Saturday, June 7, 2025

ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ೧೨೪ ಮಂದಿಗೆ ತಪಾಸಣೆ

ಭದ್ರಾವತಿಯಲ್ಲಿ ರೋಟರಿ ಕ್ಲಬ್ ಮತ್ತು ವೀರಶೈವ ಲಿಂಗಾಯಿತ ಮಹಿಳಾ ಸಮಾಜ, ಶಾಶ್ವತಿ ಮಹಿಳಾ ಸಮಾಜ ಹಾಗು ವೀರಶೈವ ಸೇವಾ ಸಮಿತಿ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗ ನಾರಾಯಣ ಹೃದಯಾಲಯ ಆಸ್ಪತ್ರೆ ವತಿಯಿಂದ ತಾಲೂಕು ಕಛೇರಿ ರಸ್ತೆಯಲ್ಲಿರುವ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಉಚಿತ ಆರೋಗ್ಯ ತಪಾಸಣೆ ಮತ್ತು ಮೂಳೆ ಸಾಂದ್ರತಾ ಪರೀಕ್ಷೆ ಶಿಬಿರದಲ್ಲಿ ಪಾಲ್ಗೊಂಡಿದ್ದ ವೈದ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. 
    ಭದ್ರಾವತಿ : ನಗರದ ರೋಟರಿ ಕ್ಲಬ್ ಮತ್ತು ವೀರಶೈವ ಲಿಂಗಾಯಿತ ಮಹಿಳಾ ಸಮಾಜ, ಶಾಶ್ವತಿ ಮಹಿಳಾ ಸಮಾಜ ಹಾಗು ವೀರಶೈವ ಸೇವಾ ಸಮಿತಿ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗ ನಾರಾಯಣ ಹೃದಯಾಲಯ ಆಸ್ಪತ್ರೆ ವತಿಯಿಂದ ತಾಲೂಕು ಕಛೇರಿ ರಸ್ತೆಯಲ್ಲಿರುವ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಉಚಿತ ಆರೋಗ್ಯ ತಪಾಸಣೆ ಮತ್ತು ಮೂಳೆ ಸಾಂದ್ರತಾ ಪರೀಕ್ಷೆ ಶಿಬಿರದಲ್ಲಿ ಸುಮಾರು ೧೨೪ ಮಂದಿ ಪಾಲ್ಗೊಂಡು ಸದುಪಯೋಗ ಪಡೆದುಕೊಂಡರು. 
    ಶಿಬಿರ ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೨ ಗಂಟೆಯವರೆಗೆ ನಡೆಯಿತು. ಬಿ.ಪಿ, ಶುಗರ್, ಇಸಿಜಿ, ಹೃದಯ ಸಂಬಂಧ ಪರೀಕ್ಷೆ ಹಾಗು ರಕ್ತ ಪರೀಕ್ಷೆ ಮತ್ತು ತಜ್ಞ ವೈದ್ಯರುಗಳಿಂದ ಸಮಾಲೋಚನೆ ನಡೆಯಿತು. 
    ಎನ್‌ಸಿಆರ್ ಹೆಲ್ತ್ ಕೇರ್ ಇಂಡಿಯಾದ ಕುಲಕರ್ಣಿಯವರು ಮೂಳೆ ಸಾಂದ್ರತೆ ಪರೀಕ್ಷೆ ನಡೆಸಿದರು. ಉಳಿದಂತೆ ನಾರಾಯಣ ಹೃದಯಾಲಯ ಆಸ್ಪತ್ರೆ ವೈದ್ಯರಾದ ಡಾ. ವಿವೇಕ್ ಮತ್ತು ಡಾ. ಯಶಸ್‌ರವರು ಹೃದಯ ಸಂಬಂಧಿ ಕಾಯಿಲೆಗಳ ಕುರಿತು ತಪಾಸಣೆ ನಡೆಸುವ ಮೂಲಕ ರೋಗಿಗಳೊಂದಿಗೆ ಸಮಾಲೋಚನೆ ನಡೆಸಿದರು. 
    ಆಸ್ಪತ್ರೆ ಮಾರುಕಟ್ಟೆ ವಿಭಾಗದ ಗಣೇಶ್, ನರ್ಸ್‌ಗಳಾದ ಚಂದ್ರಕಲಾ, ತಾಯಿಷಾ, ರೋಟರಿ ಕ್ಲಬ್ ಅಧ್ಯಕ್ಷ ರಾಘವೇಂದ್ರ ಉಪಾಧ್ಯಾಯ, ಎಮೆರಿಟಸ್ ಪ್ರಾಧ್ಯಾಪಕಿ ಡಾ. ವಿಜಯದೇವಿ, ವೀರಶೈವ ಲಿಂಗಾಯಿತ ಮಹಿಳಾ ಸಮಾಜದ ಅಧ್ಯಕ್ಷೆ ನಾಗರತ್ನ ಕೋಠಿ, ಗೌರವಾಧ್ಯಕ್ಷೆ ಆರ್.ಎಸ್ ಶೋಭಾ, ಉಪಾಧ್ಯಕ್ಷೆ ವಿಜಯ ಜಗನ್ನಾಥ್, ಶಾಶ್ವತಿ ಮಹಿಳಾ ಸಮಾಜದ ಅಧ್ಯಕ್ಷೆ ರೂಪಾರಾವ್, ಗೌರವಾಧ್ಯಕ್ಷೆ ಯಶೋಧವೀರಭದ್ರಪ್ಪ, ಪ್ರಮುಖರಾದ ವಾಗೀಶ್‌ಕೋಠಿ, ಅಖಿಲ ಭಾರತ ವೀರಶೈವ ಸಮಾಜದ ನಿರ್ದೇಶಕಿ ಉಷಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

