ಮೇ.೪ರಂದು ಲಯನ್ಸ್ ಕ್ಲಬ್ ಶುಗರ್ ಟೌನ್ ಸಭಾಂಗಣದಲ್ಲಿ ಸ್ನೇಹ ಸಮ್ಮಿಲನ ಸಂಭ್ರಮ
ಬಿ.ಎ ಮಂಜುನಾಥ್
ಭದ್ರಾವತಿ : ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಸುಮಾರು ೩೯ ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಬಿ.ಎ ಮಂಜುನಾಥ್‌ರವರಿಗೆ ಗೆಳೆಯರ ಬಳಗದ ವತಿಯಿಂದ ಸ್ನೇಹ ಸಮ್ಮಿಲನ ಸಂಭ್ರಮ ಕಾರ್ಯಕ್ರಮ ಮೇ.೪ರ ಭಾನುವಾರ ನಗರದ ಜೆಟಿಎಸ್ ಶಾಲೆ ಸಮೀಪದಲ್ಲಿರುವ ಲಯನ್ಸ್ ಕ್ಲಬ್ ಶುಗರ್ ಟೌನ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಮಂಜುನಾಥ್‌ರವರು ನಗರದ ಸರ್.ಎಂ.ವಿ ಕಲಾ ಮತ್ತು ವಾಣಿಜ್ಯ ಕಾಲೇಜು, ಶ್ರೀ ಕೃಷ್ಣ ಕಾಲೇಜು, ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗು ತರೀಕೆರೆ ಸರ್ಕಾರಿ ಕಾಲೇಜು ಸೇರಿದಂತೆ ವಿವಿಧ ಕಾಲೇಜುಗಳಲ್ಲಿ ಒಟ್ಟು ೩೯ ವರ್ಷ ಸುಧೀರ್ಘ ಸೇವೆ ಸಲ್ಲಿಸಿ ಏ.೩೦ರಂದು ನಿವೃತ್ತಿ ಹೊಂದಿದ್ದಾರೆ.
ಮಂಜುನಾಥ್‌ರವರು ಸರ್ಕಾರಿ ವೃತ್ತಿ ಬದುಕಿನ ಜೊತೆಗೆ ಗಾಯಕರಾಗಿ ಗುರುತಿಸಿಕೊಂಡಿದ್ದು, ತಮ್ಮದೇ ಗಾಯಕರ ತಂಡವನ್ನು ಕಟ್ಟಿಕೊಂಡು ರಾಜ್ಯದ ವಿವಿಧೆಡೆ ಕಾರ್ಯಕ್ರಮಗಳನ್ನು ನೀಡುವ ಮೂಲಕ ಕಲಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಪ್ರಸ್ತುತ ಶಿವಮೊಗ್ಗ ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘದ ಅಧ್ಯಕ್ಷರಾಗಿದ್ದಾರೆ.
ಇವರ ಸರ್ಕಾರಿ ಸೇವೆಯ ಸಾರ್ಥಕ ಬದುಕನ್ನು ಗುರುತಿಸಿ ಗೆಳೆಯರ ಬಳಗ ವಿಶಿಷ್ಟವಾಗಿ ಅಭಿನಂದಿಸಲು ಮುಂದಾಗಿದೆ. ಕಾರ್ಯಕ್ರಮವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಲಿದ್ದು, ತರೀಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಟಿ. ಮಂಜುನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ.
ವಿಧಾನಪರಿಷತ್ ಸದಸ್ಯೆ ಬಲ್ಕೀಶ್ ಬಾನು, ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ ಸೇರಿದಂತೆ ನಗರಸಭೆ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳು ಮುಖಂಡರು, ಗಣ್ಯರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಗೆಳೆಯರ ಬಳಗ ಕೋರಿದೆ.