ಶುಕ್ರವಾರ, ಆಗಸ್ಟ್ 15, 2025

ಮಠ-ಮಂದಿರ, ದೇವಸ್ಥಾನಗಳ ಮೇಲೆ ಇಲ್ಲಸಲ್ಲದ ಸುಳ್ಳು ಆರೋಪ : ಪಾವಿತ್ರ್ಯತೆಗೆ ಧಕ್ಕೆ

ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತ ಬಳಗದಿಂದ ಬೃಹತ್ ಸಹಿ ಅಭಿಯಾನ : ಆಕ್ರೋಶ 


ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತ ಬಳಗದಿಂದ ಭದ್ರಾವತಿ ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಸಮೀಪ ಶುಕ್ರವಾರ ಬೃಹತ್ ಸಹಿ ಸಂಗ್ರಹ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. 
    ಭದ್ರಾವತಿ: ದೇಶದಲ್ಲಿರುವ ಹಿಂದೂಗಳ ಧಾರ್ಮಿಕ ಶ್ರದ್ದಾ ಕೇಂದ್ರಗಳು, ಮಠ-ಮಂದಿರ, ದೇವಸ್ಥಾನಗಳ ಮೇಲೆ ಇಲ್ಲಸಲ್ಲದ ಸುಳ್ಳು ಆರೋಪಗಳಿಂದ ಅಪಮಾನ ಮಾಡುವುದು, ಅವುಗಳ ಪಾವಿತ್ರ್ಯತೆಗೆ ಧಕ್ಕೆ ತರುವಂತಹ ಕೆಲಸ ಮಾಡುತ್ತಿರುವುದನ್ನು ಸಹಿಸುವುದಿಲ್ಲ ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ್ಯ ಕಾರ್ಯಕಾರಿಣಿ ಸದಸ್ಯ ಹಾ. ರಾಮಪ್ಪ ಆಕ್ರೋಶ ವ್ಯಕ್ತಪಡಿಸಿದರು
    ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತ ಬಳಗದಿಂದ ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಸಮೀಪ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಬೃಹತ್ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
    ಅಭಿವೃಧ್ಧಿ ಕಾರ್ಯಗಳನ್ನು ಯಶಸ್ವಿಯಾಗಿ ಮಾಡುವ ಮೂಲಕ ಲಕ್ಷಾಂತರ ಜನರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಾಲಯದ ಧರ್ಮದರ್ಶಿಗಳಾದ ಡಿ. ವಿರೇಂದ್ರ ಹೆಗ್ಗಡೆಯವರ ಹೆಸರಿಗೆ ಮಸಿ ಬಳಿಯುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ ಎಂದರು.
    ನ್ಯಾಯವಾದಿ ಕೆ.ಎನ್. ಶ್ರೀ ಹರ್ಷ ಮಾತನಾಡಿ ದೇಶದಲ್ಲಿನ ಅಸಂಖ್ಯಾತ ಭಕ್ತರು ಭೇಟಿ ನೀಡುವ ಸ್ಥಳಗಳನ್ನು ಅಯ್ಕೆ ಮಾಡಿ ಅದರ ವಿರುಧ್ಧ ವ್ಯವಸ್ಥಿತ ಸುಳ್ಳು ಅಪಪ್ರಚಾರ ಮಾಡುತ್ತಿರುವವರ ಬಗ್ಗೆ ಸಮಾಜ ಸರಿಯಾದ ರೀತಿಯಲ್ಲಿ ಉತ್ತರಿಸಿ ಶಾಸ್ತಿ ಮಾಡಬೇಕು. ಇಲ್ಲದಿದ್ದರೆ ಅವರುಗಳು ಜನರ ನಂಬಿಕೆ ಬಗ್ಗೆ ಅನುಮಾನ ಉಂಟು ಮಾಡುತ್ತಾರೆ ಎಂದು ಎಚ್ಚರಿಸಿದರು
ಎ.ಟಿ.ರವಿ ಮಾತನಾಡಿ, ಹಿಂದೂ ಧರ್ಮದ ನಂಬಿಕೆಗಳಿಗೆ ಧಕ್ಕೆಯನ್ನು ಉಂಟು ಮಾಡಿದರೆ ಸಹಿಸಲು ಸಾಧ್ಯವಿಲ್ಲ ಎಂದರು.
    ಬಿಜೆಪಿ ನಗರ ಅಧ್ಯಕ್ಷ ಜಿ. ಧರ್ಮಪ್ರಸಾದ್ ಮಾತನಾಡಿ, ಧಾರ್ಮಿಕ ಕೇಂದ್ರಗಳ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲಿ ಮಾಡುತ್ತಿರುವ ವಿನಾಕಾರಣ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದು,  ಇವರ ಕಾರ್ಯ ಯಶಸ್ವಿಯಾಗುವುದಿಲ್ಲ ಎಂದರು. 
ಬಿ.ಎಸ್ ಮಹೇಶ್ ಕುಮಾರ್, ಆರ್. ಕರುಣಾಮೂರ್ತಿ, ಡಿ.ಟಿ ಶ್ರೀಧರ್, ಸ್ವಪ್ನಕುಮಾರ್ ತೇಲ್ಕರ್ ಸೇರಿದಂತೆ ಇನ್ನಿತರರು ಸಭೆಯನ್ನುದ್ದೇಶಿಸಿ ಮಾತನಾಡಿದರು.
    ರಮೇಶ್, ಯೋಗೀಶ್ ಗುಜ್ಜಾರ್, ಕೆ.ಎಚ್ ತೀರ್ಥಯ್ಯ, ಪಿ.ಸಿ ಜೈನ್, ಸಂಪತ್‌ರಾಜ್ ಬಾಂಟಿಯಾ, ದಿಲೀಪ್ ಕುಮಾರ್ ಜೈನ್, ಯೋಗೀಶ್, ಲತಾ, ಆಶಾ, ಕವಿತಾ, ಅನ್ನಪೂರ್ಣ, ಸುಲೋಚನಾ, ಆರತಿ, ಜಯಲಕ್ಷ್ಮಿ, ಪ್ರೇಮ ಹಾಗು ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಪಾಲ್ಗೊಂಡಿದ್ದರು. 