ವಿಶ್ವ ಪರಿಸರ ದಿನ, ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಲೇಖನ ಸಾಮಾಗ್ರಿ ವಿತರಣೆ

ವಿಶಿಷ್ಟ ಸಾಮಾಜಿಕ ಸೇವಾಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಶ್ರೀ ತಿರುಮಲ ಚಾರಿಟೇಬಲ್ ಫೌಂಡೇಷನ್ 

ಭದ್ರಾವತಿ ನಗರದಲ್ಲಿ ಕೆಲವು ವರ್ಷಗಳಿಂದ ವಿಭಿನ್ನ  ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಶ್ರೀ ತಿರುಮಲ ಚಾರಿಟೇಬಲ್ ಫೌಂಡೇಷನ್ ವತಿಯಿಂದ ಮೈಸೂರು ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಸ್ವಯಂ ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈರವರ ಜನ್ಮದಿನದ ಅಂಗವಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಲೇಖನ ಸಾಮಾಗ್ರಿ ವಿತರಣೆ ಹಾಗು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. 
    ಭದ್ರಾವತಿ : ನಗರದಲ್ಲಿ ಕೆಲವು ವರ್ಷಗಳಿಂದ ವಿಭಿನ್ನ  ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಶ್ರೀ ತಿರುಮಲ ಚಾರಿಟೇಬಲ್ ಫೌಂಡೇಷನ್ ವತಿಯಿಂದ ಮೈಸೂರು ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಸ್ವಯಂ ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈರವರ ಜನ್ಮದಿನದ ಅಂಗವಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಲೇಖನ ಸಾಮಾಗ್ರಿ ವಿತರಣೆ ಹಾಗು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. 
    ಕಾಗದನಗರ ಪಶ್ಚಿಮ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಉಚಿತವಾಗಿ ನೋಟ್ ಪುಸ್ತಕ, ಪೆನ್ಸಿಲ್, ಪೆನ್ ಸೇರಿದಂತೆ ಇನ್ನಿತರ ಲೇಖನ ಸಾಮಗ್ರಿಗಳನ್ನು ವಿತರಿಸುವ ಜೊತೆಗೆ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಅಲ್ಲದೆ ವಿಶ್ವ ಪರಿಸರ ದಿನದ ಅಂಗವಾಗಿ ಸುಮಾರು ೧೦ ಸಸಿಗಳನ್ನು ಶಾಲಾ ಆವರಣದಲ್ಲಿ ನೆಡುವ ಮೂಲಕ ಪರಿಸರ ದಿನ ಆಚರಿಸಲಾಯಿತು. 
    ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಸಂಪನ್ಮೂಲ ವ್ಯಕ್ತಿಳಾದ ದಯಾನಂದ್ ಮತ್ತು ಸಿ. ಚನ್ನಪ್ಪ, ಪೇಪರ್‌ಟೌನ್ ಪೊಲೀಸ್ ಠಾಣೆ ಉಪ ನಿರೀಕ್ಷಕಿ ಕವಿತಾ, ಸಹಾಯಕ ಉಪ ನಿರೀಕ್ಷಕ ಕೃಷ್ಣಮೂರ್ತಿ, ಸಂಚಾರಿ ಪೊಲೀಸ್ ಠಾಣೆಯ ಹಸಿರು ಯೋಧ ಹಾಲೇಶಪ್ಪ, ಹೋಂ ಆಫ್ ಹೋಂ ಜನಸ್ನೇಹಿ ಆಶ್ರಮದ ರಾಜುನಾಯ್ಕ ಕನ್ನಡಿಗ, ಶ್ರೀ ತಿರುಮಲ ಚಾರಿಟೇಬಲ್ ಫೌಂಡೇಷನ್ ಸಂಸ್ಥಾಪಕ ಪ್ರಶಾಂತ್, ಯುವ ಮುಖಂಡರಾದ ವಿಜಯ್, ತೀರ್ಥೇಶ್, ಶರತ್, ರಂಗಸ್ವಾಮಿ, ಎಂ.ಡಿ ಸಲ್ಮಾನ್, ಅಮ್ಜದ್, ಶಶಿಯೋಗಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ತಹಸೀಲ್ದಾರ್ ವಸತಿ ಗೃಹ ಆವರಣದಲ್ಲಿ ಪರಿಸರ ದಿನ ಆಚರಣೆ


