ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ
ಭದ್ರಾವತಿ, ನ. ೨೧ : ತಾಲೂಕಿನ ಪ್ರೌಢಶಾಲಾ ಮಕ್ಕಳಿಗೆ ನಗರದ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನ.೨೨ರಂದು ಬೆಳಿಗ್ಗೆ ೧೦ ಗಂಟೆಗೆ ತಾಲೂಕು ಮಟ್ಟದ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ತಿಳಿಸಿದರು.
ಅವರು ತಾಲೂಕು ಕಛೇರಿ ತಹಸೀಲ್ದಾರ್ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಪಾಲ್ಗೊಂಡು ಈ ಸಂಬಂಧ ಮಾಹಿತಿ ನೀಡಿದರು.
ಶಾಲಾಮಟ್ಟದಲ್ಲಿ ಪ್ರಥಮ ಹಾಗು ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಭಾಗವಹಿಸಬಹುದಾಗಿದೆ. ಪ್ರಬಂಧ ಸ್ಪರ್ಧೆ ಕನ್ನಡ ಭಾಷೆಯಲ್ಲಿ 'ಭಾರತ ಸಂವಿಧಾನದ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳು' ವಿಷಯ ಕುರಿತು ಮತ್ತು ಆಂಗ್ಲ ಭಾಷೆಯಲ್ಲಿ 'ಫಂಡಮೆಂಟಲ್ ರೈಟ್ಸ್ ಅಂಡ್ ಡ್ಯೂಟಿಸ್ ಆಫ್ ಇಂಡಿಯನ್ ಕಾನ್ಸ್ಟಿಟ್ಯೂಷನ್' ವಿಷಯ ಕುರಿತು ಹಾಗು ಮಾದರಿ ಮತದಾನ ಕೇಂದ್ರ ಕುರಿತು ಭಿತ್ತಿ ಚಿತ್ರ ಮತ್ತು ಚುನಾವಣೆಗೆ ಸಂಬಂಧಿಸಿದ ವಿಷಯಗಳು ರಸ ಪ್ರಶ್ನೆ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಆರ್. ಪ್ರದೀಪ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ನಗರಸಭೆ ಪೌರಾಯುಕ್ತ ಎಚ್.ಎಂ ಮನುಕುಮಾರ್ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ. ಹೆಚ್ಚಿನ ಮಾಹಿತಿಗೆ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಹಾಗು ತಾಲೂಕು ನೋಡಲ್ ಅಧಿಕಾರಿ ನವೀದ್ ಅಹಮದ್ ಪರ್ವೀಜ್ ಮೊ: ೯೮೮೬೨೧೪೧೬೦ ಕರೆ ಮಾಡಬಹುದಾಗಿದೆ ಎಂದರು.