ಭದ್ರಾವತಿಯಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಮಾತನಾಡಿದರು.
ಭದ್ರಾವತಿ, ಮೇ. ೬ : ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಶಾಸಕ ಬಿ.ಕೆ ಸಂಗಮೇಶ್ವರ್ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆಂದು ಪಕ್ಷದ ಅಲ್ಪಸಂಖ್ಯಾತ ಸಮುದಾಯದ ಮುಖಂಡರು ವಿಶ್ವಾಸ ವ್ಯಕ್ತಪಡಿಸಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, ಕ್ಷೇತ್ರದಾದ್ಯಂತ ಶಾಸಕರಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಶಾಸಕರು ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ಸೂಕ್ತ ಸ್ಥಾನಮಾನ ಕಲ್ಪಿಸಿಕೊಡುವ ಜೊತೆಗೆ ಅವರ ಹಿತಕಾಪಾಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಅವರನ್ನು ಈ ಬಾರಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕೆಂದು ಅಲ್ಪಸಂಖ್ಯಾತ ಮುಖಂಡರೆಲ್ಲರೂ ಒಗ್ಗಟ್ಟಾಗಿದ್ದು, ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಚುನಾವಣೆ ಎದುರಿಸುತ್ತಿದ್ದು, ರಾಜ್ಯಾದ್ಯಂತ ಪಕ್ಷಕ್ಕೆ ವ್ಯಾಪಕ ಬೆಂಬಲವಾಗುತ್ತಿದೆ. ಈ ಬಾರಿ ಅಧಿಕಾರಕ್ಕೆ ಬರುವುದು ಖಚಿತವಾಗಿದ್ದು, ಶಾಸಕರು ಮಂತ್ರಿಯಾಗಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಿ.ಎಂ ಖಾದರ್, ಫೀರ್‌ಷರೀಫ್, ಅಮೀರ್‌ಜಾನ್, ಜಹೀರ್‌ಜಾನ್, ಅಂತೋಣಿ ವಿಲ್ಸನ್, ದಿಲ್‌ದಾರ್, ಜೆಬಿಟಿ ಬಾಬು, ಅಬುದಾಲಿ, ಬಷೀರ್ ಅಹಮದ್, ಅಖಿಲ್ ಅಹಮದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.