ಭದ್ರಾವತಿ ತಾಲೂಕು ಕಛೇರಿ ರಸ್ತೆ, ಹನುಮಂತನಗರದಲ್ಲಿರುವ ತಾಲೂಕು ದಂಡಾಧಿಕಾರಿ, ತಹಸೀಲ್ದಾರ್‌ರವರ ವಸತಿ ಗೃಹದ ಆವರಣದಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಿಸಲಾಯಿತು. 
    ಭದ್ರಾವತಿ : ತಾಲೂಕು ಕಛೇರಿ ರಸ್ತೆ, ಹನುಮಂತನಗರದಲ್ಲಿರುವ ತಾಲೂಕು ದಂಡಾಧಿಕಾರಿ, ತಹಸೀಲ್ದಾರ್‌ರವರ ವಸತಿ ಗೃಹದ ಆವರಣದಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಿಸಲಾಯಿತು. 
    ತಹಸೀಲ್ದಾರ್ ಪರುಸಪ್ಪ ಕುರುಬರ ಸಸಿ ನೆಡುವ ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರು ಕಾಳಜಿವಹಿಸಬೇಕೆಂದರು. ಉಪ ತಹಸೀಲ್ದಾರ್‌ಗಳಾದ ಎ.ವಿ ರಾಜ್ ಅರಸ್, ಗಿರಿರಾಜ್, ಮಂಜಾನಾಯ್ಕ, ರಾಜಸ್ವ ನಿರೀಕ್ಷಕರಾದ ಎಸ್. ರಾಜು, ಕೆ.ಆರ್ ಪ್ರಶಾಂತ್, ಜಿ.ಆರ್ ಜಗನ್ನಾಥ್, ಎನ್‌ಎಸ್‌ಯುಐ ಗೌರವಾಧ್ಯಕ್ಷ ಆರ್. ಮುರುಗೇಶ್ ಸೇರಿದಂತೆ ತಾಲೂಕು ಕಛೇರಿ ಅಧಿಕಾರಿಗಳು ಹಾಗು ಸಿಬ್ಬಂದಿಗಳು ಉಪಸ್ಥಿತರಿದ್ದರು. 

Friday, June 6, 2025

ಪೌರಾಯುಕ್ತರ ವರ್ಗಾವಣೆ ವದಂತಿಗೆ ತೆರೆ

ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್ 
    ಭದ್ರಾವತಿ : ನಗರಸಭೆ ಪೌರಾಯುಕ್ತರು ವರ್ಗಾವಣೆಗೊಳ್ಳುತ್ತಾರೆಂಬ ವದಂತಿಗೆ ಇದೀಗ ತೆರೆಬಿದ್ದಿದ್ದು, ಸುಮಾರು ೧ ವಾರ ಕಾಲ ರಜೆ ಮೇಲೆ ತೆರಳಿದ್ದ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್ ಶುಕ್ರವಾರ ಕಛೇರಿಗೆ ಹಾಜರಾಗಿದ್ದಾರೆ. 
    ಪ್ರಭಾರ ಪೌರಾಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದ ವ್ಯವಸ್ಥಾಪಕಿ ಸುನಿತಾ ಕುಮಾರಿಯವರು ಮುಂಬಡ್ತಿ ಪಡೆದು ಪೌರಾಯುಕ್ತರ ಹುದ್ದೆಗೆ ತೆರಳಲಿದ್ದಾರೆಂಬ ಮಾಹಿತಿಗಳು ಹರಿದಾಡುತ್ತಿದ್ದವು. ಈ ನಡುವೆ ರಜೆ ಮೇಲೆ ತೆರಳಿದ್ದ ಪೌರಾಯುಕ್ತರು ಸಹ ಮುಂಬಡ್ತಿ ಪಡೆದು ಬೇರೆಡೆ ವರ್ಗಾವಣೆಗೊಳ್ಳುತ್ತಾರೆಂಬ ವದಂತಿಗಳು ಹರಿದಾಡುತ್ತಿದ್ದವು. ಆದರೆ ಪೌರಾಯುಕ್ತರು ಮರಳಿ ಕರ್ತವ್ಯಕ್ಕೆ ಹಾಜರಾಗುವ ಮೂಲಕ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದಾರೆ. 
    ಸುಮಾರು ೧೮ ತಿಂಗಳಿನಿಂದ ಇಲ್ಲಿನ ಪೌರಾಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಶುಕ್ರವಾರ ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಅಧ್ಯಕ್ಷತೆಯಲ್ಲಿ ವಿಶೇಷ ಸಾಮಾನ್ಯಯಲ್ಲಿ ಪೌರಾಯುಕ್ತರು ಪಾಲ್ಗೊಂಡಿದ್ದರು. 

ವಿಐಎಸ್‌ಎಲ್‌ಗೆ ಉಕ್ಕು ಪ್ರಾಧಿಕಾರದ ಉನ್ನತ ಅಧಿಕಾರಿಗಳ ತಂಡ ಭೇಟಿ : ಪರಿಶೀಲನೆ

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಪ್ರಾಧಿಕಾರದ ಅಧ್ಯಕ್ಷರಾದ ಅಮರೇಂದು ಪ್ರಕಾಶ್ ಮತ್ತು ಕೇಂದ್ರ ಉಕ್ಕು ಕಾರ್ಯದರ್ಶಿ ಸಂದೀಪ್ ಪೌಂಡ್ರಿಕ್ ಅವರನ್ನೊಳಗೊಂಡ ಉನ್ನತ ಅಧಿಕಾರಿಗಳ ತಂಡ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು. 
    ಭದ್ರಾವತಿ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಪ್ರಾಧಿಕಾರದ ಅಧ್ಯಕ್ಷರಾದ ಅಮರೇಂದು ಪ್ರಕಾಶ್ ಮತ್ತು ಕೇಂದ್ರ ಉಕ್ಕು ಕಾರ್ಯದರ್ಶಿ ಸಂದೀಪ್ ಪೌಂಡ್ರಿಕ್ ಅವರನ್ನೊಳಗೊಂಡ ಉನ್ನತ ಅಧಿಕಾರಿಗಳ ತಂಡ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು. 
    ಕಾರ್ಖಾನೆಗೆ ಭೇಟಿ ನೀಡಿದ ತಂಡ ಯಂತ್ರಗಳ ಕಾರ್ಯನಿರ್ವಹಣೆ, ಉತ್ಪಾದನೆ ಸಾಮರ್ಥ್ಯ, ಗುಣಮಟ್ಟ, ತಾಂತ್ರಿಕ ಬಳಕೆ, ಸಂಪನ್ಮೂಲ, ಮಾರುಕಟ್ಟೆ ವಹಿವಾಟು ಇತ್ಯಾದಿಗಳ ಕುರಿತು ಪರಿಶೀಲನೆ ನಡೆಸಿತು. ನಂತರ ಕಾರ್ಖಾನೆಯ ಅಧಿಕಾರಿಗಳು, ಕಾಯಂ ಹಾಗು ಗುತ್ತಿಗೆ ಕಾರ್ಮಿಕರ ಸಂಘಗಳೊಂದಿಗೆ ಕಾರ್ಖಾನೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿತು ಎಂದು ತಿಳಿದು ಬಂದಿದೆ. 
    ಉನ್ನತ ಅಧಿಕಾರಿಗಳ ನಿಯೋಗದಲ್ಲಿ ಉಕ್ಕು ಪ್ರಾಧಿಕಾರದ ಜಂಟಿ ಕಾರ್ಯದರ್ಶಿ ಅಭಿಜಿತ್ ನರೇಂದ್ರ, ತಾಂತ್ರಿಕ ನಿರ್ದೇಶಕ ಎಂ.ಆರ್ ಗುಪ್ತಾ ಇನ್ನಿತರರು ಇದ್ದರು. ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ ಸೇರಿದಂತೆ ಕಾರ್ಖಾನೆಯ ಇನ್ನಿತರ ಅಧಿಕಾರಿಗಳು ಉನ್ನತ ಅಧಿಕಾರಿಗಳ ತಂಡಕ್ಕೆ ಅಗತ್ಯ ಮಾಹಿತಿಗಳನ್ನು ನೀಡಿದರು.
