಧವಾರ ಅಪ್ಪರ್ ಹುತ್ತಾದಲ್ಲಿರುವ ಶ್ರೀ ಕೆಂಪೇಗೌಡ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಟ್ರಸ್ಟ್ ಉದ್ಘಾಟನಾ ಸಮಾರಂಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪ್ರಸ್ತುತ ಒಕ್ಕಲಿಗ ಸಮುದಾಯಕ್ಕೆ ಸೇರಿದ ಸಾಕಷ್ಟು ಮಹಿಳೆಯರು ಹಲವಾರು ಸಮಸ್ಯೆಗಳಿಗೆ ಒಳಗಾಗಿದ್ದು, ಇಂತಹ ಮಹಿಳೆಯರ ನೆರವಿಗೆ ಮುಂದಾಗುವ ಜೊತೆಗೆ ಸಾಮಾಜಿಕ ಚಿಂತನೆಗಳೊಂದಿಗೆ ಟ್ರಸ್ಟ್ ಮುನ್ನಡೆಯಲಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.
ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥಸ್ವಾಮೀಜಿ ಕಾರ್ಯಕ್ರಮದ ದಿವ್ಯಸಾನಿಧ್ಯವಹಿಸಿ ಟ್ರಸ್ಟ್ ಉದ್ಘಾಟಿಸಿದರು.
ಜೆಡಿಎಸ್ ಪಕ್ಷದ ಮುಖಂಡರಾದ ಶಾರದ ಅಪ್ಪಾಜಿ, ವಿಶ್ವ ಒಕ್ಕಲಿಗ ಮಹಿಳಾ ವೇದಿಕೆ ಅಧ್ಯಕ್ಷೆ ಭಾರತಿ ಶಂಕರ್, ಕರ್ನಾಟಕ ರಾಜ್ಯ ಒಕ್ಕಲಿಗ ಅಭಿವೃದ್ಧಿ ನಿಗಮದ ನಿರ್ದೇಶಕಿ ಸುರಭಿ ರಘು, ಟಾಟಾ ಇನ್‌ಸ್ಟಿಟ್ಯೂಟ್ ಫಂಡಮೆಂಟಲ್ ರಿಸರ್ಜ್ ಹಿರಿಯ ವಿಜ್ಞಾನಿ ಡಾ. ಗೀತಾ ತಿಮ್ಮೇಗೌಡ, ಟ್ರಸ್ಟ್ ಗೌರವಾಧ್ಯಕ್ಷೆ ಲಕ್ಷ್ಮೀರಾಜು, ಪ್ರಧಾನ ಕಾರ್ಯದರ್ಶಿ ಶಾಲಿನಿ ವಸಂತಕುಮಾರ್, ಖಜಾಂಚಿ ಯುಮನಾ ರಕ್ಷಿತ್, ಉಪಾಧ್ಯಕ್ಷೆ ಭಾಗ್ಯಲಕ್ಷ್ಮೀ ಈಶ್ವರ್, ಸಹಕಾರ್ಯದರ್ಶಿ ಅಂಬಿಕ ಕಿರಣ್‌ಕುಮಾರ್, ಸಲಹೆಗಾರರಾದ ನೇತ್ರಾವತಿ ಮರೀಗೌಡ, ಲೋಹಿತ ನಂಜಪ್ಪ, ನಿರ್ದೇಶಕರಾದ ಜಯಮಾಲ, ಭಾಗ್ಯಲಕ್ಷ್ಮಿ, ಮಂಜುಳ, ವಸಂತ, ಗೀತಾ, ಪದ್ಮಿನಿ, ಶೋಭಾ, ಸಾವಿತ್ರಮ್ಮ, ಲೀಲಾವತಿ, ಪ್ರೇಮ, ಗೀತಾ, ಶೃತಿ, ಕವಿತ, ರೂಪ ಮತ್ತು ಶೃತಿ ಯೋಗೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.