ಶಿವಮೊಗ್ಗ ಆಶಾ ಜ್ಯೋತಿ ರಕ್ತಕೇಂದ್ರರವರ ಸಹಯೋಗದೊಂದಿಗೆ ಭದ್ರಾವತಿ ನಗರದ ಹೊಸಮನೆ ಶಿವಾಜಿ ಸರ್ಕಲ್, ಹಳೇನಗರ, ನ್ಯೂಟೌನ್ ಮತ್ತು ಸಂಚಾರಿ ಪೊಲೀಸ್ ಠಾಣೆಗಳ ವತಿಯಿಂದ ಭಾನುವಾರ ಆಯೋಜಿಸಲಾಗಿದ್ದ ರಕ್ತದಾನ ಶಿಬಿರ ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಉದ್ಘಾಟಿಸಿದರು.
ಭದ್ರಾವತಿ: ಶಿವಮೊಗ್ಗ ಆಶಾ ಜ್ಯೋತಿ ರಕ್ತಕೇಂದ್ರರವರ ಸಹಯೋಗದೊಂದಿಗೆ ನಗರದ ಹೊಸಮನೆ ಶಿವಾಜಿ ಸರ್ಕಲ್, ಹಳೇನಗರ, ನ್ಯೂಟೌನ್ ಮತ್ತು ಸಂಚಾರಿ ಪೊಲೀಸ್ ಠಾಣೆಗಳ ವತಿಯಿಂದ ಭಾನುವಾರ ಆಯೋಜಿಸಲಾಗಿದ್ದ ರಕ್ತದಾನ ಶಿಬಿರ ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಉದ್ಘಾಟಿಸಿದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿ ಅನಿಲ್‌ಕುಮಾರ್ ಭೂಮಾರೆಡ್ಡಿ, ಪೊಲೀಸ್ ಉಪ ಅಧೀಕ್ಷಕ ಕೆ.ಆರ್ ನಾಗರಾಜು, ಗ್ರಾಮಾಂತರ ವೃತ್ತ ನಿರೀಕ್ಷಕ ಜಗದೀಶ ಹಂಚಿನಾಳ್, ಪೇಪರ್‌ಟೌನ್ ಪೊಲೀಸ್ ಠಾಣೆ ಠಾಣಾಧಿಕಾರಿ ನಾಗಮ್ಮ, ಹಳೇನಗರ ಪೊಲೀಸ್ ಠಾಣೆ ಉಪ ನಿರೀಕ್ಷಕರಾದ ಚಂದ್ರಶೇಖರ್ ನಾಯ್ಕ, ಮಂಜುನಾಥ ಕುರಿ, ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ಉಪ ನಿರೀಕ್ಷಕ ಕೃಷ್ಣಕುಮಾರ್, ಸಂಚಾರಿ ಪೊಲೀಸ್ ಠಾಣೆ ಉಪ ನಿರೀಕ್ಷಕಿ ಶಾಂತಲ ಸೇರಿದಂತೆ ವಿವಿಧ ಠಾಣೆಗಳ ಉಪ ನಿರೀಕ್ಷಕರು, ಸಿಬ್ಬಂದಿ ವರ್ಗದವರು ಮತ್ತು ಆಶಾ ಜ್ಯೋತಿ ರಕ್ತಕೇಂದ್ರದ ಸಿಬ್ಬಂದಿಗಳು, ನಗರದ ಜೀವ ಸಂಜೀವಿನ ಸ್ವಯಂ ಪ್ರೇರಿತ ರಕ್ತ ಕೇಂದ್ರದ ಹರೀಶ್ ಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಹಳೇನಗರ ಪೊಲೀಸ್ ಠಾಣೆ ಆವರಣದಲ್ಲಿ ಜರುಗಿದ ಶಿಬಿರದಲ್ಲಿ ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಹಾಗು ಸಾರ್ವಜನಿಕರು ಸೇರಿದಂತೆ ಒಟ್ಟು ೬೫ ದಾನಿಗಳು ರಕ್ತದಾನ ಮಾಡಿದರು.
ಪೊಲೀಸ್ ಇಲಾಖೆಯಲ್ಲಿ ಹೆಡ್ ಕಾನ್ಸ್‌ಸ್ಟೇಬಲ್ ಹುದ್ದೆಯಲ್ಲಿರುವ ಹಾಲೇಶಪ್ಪನವರು ಓರ್ವ ರಕ್ತದಾನಿಯಾಗಿದ್ದು, ಅಲ್ಲದೆ ಪರಿಸರ ಪ್ರೇಮಿಯಾಗಿದ್ದಾರೆ. ಹಾಲೇಶಪ್ಪನವರು ಸುಮಾರು ೪೦ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿದ್ದು, ಅಲ್ಲದೆ ರಕ್ತ ಅವಶ್ಯಕತೆಯ ತುರ್ತು ಸಂದರ್ಭದಲ್ಲಿ ನೆರವಿಗೆ ಧಾವಿಸುತ್ತಿದ್ದಾರೆ. ಇವರ ಪ್ರಯತ್ನದಿಂದಾಗಿ ಪ್ರತಿ ಭಾನುವಾರ ಇಲಾಖೆ ಅಧಿಕಾರಿಗಳು ಹಾಗು ಸಿಬ್ಬಂದಿಗಳ ಸಹಕಾರ ಪಡೆದು ಶಿಬಿರಗಳನ್ನು ಆಯೋಜಿಸಿಕೊಂಡು ಬರುತ್ತಿದ್ದಾರೆ. ಶಿಬಿರ ಯಶಸ್ವಿಗೊಳಿಸಿದ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಹಾಗು ರಕ್ತದಾನಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.