    ಗುರುವಾರ ತಮಿಳುನಾಡಿನ ಸೇಲಂ ಸ್ಟೀಲ್ ಪ್ಲಾಂಟ್ ಕಾರ್ಖಾನೆಗೆ ಭೇಟಿ ನೀಡಿದ್ದ ಉನ್ನತ ಅಧಿಕಾರಿಗಳ ತಂಡ ಬೆಳಿಗ್ಗೆ ಸುಮಾರು ೧೧.೩೦ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಕಾರ್ಖಾನೆಯ ಅತಿಥಿಗೃಹಕ್ಕೆ ಆಗಮಿಸಿತ್ತು. ನಂತರ ಕಾರ್ಖಾನೆಗೆ ಭೇಟಿ ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಂಜೆ ೪.೩೦ಕ್ಕೆ ಪುನಃ ಹಿಂದಿರುಗಿತು. 
    ಇತ್ತೀಚೆಗೆ ಮೇ.೨೩ರಂದು ದೆಹಲಿಯಲ್ಲಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಸಚಿವ ಎಚ್.ಡಿ ಕುಮಾರಸ್ವಾಮಿಯವರು ಕಾರ್ಖಾನೆಯನ್ನು ಸಂಪೂರ್ಣವಾಗಿ ಹೊಸದಾಗಿ ಮರು ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ್ದು, ೧೦ ಸಾವಿರ ಕೋ.ರು ಬಂಡವಾಳ ತೊಡಗಿಸುವುದಾಗಿ ತಿಳಿಸಿದ್ದರು. ಈ ಸಂಬಂಧ ೨ ತಿಂಗಳಲ್ಲಿ ವಿಸ್ತೃತ ಯೋಜನಾ ವರದಿ(ಡಿಪಿಆರ್) ಸಿದ್ದಪಡಿಸುವುದಾಗಿ ಹಾಗು ವರ್ಷಾಂತ್ಯಕ್ಕೆ ಯೋಜನೆಯ ಅನುಷ್ಠಾನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಅಡಿಗಲ್ಲು ಹಾಕುವುದಾಗಿ ಮಾಹಿತಿ ನೀಡಿದ್ದರು. 
    ಇದಕ್ಕೆ ಪೂರಕವೆಂಬಂತೆ ಉಕ್ಕು ಪ್ರಾಧಿಕಾರದ ಅಧ್ಯಕ್ಷರಾದ ಅಮರೇಂದು ಪ್ರಕಾಶ್ ಮತ್ತು ಕೇಂದ್ರ ಉಕ್ಕು ಕಾರ್ಯದರ್ಶಿ ಸಂದೀಪ್ ಪೌಂಡ್ರಿಕ್ ಅವರನ್ನೊಳಗೊಂಡ ಉನ್ನತ ಅಧಿಕಾರಿಗಳ ತಂಡ ಕಾರ್ಖಾನೆಗೆ ಭೇಟಿ ನೀಡಿದೆ ಎನ್ನಲಾಗಿದ್ದು, ಈ ಹಿನ್ನಲೆಯಲ್ಲಿ ಮಹತ್ವ ಪಡೆದುಕೊಂಡಿದೆ. 

ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರಿಂದ ಉಕ್ಕು ಪ್ರಾಧಿಕಾರದ ಅಧ್ಯಕ್ಷರು, ಕಾರ್ಯದರ್ಶಿಗೆ ಮನವಿ

 ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಶುಕ್ರವಾರ ಭೇಟಿ ನೀಡಿದ ಪ್ರಾಧಿಕಾರದ ಅಧ್ಯಕ್ಷರಾದ ಅಮರೇಂದು ಪ್ರಕಾಶ್, ಕೇಂದ್ರ ಉಕ್ಕು ಕಾರ್ಯದರ್ಶಿ ಸಂದೀಪ್ ಪೌಂಡ್ರಿಕ್, ತಾಂತ್ರಿಕ ನಿರ್ದೇಶಕರಾದ ಎಂ.ಆರ್ ಗುಪ್ತಾ ಅವರಿಗೆ ಗುತ್ತಿಗೆ ಕಾರ್ಮಿಕರ ಸಂಘದಿಂದ ಕಾರ್ಖಾನೆ ಅಭಿವೃದ್ಧಿಗೊಳಿಸುವಂತೆ ಮನವಿ ಸಲ್ಲಿಸಲಾಯಿತು. 
    ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಶುಕ್ರವಾರ ಭೇಟಿ ನೀಡಿದ ಪ್ರಾಧಿಕಾರದ ಅಧ್ಯಕ್ಷರಾದ ಅಮರೇಂದು ಪ್ರಕಾಶ್, ಕೇಂದ್ರ ಉಕ್ಕು ಕಾರ್ಯದರ್ಶಿ ಸಂದೀಪ್ ಪೌಂಡ್ರಿಕ್, ತಾಂತ್ರಿಕ ನಿರ್ದೇಶಕರಾದ ಎಂ.ಆರ್ ಗುಪ್ತಾ ಅವರಿಗೆ ಗುತ್ತಿಗೆ ಕಾರ್ಮಿಕರ ಸಂಘದಿಂದ ಕಾರ್ಖಾನೆ ಅಭಿವೃದ್ಧಿಗೊಳಿಸುವಂತೆ ಮನವಿ ಸಲ್ಲಿಸಲಾಯಿತು. 
    ಕಳೆದ ಹಲವಾರು ವರ್ಷಗಳಿಂದ ಕಾರ್ಖಾನೆ ಸಂಕಷ್ಟದಿಂದ ಮುನ್ನಡೆಯುತ್ತಿದ್ದು, ಇದರಿಂದಾಗಿ ಗುತ್ತಿಗೆ ಕಾರ್ಮಿಕರಿಗೆ ತಿಂಗಳ ಪೂರ್ತಿ ಕೆಲಸವಿಲ್ಲದೆ ತೊಂದರೆ ಅನುಭವಿಸುವಂತಾಗಿದೆ. ಗುತ್ತಿಗೆ ಕಾರ್ಮಿಕರು ದಿನದಿಂದ ದಿನಕ್ಕೆ ಆತಂಕದಲ್ಲಿ ಬದುಕುವಂತಾಗಿದೆ. ತಕ್ಷಣ ಕಾರ್ಖಾನೆಯನ್ನು ಅಭಿವೃದ್ಧಿಪಡಿಸಿ ಹಿತ ಕಾಪಾಡುವಂತೆ ಮನವಿಯಲ್ಲಿ ಕೋರಲಾಗಿದೆ. 
ಮನವಿ ಸ್ವೀಕರಿಸಿ ಪ್ರತಿಕ್ರಿಯಿಸಿದ ಅಧಿಕಾರಿಗಳು ಶೀಘ್ರದಲ್ಲಿಯೇ ಅಗತ್ಯವಿರುವ ಬಂಡವಾಳ ತೊಡಗಿಸಿ ಕಾರ್ಖಾನೆ ಅಭಿವೃದ್ಧಿಪಡಿಸುವ ಭರವಸೆ ನೀಡಿದ್ದಾರೆಂದು ಗುತ್ತಿಗೆ ಕಾರ್ಮಿಕರ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ. 
    ಕೃತಜ್ಞತೆ ಸಲ್ಲಿಕೆ : 
    ಕಾರ್ಖಾನೆಗೆ ಅಧಿಕಾರಿಗಳು ಭೇಟಿ ನೀಡಲು ಕಾರಣಕರ್ತರಾಗಿರುವ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಸಚಿವ ಎಚ್.ಡಿ ಕುಮಾರಸ್ವಾಮಿ, ಸಂಸದ ಬಿ.ವೈ ರಾಘವೇಂದ್ರ ಅವರಿಗೆ ಗುತ್ತಿಗೆ ಕಾರ್ಮಿಕರ ಸಂಘ ಕೃತಜ್ಞತೆ ಸಲ್ಲಿಸಿದೆ. 
ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್, ಪ್ರಧಾನ ಕಾರ್ಯದರ್ಶಿ ರಾಕೇಶ್ ಸೇರಿದಂತೆ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. 

