ಭದ್ರಾವತಿ, ಜೂ. ೧೬ : ಕಲ್ಪವೃಕ್ಷ ಸೇವಾ ಟ್ರಸ್ಟ್ ವತಿಯಿಂದ ಜೂ.೧೭ರಂದು ಬೆಳಿಗ್ಗೆ ೧೧ ಗಂಟೆಗೆ ನ್ಯೂಟೌನ್ ಲಯನ್ಸ್ ಕ್ಲಬ್ನಲ್ಲಿ ಸರ್ಕಾರಿ ಶಾಲೆಗಳಿಗೆ ಉಚಿತ ನೋಟ್ ಬುಕ್ ವಿತರಣೆ ನಡೆಯಲಿದೆ.
ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಟ್ರಸ್ಟ್ ಅಧ್ಯಕ್ಷ ಲಾಜರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಸಮಾಜ ಸೇವಕ ಅಣ್ಣದೊರೈ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಮಣಿಶೇಖರ್ ಮತ್ತು ಸಮಾಜ ಸೇವಕ ಎಂ.ಜಿ ರಾಮಚಂದ್ರನ್, ಟ್ರಸ್ಟ್ ಪದಾಧಿಕಾರಿಗಳಾದ ಎನ್.ಆರ್ ಜಯರಾಜ್, ಉಪಾಧ್ಯಕ್ಷ ರಾಮಪ್ಪ ವಿ. ಮುನೇನಕೊಪ್ಪ, ಪ್ರಧಾನ ಕಾರ್ಯದರ್ಶಿ ಕಾಂತರಾಜ್, ಸಹಕಾರ್ಯದರ್ಶಿ ಎಚ್.ಪಿ ಶ್ರೀನಿವಾಸ್ ಮತ್ತು ಖಜಾಂಚಿ ಮಹೇಶ್ವರಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.