ಭದ್ರಾವತಿ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನ.೧ರಂದು ಹಳೇನಗರದ ಕನಕಮಂಟಪ ಮೈದಾನದಲ್ಲಿ ೬೮ನೇ ಸುವರ್ಣ ಕನ್ನಡ ರಾಜ್ಯೋತ್ಸವ ಹಮ್ಮಿಕೊಳ್ಳಲಾಗಿದೆ.
ನಗರದ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದಿಂದ ಬೆಳಿಗ್ಗೆ ೮ ಗಂಟೆಗೆ ಶ್ರೀ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಹಾಗು ಮೆರವಣಿಗೆ ನಡೆಯದ್ದು, ೯ ಗಂಟೆಗೆ ಕನಕಮಂಟಪ ಮೈದಾನದಲ್ಲಿ ಧ್ವಜಾರೋಹಣ, ಪಥಸಂಚಲನ, ಸಾಂಸ್ಕೃತಿ ಹಾಗು ವೇದಿಕೆ ಕಾರ್ಯಕ್ರಮಗಳು ಜರುಗಲಿವೆ.
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದ ಪೂರ್‍ಯನಾಯ್ಕ ಉದ್ಘಾಟಿಸಲಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದಾರೆ. ನಗರಸಭೆ ಅಧ್ಯಕ್ಷೆ ಶೃತಿ ಸಿ. ವಸಂತಕುಮಾರ್ ಕೆ.ಜಿ, ಉಪಾಧ್ಯಕ್ಷೆ ಬಿ.ಪಿ ಸರ್ವಮಂಗಳ ಭೈರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೋಡ್ಲು ಯಜ್ಞಯ್ಯ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ತಹಸೀಲ್ದಾರ್ ಕೆ.ಆರ್ ನಾಗರಾಜ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ. ಗಂಗಣ್ಣ, ನಗರಸಭೆ ಪೌರಾಯುಕ್ತ ಮನುಕುಮಾರ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ.