ಭದ್ರಾವತಿ ಆಕಾಶವಾಣಿ ಕೇಂದ್ರಕ್ಕೆ ಇದೀಗ ೬೦ರ ಸಂಭ್ರಮ. ಶುಕ್ರವಾರ ವಜ್ರ ಮಹೋತ್ಸವ ಅದ್ದೂರಿ ಆಚರಣೆಗೆ ಸಿದ್ದತೆಗಳು ನಡೆದಿವೆ.
ಭದ್ರಾವತಿ : ಇಲ್ಲಿನ ಭದ್ರಾವತಿ ಆಕಾಶವಾಣಿ ಕೇಂದ್ರಕ್ಕೆ ಇದೀಗ ೬೦ರ ಸಂಭ್ರಮ. ಶುಕ್ರವಾರ ವಜ್ರ ಮಹೋತ್ಸವ ಅದ್ದೂರಿ ಆಚರಣೆಗೆ ಸಿದ್ದತೆಗಳು ನಡೆದಿವೆ.
ನಗರದ ಜೆಪಿಎಸ್ ಕಾಲೋನಿಯಲ್ಲಿರುವ ಆಡಳಿತ ಕಛೇರಿಯಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಆಕಾಶವಾಣಿ ಕೇಂದ್ರವನ್ನು ವಿದ್ಯುತ್ ದೀಪಗಳಿಂದ, ಬಣ್ಣ ಬಣ್ಣದ ರಂಗೋಲಿ ಚಿತ್ತಾರಗಳಿಂದ, ತಳಿರುತೋರಣಗಳಿಂದ ಅಲಂಕರಿಸಲಾಗಿದೆ. ಅಧಿಕಾರಿಗಳು, ಸಿಬ್ಬಂದಿ ವರ್ಗದವರಲ್ಲಿ ಸಂತಸ ಮನೆ ಮಾಡಿದೆ.
ಭದ್ರಾವತಿ ಆಕಾಶವಾಣಿ ಕೇಂದ್ರ :
೦೭.೦೨.೧೯೬೫ರಲ್ಲಿ ಆರಂಭಗೊಂಡ ಭದ್ರಾವತಿ ಆಕಾಶವಾಣಿ ಕೇಂದ್ರ ಆರಂಭದಲ್ಲಿ ಸುಣ್ಣದಹಳ್ಳಿಯಲ್ಲಿ ೬೭೫ ಕಿಲೋ ಹರ್ಟ್ಜ್ ತರಂಗಾಂತರ ಸಾಮರ್ಥ್ಯದ ಒಂದು ಟ್ರಾನ್ಸ್ಮಿಟರ್ ಒಳಗೊಂಡಿದೆ. ಅಲ್ಲದೆ ಜೆಪಿಎಸ್ ಕಾಲೋನಿಯಲ್ಲಿ ಒಂದು ಸ್ಟುಡಿಯೋ ಮತ್ತು ಆಡಳಿತ ಕಛೇರಿಯನ್ನು ಹೊಂದಿದೆ. ಅತಿ ಎತ್ತರದ ಒಂದು ಟವರ್ ಕೂಡ ಹೊಂದಿದೆ. ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ, ಹಾವೇರಿ, ಹಾಸನ್, ನಾರ್ತ್ ಕೆನರಾ, ಉಡುಪಿ ಮತ್ತು ತುಮಕೂರು ನಗರಗಳಲ್ಲಿ ಕ್ಷೇತ್ರ ವ್ಯಾಪ್ತಿಯನ್ನು ಹೊಂದಿದೆ. ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳ ವ್ಯಾಪ್ತಿಯ ಕಾರ್ಯಕ್ರಮಗಳು ಪ್ರಸಾರಗೊಳ್ಳುತ್ತಿವೆ. ಸುಮಾರು ೩೦ ರಿಂದ ೪೦ ಲಕ್ಷ ಶ್ರೋತೃಗಳನ್ನು ತಲುಪುತ್ತಿದೆ.
ಸುಮಾರು ೫ ದಶಕಗಳ ನಂತರ ಎಫ್ಎಂ ಕೇಂದ್ರ ಆರಂಭಗೊಂಡಿದೆ. ಪ್ರಸ್ತುತ ಎಂ.ಎಫ್ ೧೦೩.೫ ಎಂಎಚ್ಝಡ್ ತರಂಗಾಂತರದಲ್ಲಿ ಪ್ರಸಾರಗೊಳ್ಳುತ್ತಿದೆ. ಅಲ್ಲದೆ ಎಂಡಬ್ಲ್ಯೂ ಸಹ ೬೭೫ ಕೆಎಚ್ಝಡ್ ತರಂಗಾಂತರದಲ್ಲಿ ಪ್ರಸಾರಗೊಳ್ಳುತ್ತಿದೆ.