ಬಿಜೆಪಿ ತಾಲೂಕು ಮಂಡಲ ಅಭಿನಂದನಾ ಕಾರ್ಯಕ್ರಮದಲ್ಲಿ ಜಿ. ಧರ್ಮಪ್ರಸಾದ್
ಭದ್ರಾವತಿ ಬಿಜೆಪಿ ಮಂಡಲದ ವತಿಯಿಂದ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಮ್ಯಾಮ್ಕೋಸ್‌ಗೆ ನೂತನವಾಗಿ ಆಯ್ಕೆಯಾದ ೧೯ ನಿರ್ದೇಶಕರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ತಾಲೂಕು ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಭದ್ರಾವತಿ : ಜಿಲ್ಲೆಯಲ್ಲಿ ನಡೆದ ಮ್ಯಾಮ್ಕೋಸ್ ಚುನಾವಣೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಶ್ರಮವಹಿಸಿದ ಹಿನ್ನಲೆಯಲ್ಲಿ ೧೯ ಅಭ್ಯರ್ಥಿಗಳು ಆಯ್ಕೆಯಾಗಿದ್ದು, ಇದು ಸಂಘಟಿತವಾಗಿ ಕಾರ್ಯನಿರ್ವಹಿಸಿದ ಫಲ ಎಂದು ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಹೇಳಿದರು.
ಅವರು ಭಾನುವಾರ ಮಂಡಲದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮ್ಯಾಮ್ಕೋಸ್‌ಗೆ ನೂತನವಾಗಿ ಆಯ್ಕೆಯಾದ ೧೯ ನಿರ್ದೇಶಕರಿಗೆ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪಕ್ಷದ ಪರವಾಗಿ ೧೯ ಅಭ್ಯರ್ಥಿಗಳನ್ನು ಬೆಂಬಲಿಸಿ ಅವರ ಗೆಲುವಿಗೆ ಶಕ್ತಿಮೀರಿ ಶ್ರಮಿಸಲಾಗಿದ್ದು, ಬೆಂಬಲಿಸಿದ ಎಲ್ಲಾ ೧೯ ನಿರ್ದೇಶಕರು ಸಹ ಗೆಲುವು ಸಾಧಿಸಿರುವುದು ಸಂತೋಷದ ಸಂಗತಿಯಾಗಿದೆ. ಇದು ಪಕ್ಷದ ಮುಖಂಡರು, ಕಾರ್ಯಕರ್ತರಲ್ಲಿ ಮತ್ತಷ್ಟು ಹುಮ್ಮಸ್ಸು ಹೆಚ್ಚಿಸಿದೆ ಎಂದರು.
ಮ್ಯಾಮ್ಕೋಸ್ ಜಿಲ್ಲಾಧ್ಯಕ್ಷ ಮಹೇಶ್ ಉಲ್ಕುಳಿ ಮಾತನಾಡಿ, ಸಹಕಾರ ಭಾರತಿ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಂತಹ ಚುನಾವಣೆಯನ್ನು ಸಮರ್ಥವಾಗಿ ಎದುರಿಸಿದೆ. ೧೯ ಅಭ್ಯರ್ಥಿಗಳ ಗೆಲುವಿಗೆ ಕಾರಣಕರ್ತರಾದ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಮುಖಂಡರು, ಕಾರ್ಯಕರ್ತರ ಶ್ರಮ ಹೆಚ್ಚಿನದ್ದಾಗಿದೆ ಎಂದರು.
ಪಕ್ಷದ ಜಿಲ್ಲಾ ಉಪಾಧ್ಯಕ್ಷ ಜಿ. ಅನಂದ್ ಕುಮಾರ್, ಹೊಳೆಹೊನ್ನೂರು ಮಂಡಲ ಅಧ್ಯಕ್ಷ ಮಲ್ಲೇಶಪ್ಪ, ಜಿಲ್ಲಾ ವಿಶೇಷ ಆಹ್ವಾನಿತ ಎಚ್. ತೀರ್ಥಯ್ಯ, ಸಹಕಾರ ಭಾರತಿ ಜಿಲ್ಲಾ ನಿರ್ದೇಶಕರಾದ ಕುಪೇಂದ್ರಪ್ಪ, ಕೀರ್ತಿರಾಜ್, ಮಹೇಶ್, ಭೀಮಣ್ಣ, ವಿಶ್ವ ಹಿಂದೂ ಪರಿಷದ್ ಜಿಲ್ಲಾ ಉಪಾಧ್ಯಕ್ಷ ಶಿವಕುಮಾರ್, ಸಂಘದ ಪ್ರಮುಖರಾದ ಡಾ. ದತ್ತಾತ್ರೆ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಚೆನ್ನೇಶ್ ಹಾಗೂ ಮೊಸರಳ್ಳಿ ಅಣ್ಣಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.