Sunday, August 20, 2023

ಡಿ. ದೇವರಾಜ ಅರಸುರವರ ೧೦೮ನೇ ಜನ್ಮದಿನಾಚರಣೆ

ಭದ್ರಾವತಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ನೇತಾರ, ಸಾಮಾಜಿಕ ನ್ಯಾಯದ ಹರಿಕಾರ  ಡಿ. ದೇವರಾಜ ಅರಸುರವರ ೧೦೮ನೇ ಜನ್ಮದಿನಾಚರಣೆಯಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನಗಳನ್ನು ವಿತರಿಸಲಾಯಿತು.
    ಭದ್ರಾವತಿ, ಆ. ೨೦: ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗು ನಗರಸಭೆ ವತಿಯಿಂದ ಭಾನುವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ನೇತಾರ, ಸಾಮಾಜಿಕ ನ್ಯಾಯದ ಹರಿಕಾರ  ಡಿ. ದೇವರಾಜ ಅರಸುರವರ ೧೦೮ನೇ ಜನ್ಮದಿನಾಚರಣೆಯನ್ನು ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್‌ ಉದ್ಘಾಟಿಸಿದರು.
    ಹಿಂದುಳಿದ ವರ್ಗಗಳ ಮುಖಂಡ ಟಿ. ವೆಂಕಟೇಶ್‌, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್‌ ರಾಜು ಡಿ. ದೇವರಾಜ ಅರಸು ಅವರ ಕುರಿತು ಮಾತನಾಡಿದರು.
    ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್‌, ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ತಹಸೀಲ್ದಾರ್‌ ಗ್ರೇಡ್‌-೨ ರಂಗಮ್ಮ, ನಗರಸಭಾ ಸದಸ್ಯ ಬಸವರಾಜ ಬಿ. ಆನೆಕೊಪ್ಪ, ಡಿಎಸ್‌ಎಸ್‌ ಮುಖಂಡ ರಂಗನಾಥ್‌, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಟಿ. ರಾಜೇಶ್ವರಿ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ವಿವಿಧ ಸರ್ಕಾರಿ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಪಾಲ್ಗೊಂಡಿದ್ದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಉಚಿತ ಆರೋಗ್ಯ ತಪಾಸಣಾ ಶಿಬಿರ : ಸುಮಾರು ೨೫೦ಕ್ಕೂ ಹೆಚ್ಚು ಮಂದಿ

