ಭದ್ರಾವತಿ ನಗರಸಭೆ ವತಿಯಿಂದ ಶುಕ್ರವಾರ ಸಂಜೆ ಈ ಬಾರಿ ಎಸ್ಎಸ್ಎಲ್ಸಿ ಹಾಗು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು ಹಾಗು ಪೌರಕಾರ್ಮಿಕರ ಮಕ್ಕಳನ್ನು ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು.
ಭದ್ರಾವತಿ, ಮೇ. ೧೨ : ವಿದ್ಯಾರ್ಥಿಗಳು ಅಂಕಗಳನ್ನು ಮಾನದಂಡವಾಗಿರಿಸಿಕೊಳ್ಳದೆ ಪ್ರತಿಭಾವಂತರಾಗುವ ನಿಟ್ಟಿನಲ್ಲಿ ಹೆಚ್ಚು ಗಮನ ಹರಿಸಬೇಕೆಂದು ನಗರಸಭೆ ಪೌರಾಯುಕ್ತ ಮನುಕುಮಾರ್ ಹೇಳಿದರು.
ಅವರು ಶುಕ್ರವಾರ ಸಂಜೆ ನಗರಸಭೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಬಾರಿ ಎಸ್ಎಸ್ಎಲ್ಸಿ ಹಾಗು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು ಹಾಗು ಪೌರಕಾರ್ಮಿಕರ ಮಕ್ಕಳನ್ನು ಸನ್ಮಾನಿಸಿ ಮಾತನಾಡಿದರು.
ನಿಮ್ಮಲ್ಲಿನ ಪ್ರತಿಭೆಗೆ ಅನುಗುಣವಾಗಿ ಉತ್ತಮ ಭವಿಷ್ಯ ರೂಪಿಸುವ ಶಿಕ್ಷಣ ಪಡೆಯುವ ನಿಟ್ಟಿನಲ್ಲಿ ಹೆಚ್ಚು ಗಮನ ನೀಡಬೇಕು. ಪೋಷಕರು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕೆಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಮಾತನಾಡಿ, ಪ್ರತಿಭಾ ಪುರಸ್ಕಾರ ಮಕ್ಕಳನ್ನು ಮುಂದಿನ ಶಿಕ್ಷಣಕ್ಕೆ ಪ್ರೋತ್ಸಾಹಿಸುವುದಾಗಿದೆ. ಮಕ್ಕಳು ಜ್ಞಾನಾರ್ಜನೆಗೆ ಹೆಚ್ಚಿನ ಒತ್ತು ನೀಡಬೇಕು. ಭವಿಷ್ಯದ ಬೆಳವಣಿಗೆಗೆ ಪೂರಕವಾದ ಶಿಕ್ಷಣ ಪಡೆದುಕೊಳ್ಳಬೇಕು. ನಗರಸಭೆವತಿಯಿಂದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರೋತ್ಸಾಹಿಸುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದರು.
ಪರಿಸರ ಅಭಿಯಂತರ ಪ್ರಭಾಕರ್, ಸಮುದಾಯ ಸಂಘಟನಾ ಅಧಿಕಾರಿ ಎಂ. ಸುಹಾಸಿನಿ, ಕಛೇರಿ ವ್ಯವಸ್ಥಾಪಕಿ ಎಂ. ಸುನಿತಾ ಕುಮಾರಿ ಉಪಸ್ಥಿತರಿದ್ದರು. ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು, ಪೌರಾಕಾರ್ಮಿಕರು ಪಾಲ್ಗೊಂಡಿದ್ದರು.
ಯಾವುದೇ ತೊಂದರೆಯಾಗದಂತೆ ಎಚ್ಚರವಹಿಸಬೇಕೆಂದರು.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ಎನ್. ಮಂಜುಳಾ, ಡಿ. ಮೋನಿಕಾ, ಎ.ವಿದ್ಯಾ, ಹಾಗು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ಎನ್. ಪದ್ಮ, ಓ. ಸುಪ್ರಿಯ, ಎಂ. ನಯನ, ಬಿ. ಕೇಶವ, ಆರ್. ಪೂಜಾ, ಎಚ್. ರಮ್ಯ, ಎ. ಸ್ವಾತಿ, ಎನ್. ಭುವನ ಮತ್ತು ಎಂ. ಸೌಂದಯ್ಯ ಅವರನ್ನು ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು.