ಭದ್ರಾವತಿ ನ್ಯೂಟೌನ್, ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಶ್ರೀ ಕರುಮಾರಿಯಮ್ಮ ದೇವಸ್ಥಾನ
ಭದ್ರಾವತಿ : ನಗರದ ನ್ಯೂಟೌನ್, ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಶ್ರೀ ಕರುಮಾರಿಯಮ್ಮ ದೇವಸ್ಥಾನದ ೪೫ನೇ ವರ್ಷದ ಕರಗ ಮಹೋತ್ಸವ ಶುಕ್ರವಾರದಿಂದ ಆರಂಭಗೊಂಡಿದ್ದು, ಮೇ.೨೫ರ ಭಾನುವಾರ ಕರಗ ಉತ್ಸವ ನಡೆಯಲಿದೆ.
ಮೇ.೨೪ರ ಬೆಳಿಗ್ಗೆ ೧೦ ಗಂಟೆಗೆ ಅಮ್ಮನವರಿಗೆ ಪಂಚಾಮೃತ ಅಭಿಷೇಕ, ಮಧ್ಯಾಹ್ನ ೧೨ ಗಂಟೆಗೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ, ಸಂಜೆ ೬ ಗಂಟೆಗೆ ಉಮಾ ಮಹಿಳಾ ಭಜನಾ ಮಂಡಳಿಯಿಂದ ಭಕ್ತಿಗೀತೆಗಳು ನಡೆಯಲಿವೆ. ಮೇ.೨೫ರ ಭಾನುವಾರ ೯ ಗಂಟೆಗೆ ಅಮ್ಮನವರಿಗೆ ಎಳನೀರು ಮತ್ತು ಪಂಚಾಮೃತ ಅಭಿಷೇಕ, ತೀರ್ಥಪ್ರಸಾದ ವಿನಿಯೋಗ, ಮಧ್ಯಾಹ್ನ ೧೨ ಗಂಟೆಗೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ, ಮಧ್ಯಾಹ್ನ ೧೨ ಗಂಟೆಗೆ ಶ್ರೀ ದೇವಿಗೆ ಬುಳ್ಳಾಪುರ ಚಾನೆಲ್ ಬಳಿ ಶಕ್ತಿ ಕರಗ ಸ್ಥಾಪನೆ ಮಾಡಿ ಮೆರವಣಿಗೆಯ ಮೂಲಕ ದೇವಸ್ಥಾನ ತಂದು ಮಹಾಮಂಗಳಾರತಿಯೊಂದಿಗೆ ತೀರ್ಥ ಪ್ರಸಾದ ವಿನಿಯೋಗ ಜರುಗಲಿದೆ.
ನಂತರ ದೇವಿಗೆ ಅಂಬಲಿ ಮತ್ತು ಅನ್ನದಾನ ಸಮರ್ಪಣೆ ನಡೆಯಲಿದ್ದು, ಸಂಜೆ ದೇವಿಗೆ ಅರಿಶಿನ ಅಭಿಷೇಕ ಮತ್ತು ಮಹಾ ಮಂಗಳಾರತಿಯೊಂದಿಗೆ ಕರಗ ಭದ್ರಾ ನದಿಯಲ್ಲಿ ವಿಸರ್ಜನೆ ನಡೆಯಲಿದೆ.
ಸಂಸದ ಬಿ.ವೈ ರಾಘವೇಂದ್ರ, ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜ್‌ಕುಮಾರ್, ಉಪಾಧ್ಯಕ್ಷ ಎಂ. ಮಣಿ ಎಎನ್‌ಎಸ್, ಸದಸ್ಯರಾದ ಬಿ.ಕೆ ಮೋಹನ್, ಸರ್ವಮಂಗಳ ಭೈರಪ್ಪ, ಕಾಂತರಾಜ್, ನಾಗರತ್ನ ಅನಿಲ್‌ಕುಮಾರ್, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ, ನಗರಸಭೆ ಮಾಜಿ ಸದಸ್ಯರಾದ ಎಂ.ಎ ಅಜಿತ್, ಎಂ. ರಾಜು, ಆಂಜನಪ್ಪ, ಲಲಿತಮ್ಮ ಕೃಷ್ಣಪ್ಪ, ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಮುಖಂಡರಾದ ಉದ್ಯಮಿ ಎ. ಮಾಧು, ಎಂ. ಮಂಜುನಾಥ್ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ.
ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕರಗ ಮಹೋತ್ಸವ ಯಶಸ್ವಿಗೊಳಿಸುವಂತೆ ದೇವಸ್ಥಾನ ಸೇವಾ ಸಮಿತಿ ಕೋರಿದೆ.