ಭದ್ರಾವತಿ ತಾಲೂಕು ಛಾಯಾಗ್ರಾಹಕರ ಸಂಘ ಮತ್ತು ಛಾಯಾಗ್ರಾಹಕರ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತ ವತಿಯಿಂದ ಶಿವಮೊಗ್ಗ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸಹಯೋಗದೊಂದಿಗೆ  ವಿಶ್ವ ಛಾಯಾಗ್ರಾಹಕ ದಿನಾಚರಣೆ ಪ್ರಯುಕ್ತ ಭಾನುವಾರ  ಹಳೇನಗರದ ಸಂಚಿಯ  ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ  ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ  ಸುಮಾರು ೨೫೦ಕ್ಕೂ ಹೆಚ್ಚು ಮಂದಿ ಪಾಲ್ಗೊಂಡು ಶಿಬಿರದ ಸದುಪಯೋಗ ಪಡೆದುಕೊಂಡರು.
    ಭದ್ರಾವತಿ, ಆ. ೨೦: ತಾಲೂಕು ಛಾಯಾಗ್ರಾಹಕರ ಸಂಘ ಮತ್ತು ಛಾಯಾಗ್ರಾಹಕರ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತ ವತಿಯಿಂದ ಶಿವಮೊಗ್ಗ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸಹಯೋಗದೊಂದಿಗೆ  ವಿಶ್ವ ಛಾಯಾಗ್ರಾಹಕ ದಿನಾಚರಣೆ ಪ್ರಯುಕ್ತ ಭಾನುವಾರ  ಹಳೇನಗರದ ಸಂಚಿಯ  ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ  ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ  ಸುಮಾರು ೨೫೦ಕ್ಕೂ ಹೆಚ್ಚು ಮಂದಿ ಪಾಲ್ಗೊಂಡು ಶಿಬಿರದ ಸದುಪಯೋಗ ಪಡೆದುಕೊಂಡರು.
     ಶಿಬಿರದಲ್ಲಿ ಇ.ಸಿ.ಜಿ.ಯೊಂದಿಗೆ ಹೃದಯ, ಕಿಡ್ನಿ, ದಂತ, ಕಣ್ಣು, ಕಿವಿ, ಇ.ಎನ್.ಟಿ, ಮೂಳೆ, ನರರೋಗ, ಚರ್ಮರೋಗ, ಸಕ್ಕರೆ ಖಾಯಿಲೆ, ಮಕ್ಕಳ ಮತ್ತು ಸ್ತ್ರೀಯರ ಖಾಯಿಲೆಗಳು ಹಾಗೂ ಜನರಲ್ ಮೆಡಿಸಿನ್, ಜನರಲ್ ಸರ್ಜರಿ ಇತರೆ ರೋಗಗಳಿಗೆ ಉಚಿತ ತಪಾಸಣೆ ಮತ್ತು ಚಿಕಿತ್ಸೆ ನಡೆಯಿತು.  
      ೧೮ಕ್ಕೂ ಹೆಚ್ಚು ಮಂದಿ ರಕ್ತದಾನ :
     ರಕ್ತದಾನ ಶಿಬಿರ ಸಹ ನಡೆಯಿತು, ಸುಮಾರು ೧೮ಕ್ಕೂ ಮಂದಿ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ರಕ್ತದಾನ ನೆರವೇರಿಸಿದರು.
    ದಾನಿಗಳಿಗೆ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದವತಿಯಿಂದ ಉಚಿತವಾಗಿ ಒಂದು ವರ್ಷ ಅವಧಿಯ ಹೆಲ್ತ್‌ಕಾರ್ಡ್ (ಕುಟುಂಬದ ಸದಸ್ಯರಿಗೆ) ನೀಡಲಾಯಿತು.
    ಶಿವಮೊಗ್ಗ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಆಡಳಿತ ಮೇಲ್ವಿಚಾರಕ ಡಾ. ಶಿವಮೂರ್ತಿ, ತಜ್ಞ ವೈದ್ಯರಾದ ಡಾ. ಚಂದ್ರಶೇಖರ್‌, ಡಾ. ಗುರುರಾಜ್‌, ತಾಲೂಕು ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಶ್ರೀನಿವಾಸ್‌, ಪ್ರಧಾನ ಕಾರ್ಯದರ್ಶಿ ಸಂಜೀವರಾವ್‌ ಸಿಂಧ್ಯಾ, ಗೌರವಾಧ್ಯಕ್ಷ ಅರುಣ್‌ಕುಮಾರ್‌, ಉಪಾಧ್ಯಕ್ಷ ಮಹಮದ್‌ ವಜೀರ್‌ (ಮುನ್ನಾ),  ಖಜಾಂಚಿ ಸತೀಶ್‌ಕುಮಾರ್‌, ಸಹಕಾರ್ಯದರ್ಶಿ ಕುಮಾರ್‌ ಹಾಗು ಕಾರ್ಯಕಾರಿ ಸಮಿತಿ ಸದಸ್ಯರು, ಛಾಯಾಗ್ರಾಹಕರ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತ  ಅಧ್ಯಕ್ಷ ಮಂಜುನಾಥ್(ಮೇಘ) ಹಾಗು ಮಹಮ್ಮದ್‌ ಮತ್ತು ಕಾಂತರಾಜ್‌ ಸೇರಿದಂತೆ ಛಾಯಾಗ್ರಾಹಕರು ಉಪಸ್ಥಿತರಿದ್ದರು.  