ವಿಐಎಸ್‌ಎಲ್ ಕಾರ್ಖಾನೆಗೆ ಭೇಟಿ ನೀಡಿದ ಉಕ್ಕು ಪ್ರಾಧಿಕಾರದ ಅಧ್ಯಕ್ಷರು, ಕಾರ್ಯದರ್ಶಿಗೆ ಸನ್ಮಾನ

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಶುಕ್ರವಾರ ಭೇಟಿ ನೀಡಿದ ಪ್ರಾಧಿಕಾರದ ಅಧ್ಯಕ್ಷರಾದ ಅಮರೇಂದು ಪ್ರಕಾಶ್ ಮತ್ತು ಕೇಂದ್ರ ಉಕ್ಕು ಕಾರ್ಯದರ್ಶಿ ಸಂದೀಪ್ ಪೌಂಡ್ರಿಕ್  ಅವರನ್ನು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್(ಪಿಎಲ್‌ಡಿ ಬ್ಯಾಂಕ್) ಅಧ್ಯಕ್ಷ ಬಿ.ಕೆ ಶಿವಕುಮಾರ್ ಭೇಟಿ ಮಾಡಿ ಸನ್ಮಾನಿಸಿ ಗೌರವಿಸಿದರು. 
    ಭದ್ರಾವತಿ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಶುಕ್ರವಾರ ಭೇಟಿ ನೀಡಿದ ಪ್ರಾಧಿಕಾರದ ಅಧ್ಯಕ್ಷರಾದ ಅಮರೇಂದು ಪ್ರಕಾಶ್ ಮತ್ತು ಕೇಂದ್ರ ಉಕ್ಕು ಕಾರ್ಯದರ್ಶಿ ಸಂದೀಪ್ ಪೌಂಡ್ರಿಕ್  ಅವರನ್ನು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್(ಪಿಎಲ್‌ಡಿ ಬ್ಯಾಂಕ್) ಅಧ್ಯಕ್ಷ ಬಿ.ಕೆ ಶಿವಕುಮಾರ್ ಭೇಟಿ ಮಾಡಿ ಸನ್ಮಾನಿಸಿ ಗೌರವಿಸಿದರು. 
    ಇತ್ತೀಚೆಗೆ ಮೇ.೨೪ರಂದು ದೆಹಲಿಯಲ್ಲಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಸಚಿವ ಎಚ್.ಡಿ ಕುಮಾರಸ್ವಾಮಿಯವರು ಕಾರ್ಖಾನೆಯನ್ನು ಸಂಪೂರ್ಣವಾಗಿ ಹೊಸದಾಗಿ ಮರು ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ್ದು, ೧೦ ಸಾವಿರ ಕೋ.ರು ಬಂಡವಾಳ ತೊಡಗಿಸುವುದಾಗಿ ತಿಳಿಸಿದ್ದರು. ಈ ಸಂಬಂಧ ೨ ತಿಂಗಳಲ್ಲಿ ವಿಸ್ತೃತ ಯೋಜನಾ ವರದಿ(ಡಿಪಿಆರ್) ಸಿದ್ದಪಡಿಸುವುದಾಗಿ ಹಾಗು ವರ್ಷಾಂತ್ಯಕ್ಕೆ ಯೋಜನೆಯ ಅನುಷ್ಠಾನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಅಡಿಗಲ್ಲು ಹಾಕುವುದಾಗಿ ಮಾಹಿತಿ ನೀಡಿದ್ದರು. 
    ಇದಕ್ಕೆ ಪೂರಕವೆಂಬಂತೆ ಉಕ್ಕು ಪ್ರಾಧಿಕಾರದ ಅಧ್ಯಕ್ಷರಾದ ಅಮರೇಂದು ಪ್ರಕಾಶ್ ಮತ್ತು ಕೇಂದ್ರ ಉಕ್ಕು ಕಾರ್ಯದರ್ಶಿ ಸಂದೀಪ್ ಪೌಂಡ್ರಿಕ್ ಕಾರ್ಖಾನೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ. ಆದರೆ ಈ ಕುರಿತು ಕಾರ್ಖಾನೆ ಆಡಳಿತ ಮಂಡಳಿಯಾಗಲಿ, ಕಾಯಂ ಹಾಗು ಗುತ್ತಿಗೆ ಕಾರ್ಮಿಕರ ಸಂಘಟನೆಗಳಾಗಲಿ ಯಾರು ಸಹ ಅಧಿಕೃತ ಮಾಹಿತಿ ಮಾಧ್ಯಮಗಳಿಗೆ ತಿಳಿಸಿಲ್ಲ. ಆದರೆ ಕಾರ್ಖಾನೆ ಬಳಿ ಈ ಸಂಬಂಧ ಬೃಹತ್ ಫ್ಲೆಕ್ಸ್‌ಗಳನ್ನು ಅಳವಡಿಸಿ ಈ ಇಬ್ಬರು ಅಧಿಕಾರಿಗಳಿಗೆ ಸ್ವಾಗತ ಕೋರಲಾಗಿದೆ. 
ಈ ಮಾಹಿತಿ ತಿಳಿದು ಶಾಸಕರ ಸಹೋದರ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್ ಕಾರ್ಖಾನೆಯ ಅತಿಥಿ ಗೃಹದಲ್ಲಿ ಈ ಇಬ್ಬರು ಅಧಿಕಾರಿಗಳನ್ನು ಭೇಟಿ ಮಾಡಿ ಕ್ಷೇತ್ರದ ಜನರ ಪರವಾಗಿ ಸನ್ಮಾನಿಸಿ ಗೌರವಿಸಿದರು. 
    ವಿಐಎಸ್‌ಎಲ್ ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ, ಮೆಸ್ಕಾಂ ಗ್ರಾಹಕರ ಸಲಹಾ ಸಮಿತಿ ತಾಲೂಕು ಅಧ್ಯಕ್ಷ, ಕಾರ್ಖಾನೆಯ ನಿವೃತ್ತ ನೌಕರ ಬಸವಂತಪ್ಪ, ಮುಖಂಡ ಎಂ.ಎಸ್ ರವಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.