ಭದ್ರಾವತಿ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸುತ್ತಮುತ್ತಲ ವ್ಯಾಪ್ತಿಯಲ್ಲಿ ಹಾಗೂ ತರೀಕೆರೆ ರಸ್ತೆಯಲ್ಲಿ ಬುಧವಾರ ಕೋಟ್ಪಾ ಕಾಯ್ದೆಯಡಿ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ.
ಭದ್ರಾವತಿ, ಆ. ೨೩ : ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸುತ್ತಮುತ್ತಲ ವ್ಯಾಪ್ತಿಯಲ್ಲಿ ಹಾಗೂ ತರೀಕೆರೆ ರಸ್ತೆಯಲ್ಲಿ ಬುಧವಾರ ಕೋಟ್ಪಾ ಕಾಯ್ದೆಯಡಿ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ.
ಕಾರ್ಯಾಚರಣೆಯಲ್ಲಿ ಒಟ್ಟು ೨೨ ಪ್ರಕರಣಗಳನ್ನು ದಾಖಲಿಸಿಕೊಂಡು ೩,೫೦೦ ರು. ದಂಡ ಸಂಗ್ರಹಿಸಲಾಗಿದೆ. ಅಲ್ಲದೆ ತಂಬಾಕು ಮಾರಾಟಗಾರರಿಗೆ ತಿಳುವಳಿಕೆ ನೀಡಲಾಗಿದೆ.
ತಂಡದ ನೇತೃತ್ವ ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಹಾಗೂ ಜಿಲ್ಲಾ ಕಾರ್ಯಕ್ರಮ ಅಧಿಕಾರಿಯಾಗಿರುವ ಡಾ. ಓ. ಮಲ್ಲಪ್ಪ ವಹಿಸಿದ್ದರು. ತಂಡದಲ್ಲಿ ಜಿಲ್ಲಾ ಸಲಹೆಗಾರ ಹೇಮಂತ್ ರಾಜ್ ಅರಸ್, ಸಮಾಜ ಕಾರ್ಯಕರ್ತ ರವಿರಾಜ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಆನಂದಮೂರ್ತಿ ಹಾಗು ಸಿಬ್ಬಂದಿಗಳು ಭಾಗವಹಿಸಿದ್ದರು.