ಅಪರಾಧ ಕೃತ್ಯಗಳಿಂದ ದೂರವಿರಿ : ರೌಡಿ ಶೀಟರ್‌ಗಳಿಗೆ ಎಚ್ಚರಿಕೆ

ಭದ್ರಾವತಿ ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿರುವ ರೌಡಿ ಶೀಟರ್‌ಗಳು ಹಾಗು ಅಪರಾಧ ಕೃತ್ಯಗಳನ್ನೇ ರೂಢಿಸಿಕೊಂಡಿರುವ ಪದೇ ಪದೇ  ವಿವಿಧ ಪ್ರಕರಣಗಳಲ್ಲಿ ಭಾಗಿಯಾಗುತ್ತಿರುವವರನ್ನು ಭಾನುವಾರ ಕರೆ ತಂದು ವಿಚಾರಣೆ ನಡೆಸಿ ಎಚ್ಚರಿಕೆ ನೀಡಲಾಯಿತು.
    ಭದ್ರಾವತಿ, ಆ. ೨೦: ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿರುವ ರೌಡಿ ಶೀಟರ್‌ಗಳು ಹಾಗು ಅಪರಾಧ ಕೃತ್ಯಗಳನ್ನೇ ರೂಢಿಸಿಕೊಂಡಿರುವ ಪದೇ ಪದೇ  ವಿವಿಧ ಪ್ರಕರಣಗಳಲ್ಲಿ ಭಾಗಿಯಾಗುತ್ತಿರುವವರನ್ನು ಭಾನುವಾರ ಕರೆ ತಂದು ವಿಚಾರಣೆ ನಡೆಸಿ ಎಚ್ಚರಿಕೆ ನೀಡಲಾಯಿತು. 
     ಪೊಲೀಸ್ ನಗರವೃತ್ತ ನಿರೀಕ್ಷಕರ ಕಛೇರಿ ಆವರಣದಲ್ಲಿ ಪೊಲೀಸ್ ಉಪಾಧೀಕ್ಷಕ ಕೆ.ಆರ್ ನಾಗರಾಜ್‌ರವರು ವಿವಿಧ ಠಾಣೆಗಳ ಪ್ರಕರಣಗಳ ವಿಚಾರಣೆ ನಡೆಸುವ ಮೂಲಕ ಮುಂದಿನ ದಿನಗಳಲ್ಲಿ ಯಾವುದೇ ಅಪರಾಧ ಕೃತ್ಯಗಳಿಗೆ ಆಸ್ಪದ ನೀಡದೆ. ಸಮಾಜದಲ್ಲಿ ಶಾಂತಿ, ಸೌಹಾರ್ದತೆಯಿಂದ ವರ್ತಿಸುವಂತೆ ಎಚ್ಚರಿಕೆ ನೀಡಿದರು.
    ನಗರವೃತ್ತ ನಿರೀಕ್ಷಕ ಜೆ. ಶೈಲಕುಮಾರ್ ಹಾಗು ವಿವಿಧ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳು ಉಪಸ್ಥಿತರಿದ್ದರು.  