ನಗರದ ವಿವಿಧೆಡೆ ವಿಜೃಂಭಣೆಯಿಂದ ಜರುಗಿದ ೭೯ನೇ ಸ್ವಾತಂತ್ರ್ಯೋತ್ಸವ

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ನ್ಯೂಟೌನ್ ವಿಐಎಸ್‌ಎಲ್ ರಜತ ಮಹೋತ್ಸವ ಕ್ರೀಡಾಂಗಣದಲ್ಲಿ ೭೯ನೇ ಸ್ವಾತಂತ್ರ್ಯೋತ್ಸವ ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ ಧ್ವಜಾರೋಹಣ ನೆರವೇರಿಸಿದರು.  
    ಭದ್ರಾವತಿ:  ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ, ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಪ್ರಜಾ ವಿಮೋಚನಾ ಸಂಘ(ಬಿಪಿಎಲ್), ತರಂಗ ಕಿವುಡು ಮಕ್ಕಳ ಶಾಲೆ, ಗೃಹರಕ್ಷಕ ದಳ  ಸೇರಿದಂತೆ ನಗರದ ವಿವಿಧೆಡೆ ಶುಕ್ರವಾರ ೭೯ನೇ ಸ್ವಾತಂತ್ರ್ಯೋತ್ಸವ ವಿಜೃಂಭಣೆಯಿಂದ ಜರುಗಿತು.  
    ಸೈಲ್-ವಿಐಎಸ್‌ಎಲ್ ಕಾರ್ಖಾನೆ : 
    ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ನ್ಯೂಟೌನ್ ವಿಐಎಸ್‌ಎಲ್ ರಜತ ಮಹೋತ್ಸವ ಕ್ರೀಡಾಂಗಣದಲ್ಲಿ ೭೯ನೇ ಸ್ವಾತಂತ್ರ್ಯೋತ್ಸವ ಅದ್ದೂರಿಯಾಗಿ ಆಚರಿಸಲಾಯಿತು. 
    ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ ಧ್ವಜಾರೋಹಣ ನೆರವೇರಿಸಿದರು.  ಇದಕ್ಕೂ ಮೊದಲು ಮಹಾಪ್ರಬಂಧಕ(ಸಾರ್ವಜನಿಕ ಸಂಪರ್ಕ) ಎಲ್. ಪ್ರವೀಣ್ ಕುಮಾರ್ ಕಾರ್ಯಪಾಲಕ ನಿರ್ದೇಶಕರನ್ನು ಕಾರ್ಯಕ್ರಮಕ್ಕೆ ಬರಮಾಡಿಕೊಂಡರು. 
    ಕಾರ್ಖಾನೆಯ ಭದ್ರತಾ ಸಿಬ್ಬಂದಿಗಳು, ಸರ್.ಎಂ.ವಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಎನ್.ಸಿ.ಸಿ ಹಾಗು ಸೈಂಟ್ ಚಾರ್ಲ್ಸ್ ಆಂಗ್ಲ ಪ್ರೌಢಶಾಲೆ ಬ್ಯಾಂಡ್ ಸೆಟ್ ಮತ್ತು ವಿವಿಧ ಶಾಲೆಗಳ ಸ್ಕೌಟ್ಸ್-ಗೈಡ್ಸ್ ತಂಡಗಳು ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದವು. ಧ್ವಜಾರೋಹಣ ನೆರವೇರಿಸಿದ ಬಿ.ಎಲ್ ಚಂದ್ವಾನಿ ಪಥಸಂಚಲನ ತಂಡಗಳಿಂದ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು.
ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಪಡೆದ ಕೆ. ಜತಿನ್, ಸಾನಿಕಾ ದೇವಾಂಗ ಮಠ್ ಮತ್ತು ಪ್ರತೀಕ್ ಬಡಿಗೇರ್ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ೨೦೨೪ ದಸರಾ ಸಿ.ಎಂ. ಕಪ್ ಬಾಲ್‌ಬ್ಯಾಂಡ್ಮಿಂಟನ್ ಸ್ಪರ್ಧೆಯಲ್ಲಿ ಕಂಚಿನ ಪದಕ ತಮ್ಮದಾಗಿಸಿಕೊಂಡಿರುವ ಕಾರ್ಖಾನೆ ಉದ್ಯೋಗಿ ಸೀತಾರಾಮ್, ಸಕ್ಷಮ್ ಬ್ಯುಸಿನೆಸ್ ಕ್ವಿಜ್ ಸಾಧನೆ ಮಾಡಿರುವ ಉಪ ಮಹಾಪ್ರಬಂಧಕ(ಚಾಲನೆ) ಎಮ್.ಎಸ್ ಕುಮಾರ್ ಮತ್ತು ಉಪಪ್ರಬಂಧಕ(ಮಿಲ್ಸ್ ಮತ್ತು ಆರ್.ಟಿ.ಎಸ್) ಎಮ್. ಕೃಷ್ಣ  ಹಾಗೂ ಸಮರ್ಥ್ ಬ್ಯುಸಿನೆಸ್ ಕ್ವಿಜ್ ಸಾಧನೆ ಮಾಡಿರುವ ನಾಗೇಶ್ ಹಾಗೂ ಪ್ರವೇಶ್ ಝಾ, ಅವರನ್ನು ಸನ್ಮಾನಿಸಲಾಯಿತು.
ಮುಖ್ಯ ಮಹಾಪ್ರಬಂಧಕ(ಸ್ಥಾವರ) ಕೆ.ಎಸ್ ಸುರೇಶ್ ಸೇರಿದಂತೆ ಕಾರ್ಖಾನೆಯ ಹಿರಿಯ ಅಧಿಕಾರಿಗಳು, ಕಾರ್ಮಿಕ ಮತ್ತು ಅಧಿಕಾರಿಗಳ ಸಂಘದ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ಉಪ ಪ್ರಬಂಧಕಿ(ಎಚ್.ಆರ್)  ಕೆ.ಎಸ್ ಶೋಭ ಮತ್ತು  ಕಿರಿಯ ಪ್ರಬಂಧಕ (ಹೆಚ್.ಆರ್-ಎಲ್&ಡಿ) ಎಮ್.ಎಲ್. ಯೋಗೇಶ್ ಕಾರ್ಯಕ್ರಮ ನಿರೂಪಿಸಿದರು. 
 

ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಪ್ರಜಾ ವಿಮೋಚನಾ ಸಂಘ(ಬಿಪಿಎಲ್)ದ ವತಿಯಿಂದ ೭೯ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಸಂಘದ ಕಛೇರಿಯನ್ನು ವಿಐಎಸ್‌ಎಲ್ ಕಾರ್ಮಿಕರ ಸಂಘದ ಅಧ್ಯಕ್ಷ ಜೆ. ಜಗದೀಶ್ ಉದ್ಘಾಟಿಸಿ ಮಾತನಾಡಿದರು. 
    ಬಿಪಿಎಲ್ ಸಂಘ: 
ನಗರದ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಪ್ರಜಾ ವಿಮೋಚನಾ ಸಂಘ(ಬಿಪಿಎಲ್)ದ ವತಿಯಿಂದ ೭೯ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಏರ್ಪಡಿಸಲಾಗಿದ್ದ ಉಚಿತ ಕಣ್ಣಿನ ತಪಾಸಣೆ ಶಿಬಿರ .  ಸಂಘದ ಗೌರವ ಅಧ್ಯಕ್ಷ ಎಸ್.ಕೆ ಸುಧೀಂದ್ರ ಉದ್ಘಾಟಿಸಿದರು. 
ಇದಕ್ಕೂ ಮೊದಲು ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್ ಧ್ವಜಾರೋಹಣ ನೆರವೇರಿಸಿದರು. ಮಧ್ಯಾಹ್ನ ನಡೆದ ಕಾರ್ಯಕ್ರಮದಲ್ಲಿ ವಿಐಎಸ್‌ಎಲ್ ಕಾರ್ಮಿಕರ ಸಂಘದ ಅಧ್ಯಕ್ಷ ಜೆ. ಜಗದೀಶ್ ಸಂಘದ ಕಛೇರಿ ಉದ್ಘಾಟಿಸಿ ಮಾತನಾಡಿದರು. ಗುತ್ತಿಗೆದಾರ ಎಂ.ಜಿ ರಾಮಚಂದ್ರನ್, ನಗರಸಭೆ ಸದಸ್ಯ ಐ.ವಿ ಸಂತೋಷ್ ಕುಮಾರ್, ಸಂಜೀವಿನಿ ಹಿರಿಯ ನಾಗರಿಕರ ಆರೈಕೆ ಕೇಂದ್ರದ ಸವಿತಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
ಸಂಘದ ಅಧ್ಯಕ್ಷ ಬಿ. ಜಗದೀಶ್ ಅಧ್ಯಕ್ಷತೆ ವಹಿಸಿದ್ದರು. ಸಂಘದ ಪದಾಧಿಕಾರಿಗಳಾದ ಪ್ರಧಾನ ಕಾರ್ಯದರ್ಶಿ ಶ್ಯಾಮ್, ಕಾರ್ಯಾಧ್ಯಕ್ಷ ರವಿಕುಮಾರ್, ಕಾರ್ಯದರ್ಶಿ ದಾಸ್, ಸಂಘಟನಾ ಕಾರ್ಯದರ್ಶಿಗಳಾದ ಜ್ಯೋತಿ ಪ್ರಸಾದ್, ರಾಜಣ್ಣ, ಖಜಾಂಚಿ ಸುನಿಲ್ ಕುಮಾರ್, ನಿರ್ದೇಶಕರಾದ ನಿರಂಜನ್, ಯೋಗೇಶ್, ರಘು ಮತ್ತು ಸಂತೋಷ್ ಸೇರಿದಂತೆ ಸ್ಥಳೀಯ ನಿವಾಸಿಗಳು ಪಾಲ್ಗೊಂಡಿದ್ದರು.  ಸಿಹಿ ವಿತರಣೆ ಹಾಗು ಊಟದ ವ್ಯವಸ್ಥೆ ಕೈಗೊಳ್ಳಲಾಗಿತ್ತು. 


ಭದ್ರಾವತಿ ನಗರದ ನ್ಯೂಟೌನ್ ಶಿವಭದ್ರ ಟ್ರಸ್ಟ್, ತರಂಗ ಕಿವುಡು ಮಕ್ಕಳ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ೭೯ನೇ ಸ್ವಾತಂತ್ರ್ಯೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು.  ಶಾಲಾ ಆವರಣದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಕಣ್ಣಪ್ಪ ಧ್ವಜಾರೋಹಣ ನೆರವೇರಿದರು. 
    ತರಂಗ ಕಿವುಡು ಮಕ್ಕಳ ಶಾಲೆ: 
    ನಗರದ ನ್ಯೂಟೌನ್ ಶಿವಭದ್ರ ಟ್ರಸ್ಟ್, ತರಂಗ ಕಿವುಡು ಮಕ್ಕಳ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ೭೯ನೇ ಸ್ವಾತಂತ್ರ್ಯೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು.  
    ಶಾಲಾ ಆವರಣದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಕಣ್ಣಪ್ಪ ಧ್ವಜಾರೋಹಣ ನೆರವೇರಿದರು. ಟ್ರಸ್ಟ್ ಅಧ್ಯಕ್ಷ ಡಾ. ಟಿ. ನರೇಂದ್ರಭಟ್ ಅಧ್ಯಕ್ಷತೆ ವಹಿಸಿದ್ದರು. ಡಾ. ಸಿ.ಆರ್ ಗುರುರಾಜು, ಬಿ. ಮಂಜುನಾಥ್, ಮಹಮದ್ ಆರೀಫ್, ಕೆ. ಅನಂತ ಕೃಷ್ಣನಾಯಕ್, ಆರ್. ಉಮೇಶ್, ಯಲ್ಲೋಜಿ ರಾವ್, ಮಧು, ಟ್ರಸ್ಟ್ ಕಾರ್ಯದರ್ಶಿ ಸುಭಾಷ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಭದ್ರಾವತಿ ನಗರದ ನ್ಯೂಟೌನ್ ಗೃಹರಕ್ಷಕದಳ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
    ಗೃಹರಕ್ಷಕ ದಳ : 
    ನಗರದ ನ್ಯೂಟೌನ್ ಗೃಹರಕ್ಷಕದಳ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್ ಧ್ವಜಾರೋಹಣ ನೆರವೇರಿಸಿದರು. 
    ನಗರಸಭೆ ಪೌರಾಯುಕ್ತ ಕೆ.ಎನ್ ಹೇಮಂತ್, ಸ್ಥಳೀಯ ಮುಖಂಡ ಎಸ್.ಎಸ್ ಭೈರಪ್ಪ, ನಿವೃತ್ತ ಪ್ಲಟೂನ್ ಕಮಾಂಡರ್‌ಗಳಾದ ಕೃಷ್ಣೋಜಿರಾವ್, ಎ. ರಾಜಣ್ಣ, ಘಟಕಾಧಿಕಾರಿ ಜಗದೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದು, ಗೃಹರಕ್ಷಕ ದಳದಿಂದ ಗೌರವ ವಂದನೆ ಸ್ವೀಕರಿಸಿದರು. ಬಿ.ಎಸ್ ಗಣೇಶ್ ಹಾಗು ಎಸ್.ಎಸ್ ಭೈರಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.  

