ಭದ್ರಾವತಿ ಪಿಆರ್‌ಎಲ್ ಸಿವಿಲ್ ಜಡ್ಜ್ ಅಂಡ್ ಜೆಎಂಎಫ್‌ಸಿ ನ್ಯಾಯಾಲಯ ಮಧ್ಯ ಸೇವಿಸಿ ವಾಹನ ಚಲಾಯಿಸಿ ೨ನೇ ಬಾರಿ ಕಾನೂನು ಉಲ್ಲಂಘಿಸಿದ ಚಾಲಕರೊಬ್ಬರಿಗೆ ೧೫ ಸಾವಿರ ರು. ದಂಡ ವಿಧಿಸಿದೆ.
ಭದ್ರಾವತಿ : ಇತ್ತೀಚೆಗೆ ನಗರದಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪ್ರಮುಖವಾಗಿ ವಾಹನ ಚಾಲನೆ ಸಂದರ್ಭದಲ್ಲಿ ಮದ್ಯ ಸೇವನೆ ಅಪಘಾತಕ್ಕೆ ಪ್ರಮುಖ ಕಾರಣವಾಗಿದೆ. ಈ ಹಿಂದೆ ಮದ್ಯ ಸೇವಿಸಿ ವಾಹನ ಚಾಲನೆ ಮಾಡಿ ಪೊಲೀಸರ ಕೈಗೆ ಸಿಕ್ಕಿ ಬಿದ್ದವರಿಗೆ ಸಾಮಾನ್ಯವಾಗಿ ಕಡಿಮೆ ದಂಡ ವಿಧಿಸಲಾಗುತ್ತಿತ್ತು. ಆದರೆ ಇತ್ತೀಚೆಗೆ ಕೆಲವು ವರ್ಷಗಳಿಂದ ದಂಡ ಏರಿಕೆ ಮಾಡಲಾಗಿದ್ದು, ಪ್ರಸ್ತುತ ಪ್ರಕರಣವೊಂದರಲ್ಲಿ ಇಲ್ಲಿನ ಪಿಆರ್‌ಎಲ್ ಸಿವಿಲ್ ಜಡ್ಜ್ ಅಂಡ್ ಜೆಎಂಎಫ್‌ಸಿ ನ್ಯಾಯಾಲಯ ೨ನೇ ಬಾರಿ ಕಾನೂನು ಉಲ್ಲಂಘಿಸಿದ ಚಾಲಕರೊಬ್ಬರಿಗೆ ೧೫ ಸಾವಿರ ರು. ದಂಡ ವಿಧಿಸಿದೆ.
ಕೆಲವು ತಿಂಗಳ ಹಿಂದೆ ಮದ್ಯ ಸೇವಿಸಿ ವಾಹನ ಚಾಲನೆ ಮಾಡಿ ಮೊದಲ ಬಾರಿಗೆ ಸಿಕ್ಕಿ ಬಿದ್ದವರಿಗೆ ನ್ಯಾಯಾಲಯ ೧೦ ಸಾವಿರ ರು. ದಂಡ ವಿಧಿಸಿ ಎಚ್ಚರಿಕೆ ನೀಡಿತ್ತು. ಇದೀಗ ೨ನೇ ಬಾರಿ ಕಾನೂನು ಉಲ್ಲಂಘಿಸಿರುವ ವಾಹನ ಚಾಲಕರೊಬ್ಬರಿಗೆ ೧೫ ಸಾವಿರ ರು. ದಂಡ ವಿಧಿಸಿ ಪುನಃ ನ್ಯಾಯಾಲಯ ಎಚ್ಚರಿಕೆ ನೀಡಿದೆ.
ಮದ್ಯ ಸೇವಿಸಿ ವಾಹನ ಚಲಾಯಿಸುವವರು ಈಗಲಾದರೂ ಅರ್ಥಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣದ ಅಥವಾ ಕಠಿಣ ಕ್ರಮ ಕೈಗೊಳ್ಳುವ ಮುನ್ನಚ್ಚರಿಕೆ ನ್ಯಾಯಾಲಯ ನೀಡಿದೆ. ವಾಹನ ಚಾಲಕರು ರಸ್ತೆ ನಿಯಮಗಳನ್ನು ಪಾಲಿಸಿ ಗೌರವಿಸುವಂತೆ ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.