ಡಿ. ದೇವರಾಜ ಅರಸು ಆಡಳಿತ ಇಂದಿನವರಿಗೆ ಮಾದರಿ : ಶೃತಿ ವಸಂತಕುಮಾರ್

ಭದ್ರಾವತಿ ನಗರಸಭೆ ವತಿಯಿಂದ ಭಾನುವಾರ `ನನ್ನ ಮಣ್ಣು ನನ್ನ ದೇಶ'(ಮೇರಿ ಮಾಟಿ ಮೇರಾ ದೇಶ್) ಅಭಿಯಾನ ನಗರಸಭೆ ಮುಂಭಾಗದಲ್ಲಿರುವ ವಿನೋಬಭಾವೆ ಉದ್ಯಾನವನದಲ್ಲಿ ಸೈನಿಕರ ಫಲಕ ಅನಾವರಣಗೊಳಿಸಿ ಗೌರವ ಸಲ್ಲಿಸಲಾಯಿತು.  
    ಭದ್ರಾವತಿ, ಆ. ೨೦ : ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಆಡಳಿತ ಇಂದಿನವರಿಗೆ ಮಾದರಿಯಾಗಿದೆ ಎಂದು ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್ ಹೇಳಿದರು.
    ಅವರು ಭಾನುವಾರ ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಡಿ. ದೇವರಾಜ ಅರಸು ಜನ್ಮದಿನಾಚರಣೆ ಹಾಗು `ನನ್ನ ಮಣ್ಣು ನನ್ನ ದೇಶ'(ಮೇರಿ ಮಾಟಿ ಮೇರಾ ದೇಶ್) ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
    ಡಿ. ದೇವರಾಜ ಅರಸು ಅವರು ಹೊಂದಿದ್ದ ಜನಪರ ಕಾಳಜಿ ಹಾಗೂ ಆ ನಿಟ್ಟಿನಲ್ಲಿ ಜಾರಿಗೆ ತಂದ ಯೋಜನೆಗಳು ಸಮಾಜಕ್ಕೆ ಇಂದಿಗೂ ಮಾದರಿಯಾಗಿವೆ. ಅರಸು ಅವರು ಶೋಷಿತರ ಧ್ವನಿಯಾಗಿ ಸಮಾಜದ ಎಲ್ಲಾ ವರ್ಗದವರ ಏಳಿಗೆಗಾಗಿ ಶ್ರಮಿಸಿದ ಮಹಾನ್ ವ್ಯಕ್ತಿಯಾಗಿದ್ದು, ಇವರ ಆದರ್ಶಗಳನ್ನು ನಾವೆಲ್ಲರೂ ಪಾಲಿಸಬೇಕಾಗಿದೆ ಎಂದರು.
    ಪೌರಾಯುಕ್ತ ಎಚ್.ಎಂ ಮನುಕುಮಾರ್ ಮಾತನಾಡಿ, ಡಿ.ದೇವರಾಜ ಅರಸು ಅವರು  ತಮ್ಮ ಆಡಳಿತಾವಧಿಯಲ್ಲಿ ಸಾಕಷ್ಟು ಜನಪರ ಯೋಜನೆಗಳನ್ನು ಜಾರಿಗೆ ತಂದರು. ಅಂದಿನ ಸಮಾಜದಲ್ಲಿನ ಅನಿಷ್ಟ ಪದ್ದತಿಗಳನ್ನು ಹೋಗಲಾಡಿಸಿ ಹಿಂದುಳಿದ ವರ್ಗದವರನ್ನು ಗುರುತಿಸಿ ಶೋಷಿತ ವರ್ಗಕ್ಕೆ ಧ್ವನಿಯಾಗಿ ದಲಿತರ ಏಳಿಗೆಗೆ ಬುನಾದಿ ಹಾಕಿಕೊಟ್ಟವರು ಎಂದರು.
    ಯೋಧರು ಎಂದರೆ ಶಿಸ್ತು, ಸಂಯಮಕ್ಕೆ ಹೆಸರಾದವರು. ದೇಶಕ್ಕಾಗಿ ತ್ಯಾಗ, ಬಲಿದಾನಗಳನ್ನು ಮಾಡಿದ ಸೈನಿಕರನ್ನು ಗುರುತಿಸಿ ಗೌರವಿಸಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.


ಭದ್ರಾವತಿಯಲ್ಲಿ ಭಾನುವಾರ ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಡಿ. ದೇವರಾಜ ಅರಸು ಜನ್ಮದಿನಾಚರಣೆ ಹಾಗು `ನನ್ನ ಮಣ್ಣು ನನ್ನ ದೇಶ'(ಮೇರಿ ಮಾಟಿ ಮೇರಾ ದೇಶ್) ಅಭಿಯಾನ ಕಾರ್ಯಕ್ರಮದಲ್ಲಿ ಮಾಜಿ ಸೈನಿಕರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಮೇಜರ್ ಡಾ. ವಿಕ್ರಂ ಕೆದಿಲಾಯ ಮಾತನಾಡಿ, ಸೈನಿಕರಾಗಿ ದೇಶ ಸೇವೆ ಮಾಡುವುದು ಸುಲಭವಲ್ಲ. ಬದ್ಧತೆ,  ದೇಶ ಭಕ್ತಿ, ಸದೃಢ ಮನಸ್ಸು ಬಹಳ ಮುಖ್ಯವಾಗಿದೆ. ಕುಟುಂಬದಿಂದ ದೂರು ಉಳಿದು  ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಸೈನಿಕರನ್ನು ಸಮಾಜದಲ್ಲಿ ಗುರುತಿಸಿ ಗೌರವಿಸುವವರು ಬಹಳ ವಿರಳ. ನಗರಸಭೆವತಿಯಿಂದ  ಸೈನಿಕರನ್ನು ಗುರುತಿಸಿ ಗೌರವಿಸುವ ಕೆಲಸ ನಡೆಯುತ್ತಿರುವುದು ನಿಜಕ್ಕೂ ಹೆಮ್ಮೆಯ ಸಂಗತಿಯಾಗಿದೆ ಎಂದರು.
    `ನನ್ನ ಮಣ್ಣು ನನ್ನ ದೇಶ'(ಮೇರಿ ಮಾಟಿ ಮೇರಾ ದೇಶ್) ಅಭಿಯಾನ ಪ್ರಯುಕ್ತ ನಗರಸಭೆ ಮುಂಭಾಗದಲ್ಲಿರುವ ವಿನೋಬಭಾವೆ ಉದ್ಯಾನವನದಲ್ಲಿ ಸಸಿ ನೆಡುವ ಮೂಲಕ ಸೈನಿಕರ ಫಲಕ ಉದ್ಘಾಟಿಸಲಾಯಿತು. ಮಾಜಿ ಸೈನಿಕರನ್ನು ಸನ್ಮಾನಿಸಿ ಗೌರವಿಸಲಾಯಿತು.
    ನಗರಸಭೆ ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಮಾಜಿ ಉಪಾಧ್ಯಕ್ಷ ಚನ್ನಪ್ಪ, ಸದಸ್ಯ ಬಸವರಾಜ ಬಿ. ಆನೆಕೊಪ್ಪ, ಸಮುದಾಯ ಸಂಘಟನಾ ಅಧಿಕಾರಿ ಸುಹಾಸಿನಿ, ಪರಿಸರ ಅಭಿಯಂತರ ಪ್ರಭಾಕರ್, ವ್ಯವಸ್ಥಾಪಕಿ ಎಂ. ಸುನಿತ ಕುಮಾರಿ, ಸಹಾಯಕ ಕಾರ್ಯಪಾಲಕ ಅಭಿಯಂತರ ಬಿ.ಬಿ ಶಿವಪ್ರಸಾದ್, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಅಶೋಕ್, ಪ್ರಧಾನ ಕಾರ್ಯದರ್ಶಿ ವೆಂಕಟ ಗಿರಿ, ಉಪಾಧ್ಯಕ್ಷ ಬಿ.ಆರ್ ದಿನೇಶ್ ಕುಮಾರ್, ಖಜಾಂಚಿ ಬೋರೇಗೌಡ, ಮುದುಗಲ ರಾಮರೆಡ್ಡಿ, ಗೋವಿಂದಪ್ಪ, ಅಶೋಕ್ ಸೇರಿದಂತೆ ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು, ಮಾಜಿ ಸೈನಿಕರು  ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

Saturday, August 19, 2023

೧೬೧ ಗ್ರಾಂ ಒಣ ಗಾಂಜಾ ವಶ

ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರನ್ನು ಭದ್ರಾವತಿ  ಪೇಪರ್‌ ಟೌನ್‌ ಠಾಣೆ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ.
    ಭದ್ರಾವತಿ, ಆ. ೧೯:  ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರನ್ನು ಪೇಪರ್‌ ಟೌನ್‌ ಠಾಣೆ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ.
    ಠಾಣಾಧಿಕಾರಿ ಕವಿತಾ ನೇತೃತ್ವದಲ್ಲಿ ಸಿಬ್ಬಂದಿಗಳು ಆ.೧೭ ರಂದು ದಾಳಿ ನಡೆಸಿದ್ದು, ಬಂಧಿತ ಇಬ್ಬರಿಂದ 161 ಗ್ರಾಂ ತೂಕದ ಒಣ ಗಾಂಜಾ ವಶ ಪಡಿಸಿಕೊಂಡು ಎನ್‌ಡಿಪಿಎಸ್‌ ಕಾಯ್ದೆಯಡಿ  ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ಆ.೨೦ರಂದು ಪುಸ್ತಕ ಬಿಡುಗಡೆ ಸಮಾರಂಭ

