ಗುರುವಾರ, ಡಿಸೆಂಬರ್ 14, 2023
ಸೇತುವೆ ಕಾಮಗಾರಿ ಮುಕ್ತಾಯಗೊಳಿಸಿ ಸಾರ್ವಜನಿಕ ಸೇವೆಗೆ ಸಮರ್ಪಿಸಿ
ಬೊಮ್ಮನಕಟ್ಟೆ ಹೌಸಿಂಗ್ ಬೋರ್ಡ್‌ನಲ್ಲಿ ಗೃಹಿಣಿ ಹತ್ಯೆ
ಡಿ.೧೬ರಂದು ೩೬ನೇ ಶಾಲಾ ವಾರ್ಷಿಕೋತ್ಸವ
ಡಿ.೧೬ರಂದು `ಅನನ್ಯ ಕ್ರೀಡೋತ್ಸವ'
ಭಾನುವಾರ, ಡಿಸೆಂಬರ್ 10, 2023
ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ಎಸ್. ಅರುಣ್ ಕುಮಾರ್
ಭದ್ರಾವತಿ ಹೊಸ ಸಿದ್ದಾಪುರ ನಿವಾಸಿ ಎಸ್. ಅರುಣ್ ಕುಮಾರ್ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್ ಅಭಿನಂದಿಸಿದರು.
ಭದ್ರಾವತಿ : ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಅವರ ಗೆಲುವಿಗೆ ಶ್ರಮಿಸಿದ್ದ ನಗರದ ಹೊಸ ಸಿದ್ದಾಪುರ ನಿವಾಸಿ ಎಸ್. ಅರುಣ್ ಕುಮಾರ್ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.
ಎಸ್. ಅರುಣ್ ಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರಾದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ರವರ ಆದೇಶದ ಮೇರೆಗೆ ಶಾಸಕ ಬಿ.ಕೆ ಸಂಗಮೇಶ್ವರ್ ಅವರ ಶಿಫಾರಸ್ಸಿನಂತೆ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಪುಟ್ಟಸ್ವಾಮಿಗೌಡ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
ಎಸ್. ಅರುಣ್ ಕುಮಾರ್ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಅತಿ ಕಡಿಮೆ ಅವಧಿಯಲ್ಲಿ ಪಕ್ಷ ಸಂಘಟಿಸುವ ಜೊತೆಗೆ ಕ್ಷೇತ್ರದಾದ್ಯಂತ ಹೆಚ್ಚಿನ ಪ್ರಚಾರ ಕೈಗೊಂಡು ಗೆಲುವಿಗೆ ಕಾರಣಕಾರ್ತರಾಗಿದ್ದರು. ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪ್ರಮುಖ ನಾಯಕರೊಂದಿಗೆ ಹಾಗು ಪಕ್ಷದ ಜಿಲ್ಲಾ ಹಾಗು ಸ್ಥಳೀಯ ಪ್ರಮುಖರೊಂದಿಗೆ ಮತ್ತು ಕಾರ್ಯಕರ್ತರೊಂದಿಗೆ ಉತ್ತಮ ಬಾಂಧವ್ಯ ಹೊಂದುವಲ್ಲಿ ಯಶಸ್ವಿಯಾಗಿದ್ದು, ಈ ಹಿನ್ನಲೆಯಲ್ಲಿ ಇದೀಗ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ ಎನ್ನಲಾಗಿದೆ.
ಎಸ್. ಅರುಣ್ ಕುಮಾರ್ ಅವರನ್ನು ಶಾಸಕ ಬಿ.ಕೆ ಸಂಗಮೇಶ್ವರ್, ಮುಖಂಡರಾದ ಬಿ.ಕೆ ಮೋಹನ್, ಬಿ.ಎಸ್ ಗಣೇಶ್, ಎಚ್ ರವಿಕುಮಾರ್, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್, ಗ್ರಾಮಾಂತರ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ ಸೇರಿದಂತೆ ಇನ್ನಿತರರು ಅಭಿನಂದಿಸಿದ್ದಾರೆ.