ವಿದ್ಯಾವಂತರಾದರೆ ಸಾಲದು ಜ್ಞಾನವಂತರಾಗಿ ಸದೃಢ ಸಮಾಜ ನಿರ್ಮಾಣವಾಗಲಿ : ಪರುಸಪ್ಪ ಕುರುಬರ

ಭದ್ರಾವತಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ಹಳೇನಗರದ ಕನಕ ಮಂಟಪ ಮೈದಾನದಲ್ಲಿ ೭೯ನೇ ಸ್ವಾತಂತ್ರ್ಯೋತ್ಸವ ಹಮ್ಮಿಕೊಳ್ಳಲಾಗಿತ್ತು. ತಹಸೀಲ್ದಾರ್ ಪರುಸಪ್ಪ ಕುರುಬರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. 
    ಭದ್ರಾವತಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ಹಳೇನಗರದ ಕನಕ ಮಂಟಪ ಮೈದಾನದಲ್ಲಿ ೭೯ನೇ ಸ್ವಾತಂತ್ರ್ಯೋತ್ಸವ ಹಮ್ಮಿಕೊಳ್ಳಲಾಗಿತ್ತು. ತಹಸೀಲ್ದಾರ್ ಪರುಸಪ್ಪ ಕುರುಬರ ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು, ಸ್ವಾತಂತ್ರ್ಯೋತ್ಸವ ಸಾರ್ಥಕಗೊಳ್ಳಬೇಕಾದರೆ ನಾವೆಲ್ಲರೂ ಕೇವಲ ವಿದ್ಯಾವಂತರಾದರೆ ಸಾಲದು ಜ್ಞಾನವಂತರಾಗಿ ಸದೃಢ ಸಮಾಜ ನಿರ್ಮಾಣ ಮಾಡುವಂತವರಾಗಬೇಕು. ಪರಿಸರ ಕಾಳಜಿಯೊಂದಿಗೆ ಉತ್ತಮ ಆರೋಗ್ಯವಂತ ಸಮಾಜ ಸಹ ನಿರ್ಮಾಣಗೊಳ್ಳಬೇಕು. ಮುಂದಿನ ಪೀಳಿಗೆಗೆ ನಮ್ಮ ಕೊಡುಗೆ ಈ ನಿಟ್ಟಿನಲ್ಲಿರಬೇಕೆಂದರು. 
    ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆವಹಿಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷ ಕೇಂದ್ರ ಹಾಗು ರಾಜ್ಯಗಳಲ್ಲಿ ಆಡಳಿತದ ಚುಕ್ಕಾಣಿ ಹಿಡಿದು ತನ್ನ ಅಧಿಕಾರಾವಧಿಯಲ್ಲಿ ಸಾಕಷ್ಟು ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಉತ್ತಮ ಆಡಳಿತ ನೀಡಿದೆ. ಆದರೆ ಬಿಜೆಪಿ ಪಕ್ಷ ಕೇಂದ್ರ ಮತ್ತು ರಾಜ್ಯಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದರೂ ಸಹ ಜನಪರ ಯೋಜನೆಗಳನ್ನು ಜಾರಿಗೊಳಿಸದೆ ಕೇವಲ ಕಾಂಗ್ರೆಸ್ ಸರ್ಕಾರದ ಆಡಳಿತವನ್ನು ಟೀಕಿಸುತ್ತಿದೆ. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆದಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ನಡೆಯಲಿವೆ. ಎಂಪಿಎಂ ಕಾರ್ಖಾನೆ ಆರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಆದರೆ ಕೇಂದ್ರ ಅರಣ್ಯ ಇಲಾಖೆ ಕಾರ್ಖಾನೆ ಆರಂಭಕ್ಕೆ ತೊಡಾಕಿದೆ. ಕ್ಷೇತ್ರದ ಹಿತದೃಷ್ಟಿಯಿಂದ ಅನುಮತಿ ನೀಡುವಂತೆ ಕೋರಿದರು. 
    ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಪೌರಾಯುಕ್ತ ಕೆ.ಎನ್ ಹೇಮಂತ್, ಸದಸ್ಯರಾದ ಬಿ.ಟಿ ನಾಗರಾಜ್, ಚನ್ನಪ್ಪ, ಲತಾ ಚಂದ್ರಶೇಖರ್, ಶೃತಿ ವಸಂತಕುಮಾರ್, ಅನುಸುಧಾ ಮೋಹನ್ ಪಳನಿ, ಬಸವರಾಜ ಬಿ. ಆನೇಕೊಪ್ಪ, ಜಾರ್ಜ್, ಶಶಿಕಲಾ ನಾರಾಯಣಪ್ಪ, ಕಾಂತರಾಜ್ ಸೇರಿದಂತೆ ಚುನಾಯಿತ ಹಾಗು ನಾಮನಿರ್ದೇಶಿತ ಸದಸ್ಯರು, ನಗರ ಆಶ್ರಯ ಸಮಿತಿ ಅಧ್ಯಕ್ಷ ಜಿ.ಎಸ್ ಗೋಪಾಲ್, ಕರ್ನಾಟಕ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ಆರ್‌ಎಎಫ್ ಬೆಟಾಲಿಯನ್ ಕಮಾಂಡರ್ ಕಮಲೇಶ್, ಪೊಲೀಸ್ ಉಪಾಧೀಕ್ಷಕ ಕೆ.ಆರ್ ನಾಗರಾಜು, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ. ಗಂಗಣ್ಣ, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರಾದ ಶಿವುಪಾಟೀಲ್, ವಿನೋದ್, ಶಿವಪ್ಪ, ರಾಜೇಂದ್ರ, ಸುಕನ್ಯ, ಮಹಮದ್ ರಫಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸ್ವಾಗತಿಸಿದರು. ಸುಮತಿ ಕಾರಂತ್, ಕೋಕಿಲ, ತ್ರಿವೇಣಿ ತಂಡದವರಿಂದ ನಾಡಗೀತೆ ನಡೆಯಿತು. ಪೊಲೀಸ್, ಗೃಹ ರಕ್ಷಕದಳ, ವಿವಿಧ ಶಾಲಾ ಕಾಲೇಜುಗಳ ಎನ್‌ಸಿಸಿ, ಸ್ಕೌಟ್ಸ್-ಗೈಡ್ಸ್, ಬ್ಯಾಂಡ್‌ಸೆಟ್ ತಂಡಗಳು ಪಥಸಂಚಲನದಲ್ಲಿ ಪಾಲ್ಗೊಂಡಿದ್ದವು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. 