    ಭದ್ರಾವತಿ, ಆ. ೧೯: ತಾಲೂಕಿನ ಬಿ.ಆರ್‌ ಪ್ರಾಜೆಕ್ಟ್‌  ಪತ್ರ ಸಂಸ್ಕೃತಿ ಸಂಘಟನೆ ವತಿಯಿಂದ ಆ.೨೦ರಂದು   ಬೆಳಿಗ್ಗೆ ೧೦.೩೦ಕ್ಕೆ ಪುಸ್ತಕ ಬಿಡುಗಡೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.
    ಜಿ.ಆರ್‌ ಕುಂಭಾರ್‌ ಅವರ ಮರಾಠಿಯಿಂದ ಕನ್ನಡಕ್ಕೆ ಅನುವಾದಗೊಂಡ ʻಚಾರುಲತೆʼ(ನಾಟಕ), ಪ್ರವೀಣ್‌ ಎಂ. ಕಾರ್ಗಡಿ ಅವರ ʻನಡುರಾತ್ರಿಯ ನವಿಲುʼ(ಕವನ ಸಂಕಲನ) ಮತ್ತು ಜಿ.ಎಸ್‌ ಕುಂಭಾರ್‌ ಅವರ ʻನೂರೊಂದು ಕಥೆಗಳುʼ(ಚಿಂತನೆಗಾಗಿ) ಕೃತಿಗಳು ಪುಸ್ತಕ ಬಿಡುಗಡೆಗೊಳ್ಳಲಿವೆ.
    ಸಮಾರಂಭದಲ್ಲಿ ಕೊಟ್ಟೂರು ಸಾಹಿತಿ ಕುಂ. ವೀರಭದ್ರಪ್ಪ(ಕುಂವೀ), ಬೆಂಗಳೂರಿನ ಕವಿ ಡಾ. ಕೂಡ್ಲೂರು ವೆಂಕಟಪ್ಪ, ಶ್ರವಣಬೆಳಗೊಳ ಸಾಹಿತಿ ವಸುಮತಿ ಜೈನ್‌, ಮಹಾರಾಷ್ಟ್ರ ಗಡಿನಾಡ ಕನ್ನಡಿಗ ಸಾಹಿತಿ ಗುರುಪಾದ ಎಸ್. ಕುಂಭಾರ್‌, ಹೊಸನಗರದ ಪ್ರವೀಣ್‌ ಎಂ. ಕಾರ್ಗಡಿ ಮತ್ತು ಬಿ.ಆರ್‌ ಪ್ರಾಜೆಕ್ಟ್‌ ನಿವೃತ್ತ ಇಂಜಿನಿಯರ್‌, ಸಾಹಿತಿ ಹೊಸಹಳ್ಳಿ ದಾಳೇಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.

ಆ.೨೦ರಂದು ಅರಸು ೧೦೮ನೇ ಜನ್ಮದಿನ ಆಚರಣೆ

    ಭದ್ರಾವತಿ, ಆ. ೧೯: ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗು ನಗರಸಭೆ ವತಿಯಿಂದ ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ನೇತಾರ, ಸಾಮಾಜಿಕ ನ್ಯಾಯದ ಹರಿಕಾರ  ಡಿ. ದೇವರಾಜ ಅರಸುರವರ ೧೦೮ನೇ ಜನ್ಮದಿನ ಆ.೨೦ರಂದು  ಬೆಳಿಗ್ಗೆ ೧೦ ಗಂಟೆಗೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಚರಿಸಲಾಗುತ್ತಿದೆ.
    ಶಾಸಕ ಬಿ.ಕೆ ಸಂಗಮೇಶ್ವರ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದ ಪೂರ್ಯಾನಾಯ್ಕ್‌ ಉದ್ಘಾಟಿಸಲಿದ್ದಾರೆ. ಸಚಿವರಾದ ಎಸ್. ಮಧು ಬಂಗಾರಪ್ಪ, ಶಿವರಾಜ ಸಂಗಪ್ಪ ತಂಗಡಗಿ, ಡಿ. ಸುಧಾಕರ್‌, ಸಂಸದ ಬಿ.ವೈ ರಾಘವೇಂದ್ರ, ವಿಧಾನಪರಿಷತ್‌ ಸದಸ್ಯರಾದ ಎಸ್.ಎಲ್‌ ಭೋಜೇಗೌಡ, ಎಸ್. ರುದ್ರೇಗೌಡ, ಭಾರತಿ ಶೆಟ್ಟಿ, ಡಿ.ಎಸ್‌ ಅರುಣ್‌, ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್‌, ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್‌, ತಹಸೀಲ್ದಾರ್‌ ಕೆ.ಆರ್‌ ನಾಗರಾಜ್‌, ಗ್ರೇಡ್‌-೨ ತಹಸೀಲ್ದಾರ್‌ ವಿ. ರಂಗಮ್ಮ, ಪೌರಾಯುಕ್ತ ಮನುಕುಮಾರ್‌, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಎಂ. ಗಂಗಣ್ಣ ಸೇರಿದಂತೆ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಟಿ. ರಾಜೇಶ್ವರಿ ಕೋರಿದ್ದಾರೆ.