![](https://blogger.googleusercontent.com/img/a/AVvXsEgcr4s2zwH6hnQaKBZl3fb0iTy0vut_aHJ2UnJZnPndQxiCy-n9ija8nEhJxqMvpVRwARMUljwOQkCbgvoPBqZfB5mxGaRPE9JZsqFek6aZneJvsGf7MsmIoRp1RbpWDSDB7zxNOyJ3v-qMyPCJz9hFqST9ZFnDhUlApD4S7h-s04pxNKGAkg6lMxcgLGBD=w400-h255-rw)
ಭದ್ರಾವತಿ ತಾಲೂಕು ಕಚೇರಿ ಸಭಾಂಗಣದಲ್ಲಿ ನೈರುತ್ಯ ಪದವೀಧರ ಹಾಗು ಶಿಕ್ಷಕರ ಕರಡು ಮತದಾರರ ಪಟ್ಟಿ ಕುರಿತು ತಹಸೀಲ್ದಾರ್ ಕೆ.ಆರ್ ನಾಗರಾಜ್ ಗುರುವಾರ ಮಾಹಿತಿ ನೀಡಿದರು.
ಭದ್ರಾವತಿ: ನೈರುತ್ಯ ಪದವೀಧರ ಹಾಗು ಶಿಕ್ಷಕರ ಕ್ಷೇತ್ರದ ಕರಡು ಮತದಾರರ ಪಟ್ಟಿ ಪರಿಷ್ಕರಣೆ ಆರಂಭಗೊಂಡಿದ್ದು, ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಹಾಗು ಆಕ್ಷೇಪಣೆಗಳಿದ್ದಲ್ಲಿ ಡಿ.೯ರೊಳಗಾಗಿ ಸಲ್ಲಿಸುವಂತೆ ತಹಶೀಲ್ದಾರ್ ಕೆ.ಆರ್ ನಾಗರಾಜ್ ತಿಳಿಸಿದರು.
ಗುರುವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ನೈರುತ್ಯ ಪದವೀಧರ ಹಾಗು ಶಿಕ್ಷಕರ ಕರಡು ಮತದಾರರ ಪಟ್ಟಿ ಕುರಿತು ಮಾಹಿತಿ ನೀಡಿದರು.
ಶಿಕ್ಷಕರ ಕ್ಷೇತ್ರದ ಮತದಾನಕ್ಕಾಗಿ ಕಡ್ಡಾಯವಾಗಿ ೩ ವರ್ಷ ಸೇವೆ ಸಲ್ಲಿಸಿರಬೇಕು. ಪ್ರಸ್ತುತ ಮತಕ್ಷೇತ್ರದಲ್ಲಿ ೨೨೫ ಪುರುಷ ಹಾಗು ೧೮೫ ಮಹಿಳಾ ಮತದಾರರು ಸೇರಿದಂತೆ ಒಟ್ಟು ೪೧೦ ಮತದಾರರಿದ್ದಾರೆ. ಪದವೀಧರ ಕ್ಷೇತ್ರದಲ್ಲಿ ೧,೫೦೫ ಪುರುಷ ಹಾಗು ೧,೩೦೭ ಮಹಿಳಾ ಮತದಾರರು, ಇತರೆ ೧ ಸೇರಿದಂತೆ ಒಟ್ಟು ೨೮೧೩ ಮತದಾರರಿದ್ದಾರೆ. ಕ್ಷೇತ್ರದಲ್ಲಿ ೫ ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಹೊಳೆಹೊನ್ನೂರಿನಲ್ಲಿ ೧, ಬಿ.ಆರ್.ಪಿ ೧ ಹಾಗು ನಗರ ವ್ಯಾಪ್ತಿಯಲ್ಲಿ ಮೂರು ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದರು.
ಚುನಾವಣೆ ಸಂಬಂಧ ಈಗಾಗಲೇ ರಾಜಕೀಯ ಪಕ್ಷಗಳ ಮುಖಂಡರಿಗೆ ಮಾಹಿತಿ ನೀಡಲಾಗಿದೆ. ಇದೀಗ ಮತದಾರರಿಗೆ ಗುರುತಿನ ಚೀಟಿಗಳನ್ನು ಅಂಚೆ ಮೂಲಕ ರವಾನಿಸಲಾಗುತ್ತಿದೆ. ಡಿ. ೯ರವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಹಾಗು ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಉಪ ತಹಶೀಲ್ದಾರ್ ರಾಧಕೃಷ್ಣ ಭಟ್, ಚುನಾವಣಾ ಶಿರಸ್ತೇದಾರ್ ಎನ್.ಎಂ ಬಸವರಾಜ್, ಚುನಾವಣಾ ಶಾಖೆ ಸಿಬ್ಬಂದಿ ರವಿ, ಸೌಜನ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.