ಗುರುವಾರ, ಆಗಸ್ಟ್ 14, 2025

ಆ.೧೫ರಂದು ನಗರದ ವಿವಿಧೆಡೆ ೭೯ನೇ ಸ್ವಾತಂತ್ರ್ಯೋತ್ಸವ


    ಭದ್ರಾವತಿ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಸೇರಿದಂತೆ ನಗರದ ವಿವಿಧೆಡೆ ಆ.೧೫ರಂದು ೭೯ನೇ ಸ್ವಾತಂತ್ರ್ಯೋತ್ಸವ ನಡೆಯಲಿದೆ. 
    ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ಹಳೇನಗರದ ಕನಕ ಮಂಟಪ ಮೈದಾನದಲ್ಲಿ ೭೯ನೇ ಸ್ವಾತಂತ್ರ್ಯೋತ್ಸವ ಹಮ್ಮಿಕೊಳ್ಳಲಾಗಿದ್ದು, ತಹಸೀಲ್ದಾರ್ ಪರುಸಪ್ಪ ಕುರುಬರ ಬೆಳಿಗ್ಗೆ ೯ ಗಂಟೆಗೆ ಧ್ವಜಾರೋಹಣ ನೇರವೇರಿಸಲಿದ್ದಾರೆ. ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದಾರೆ. 
    ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ,  ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದ ಪೂರ್‍ಯಾನಾಯ್ಕ, ಸಂಸದ ಬಿ.ವೈ ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರು, ಸ್ಥಳೀಯ ಸಂಸ್ಥೆ ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. 
    ವಿಐಎಸ್‌ಎಲ್ ಕಾರ್ಖಾನೆ : 
    ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ನ್ಯೂಟೌನ್ ವಿಐಎಸ್‌ಎಲ್ ರಜತ ಮಹೋತ್ಸವ ಕ್ರೀಡಾಂಗಣದಲ್ಲಿ ೭೯ನೇ ಸ್ವಾತಂತ್ರ್ಯೋತ್ಸವ ಹಮ್ಮಿಕೊಳ್ಳಲಾಗಿದೆ. 
    ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ ಬೆಳಿಗ್ಗೆ ೯ ಗಂಟೆಗೆ ಧ್ವಜಾರೋಹಣ ನೆರವೇರಿಸಲಿದ್ದು, ನಂತರ ಪಥ ಸಂಚಲನ ವಂದನೆ ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ಕಾಯಂ ಹಾಗು ಗುತ್ತಿಗೆ ಕಾರ್ಮಿಕರು, ಅಧಿಕಾರಿಗಳು ಹಾಗು ಕುಟುಂಬ ವರ್ಗದವರು, ವಿವಿಧ ಶಾಲಾ-ಕಾಲೇಜುಗಳು, ಸಂಘ-ಸಂಸ್ಥೆಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಸಾರ್ವಜನಿಕ ಸಂಪರ್ಕಾಧಿಕಾರಿ ಎಲ್. ಪ್ರವೀಣ್ ಕುಮಾರ್ ಕೋರಿದ್ದಾರೆ. 
    ಬಿಪಿಎಲ್ ಸಂಘ: 
ನಗರದ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಪ್ರಜಾ ವಿಮೋಚನಾ ಸಂಘ(ಬಿಪಿಎಲ್)ದ ವತಿಯಿಂದ  ೭೯ನೇ ಸ್ವಾತಂತ್ರ್ಯೋತ್ಸವ ಹಮ್ಮಿಕೊಳ್ಳಲಾಗಿದ್ದು, ಬೆಳಿಗ್ಗೆ ೯ ಗಂಟೆಗೆ ಧ್ವಜಾರೋಹಣ ನೆರವೇರಲಿದೆ. 
೧೦ ಗಂಟೆಗೆ ಉಚಿತ ಕಣ್ಣಿನ ತಪಾಸಣೆ ಶಿಬಿರ ನಡೆಯಲಿದ್ದು, ಮಧ್ಯಾಹ್ನ ೧೨.೩೦ಕ್ಕೆ ಕಛೇರಿ ಉದ್ಘಾಟನೆ ನೆರವೇರಲಿದೆ. ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್, ಯುವ ಮುಖಂಡ ಬಿ.ಎಸ್ ಬಸವೇಶ್, ವಿಐಎಸ್‌ಎಲ್ ಕಾರ್ಮಿಕರ ಸಂಘದ ಅಧ್ಯಕ್ಷ ಜೆ. ಜಗದೀಶ್, ಗುತ್ತಿಗೆದಾರ ಎಂ.ಜಿ ರಾಮಚಂದ್ರನ್, ನಗರಸಭೆ ಸದಸ್ಯ ಐ.ವಿ ಸಂತೋಷ್ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ಸಂಘದ ಅಧ್ಯಕ್ಷ ಬಿ. ಜಗದೀಶ್ ಅಧ್ಯಕ್ಷತೆ ವಹಿಸಲಿದ್ದಾರೆ. 
    ತರಂಗ ಕಿವುಡು ಮಕ್ಕಳ ಶಾಲೆ: 
ನಗರದ ನ್ಯೂಟೌನ್ ಶಿವಭದ್ರ ಟ್ರಸ್ಟ್, ತರಂಗ ಕಿವುಡು ಮಕ್ಕಳ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಆ.೧೫ರಂದು ೭೯ನೇ ಸ್ವಾತಂತ್ರ್ಯೋತ್ಸವ ಹಮ್ಮಿಕೊಳ್ಳಲಾಗಿದೆ. 
    ಶಾಲಾ ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಬೆಳಿಗ್ಗೆ ೮.೩೦ಕ್ಕೆ ಹಿರಿಯ ಪತ್ರಕರ್ತ ಕಣ್ಣಪ್ಪ ಧ್ವಜಾರೋಹಣ ನೆರವೇರಿಸಲಿದ್ದು, ಟ್ರಸ್ಟ್ ಅಧ್ಯಕ್ಷ ಡಾ. ಟಿ. ನರೇಂದ್ರಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ. ಸಿ.ಆರ್ ಗುರುರಾಜು, ಬಿ. ಮಂಜುನಾಥ್, ಮಹಮದ್ ಆರೀಫ್ ಮತ್ತು ಕೆ. ಅನಂತ ಕೃಷ್ಣನಾಯಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.  

ಕ್ಷೇತ್ರ ಧರ್ಮಸ್ಥಳಕ್ಕೆ ಕಳಂಕ ತರುವ ಹುನ್ನಾರ : ಆ.೧೫ರಂದು ಬೃಹತ್ ಸಹಿ ಸಂಗ್ರಹ ಅಭಿಯಾನ


    ಭದ್ರಾವತಿ : ಕೋಟ್ಯಾಂತರ ಹಿಂದುಗಳ ಪವಿತ್ರ ಕ್ಷೇತ್ರ  ಶ್ರೀ ಮಂಜುನಾಥಸ್ವಾಮಿ ಪುಣ್ಯ ಸನ್ನಿಧಿಗೆ ಕಳಂಕ ತರಲು ಒಳಸಂಚು ನಡೆಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ನಗರದ ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತ ಬಳಗದ ವತಿಯಿಂದ ಆ.೧೫ರಂದು ಬೆಳಿಗ್ಗೆ ೧೦.೩೦ಕ್ಕೆ ಬೃಹತ್ ಸಹಿ ಸಂಗ್ರಹ ಅಭಿಯಾನ ಹಮ್ಮಿಕೊಳ್ಳಲಾಗಿದೆ. 
`    ಹಿಂದು ಧಾರ್ಮಿಕ ಶ್ರದ್ಧಾ ಕೇಂದ್ರಗಳ ಮೇಲೆ ನಡೆಯುತ್ತಿರುವ ವ್ಯವಸ್ಥಿತ ಪಿತೂರಿ ನಿಲ್ಲಲಿ! ನಿಲ್ಲಲಿ!' ಎಂಬ ಘೋಷ ವಾಕ್ಯದೊಂದಿಗೆ ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿ ಸಮೀಪ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.  

ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸಿ ಕಲಾ ಕ್ಷೇತ್ರದ ಬೆಳವಣಿಗೆಗೆ ಕೈಜೋಡಿಸಿ : ಅಪೇಕ್ಷ ಮಂಜುನಾಥ್

ಭದ್ರಾವತಿ ನ್ಯೂಟೌನ್ ಉಂಬ್ಳೆಬೈಲ್ ರಸ್ತೆಯ ವೇನ್ಸ್ ಹಾಲ್ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಸೋನಿ ಗಾಯನ ಕಲಾವೃಂದದ ೨ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸೋನಿ ರಾಜ್ಯ ಪ್ರಶಸ್ತಿ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ  ಅಪೇಕ್ಷ ಮಂಜುನಾಥ್ ಉದ್ಘಾಟಿಸಿದರು.    
    ಭದ್ರಾವತಿ : ಯುವ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸುವ ಮೂಲಕ ಕಲಾ ಕ್ಷೇತ್ರದ ಬೆಳವಣಿಗೆಗೆ ಪ್ರತಿಯೊಬ್ಬರು ಮುಂದಾಗಬೇಕೆಂದು ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ, ಜ್ಯೂನಿಯರ್ ವಿಷ್ಣುವರ್ಧನ್ ಅಪೇಕ್ಷ ಮಂಜುನಾಥ್ ಕರೆ ನೀಡಿದರು.
  ಅವರು ನ್ಯೂಟೌನ್ ಉಂಬ್ಳೆಬೈಲ್ ರಸ್ತೆಯ ವೇನ್ಸ್ ಹಾಲ್ ಸಭಾಂಗಣದಲ್ಲಿ ಗುರುವಾರ ಸೋನಿ ಗಾಯನ ಕಲಾವೃಂದದ ೨ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸೋನಿ ರಾಜ್ಯ ಪ್ರಶಸ್ತಿ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿ, ಈ ನಗರದಲ್ಲಿ ನೂರಾರು ಮಂದಿ ರಂಗಭೂಮಿ, ಸಂಗೀತ, ನೃತ್ಯ, ಜಾನಪದ ಸೇರಿದಂತೆ ಹಲವಾರು ವಿಭಿನ್ನ ಕಲೆಗಳಲ್ಲಿ ಹಾಗು ಕುಸ್ತಿ, ಕಬ್ಬಡಿ ಸೇರಿದಂತೆ ಮುಂತಾದ ಕ್ರೀಡೆಗಳಲ್ಲಿ ರಾಷ್ಷ್ರಮಟ್ಟದವರೆಗೂ ಹೆಸರು ಮಾಡಿದ್ದರು. ಇದು ಕಲೆಗಳ ಬೀಡಾಗಿತ್ತು. ಕ್ರಮೇಣ ಎರಡು ಕಾರ್ಖಾನೆಗಳ ದು:ಸ್ಥಿತಿಯಿಂದಾಗಿ ಕಲಾ ಕ್ಷೇತ್ರದ ಬೆಳವಣಿಗೆ ಪೋತ್ಸಾಹವಿಲ್ಲದೆ ಹಿನ್ನಡೆಯಾಗುವ ಜೊತೆಗೆ ಕಲಾವಿದರು, ಕಲೆಗಳು ಕಣ್ಮರೆಯಾಗುತ್ತಿವೆ.  ಕಲೆಯ ಬೀಡನ್ನು ಪುನಹ ಪ್ರತಿಷ್ಟಾಪಿಸಲು ಇಂತಹ ಕಲಾವಿದರಿಂದ ಸಾಧ್ಯವಿದೆ ಎಂದರು.
    ಲಯನ್ಸ್ ಶುಗರ್‌ಟೌನ್ ಅಧ್ಯಕ್ಷ ಡಾ. ಗುರುರಾಜ್, ಲಯನ್ಸ್ ವಿಭಾಗೀಯ ಅಧ್ಯಕ್ಷ ಎಲ್. ದೇವರಾಜ್ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಪ್ರಸೂತಿ ತಜ್ಞ ವೈದ್ಯೆ ಡಾ. ವರ್ಷ, ನ್ಯಾಯವಾದಿ ಎ. ನಾರಾಯಣಸ್ವಾಮಿ ಮತ್ತು ಜನ್ನಾಪುರ ಸೌಂದರ್ಯ ವರ್ಧನ ತರಬೇತುದಾರರಾದ ಜಿ. ಸುಮಾ ಅವರನ್ನು ಸನ್ಮಾನಿಸಿ ಸೋನಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸೋನಿ ