ಭದ್ರಾವತಿ ವಿಐಎಸ್ಎಲ್ ಕಾರ್ಖಾನೆ ವತಿಯಿಂದ ಇಸ್ಪಾತ್ ಭವನದ ಎದುರು "ಪ್ಲಾಸ್ಟಿಕ್ ಮಾಲಿನ್ಯವನ್ನು ತೊಡೆದುಹಾಕಿ ಪ್ಲಾಸ್ಟಿಕ್ ಮಾಲಿನ್ಯಕ್ಕೆ ಪರಿಹಾರಗಳು" ಎಂಬ ಧೈಯದೊಂದಿಗೆ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪರಿಸರ ದಿನಾಚರಣೆಯಲ್ಲಿ ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್. ಚಂದ್ವಾನಿ ಪಾಲ್ಗೊಂಡು ಮಾತನಾಡಿದರು.
ಭದ್ರಾವತಿ, ಜೂ. ೭: ನಮ್ಮ ಪರಿಸರವನ್ನು ಮಾಲಿನ್ಯದಿಂದ ಮುಕ್ತವಾಗಿಡುವಲ್ಲಿ ಪ್ರತಿಯೊಬ್ಬರೂ ಸಕ್ರಿಯ ಪಾತ್ರವಹಿಸಿ, ಮುಂದಿನ ಪೀಳಿಗೆಗೆ ಭೂಮಿಯನ್ನು ಸುರಕ್ಷಿತವಾಗಿಡಬೇಕೆಂದು ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್. ಚಂದ್ವಾನಿ ಹೇಳಿದರು.
ಕಾರ್ಖಾನೆ ವತಿಯಿಂದ ಇಸ್ಪಾತ್ ಭವನದ ಎದುರು "ಪ್ಲಾಸ್ಟಿಕ್ ಮಾಲಿನ್ಯವನ್ನು ತೊಡೆದುಹಾಕಿ ಪ್ಲಾಸ್ಟಿಕ್ ಮಾಲಿನ್ಯಕ್ಕೆ
ಪರಿಹಾರಗಳು" ಎಂಬ ಧೈಯದೊಂದಿಗೆ ಹಮ್ಮಿಕೊಳ್ಲಲಾಗಿದ್ದ ವಿಶ್ವ ಪರಿಸರ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪರಿಸರದ ಮೇಲೆ ಪ್ಲಾಸ್ಟಿಕ್ ಮಾಲಿನ್ಯದ ದುಷ್ಪರಿಣಾಮಗಳ ಬಗ್ಗೆ ವಿವರಿಸಿದರು. ಇದಕ್ಕೂ ಮೊದಲು ಸರ್.ಎಂ ವಿಶ್ವೇಶ್ವರಾಯನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಹಿರಿಯ ಪ್ರಬಂಧಕರು (ಹಣಕಾಸು) ಉನ್ನಿಕೃಷ್ಣನ್ ಪ್ರಾರ್ಥಿಸಿದರು. ಮಹಾ ಪ್ರಬಂಧಕರು (ಪರಿಸರ
ನಿರ್ವಹಣೆ ಮತ್ತು ಸಿವಿಲ್ ಇಂಜಿನಿಯರಿಂಗ್-ಸ್ಥಾವರ) ಡಿ. ಲೋಕೇಶ್ವರ್ ವಿಶ್ವ ಪರಿಸರ ದಿನದ ಇತಿಹಾಸ ಕುರಿತು ಸಂಕ್ಷಿಪ್ತ ಪರಿಚಯ ನೀಡಿ ಸ್ವಾಗತಿಸಿದರು. ಮಹಾಪ್ರಬಂಧಕರು (ನಗರಾಡಳಿತ) ಮೋಹನ್ರಾಜ್ ಶೆಟ್ಟಿ ಕಾರ್ಪೊರೇಟ್ ಪರಿಸರ ನೀತಿ ಓದಿದರು. ಸಹಾಯಕ ಮಹಾಪ್ರಬಂಧಕರು (ಎಜೆಲೆನ್ಸ್) ಎಲ್. ಕುತಲನಾಥನ್ ವಂದಿಸಿದರು. ಮುಖ್ಯ ಮಹಾ ಪ್ರಬಂಧಕರು (ಸ್ಥಾವರ), ವಿಐಎಸ್ಎಲ್ ಕಾರ್ಮಿಕರ ಸಂಘ ಮತ್ತು ಅಧಿಕಾರಿಗಳ ಸಂಘದ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರುಗಳು, ಹಿರಿಯ ಅಧಿಕಾರಿಗಳು, ನೌಕರರು ಮತ್ತು ಗುತ್ತಿಗೆ ನೌಕರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.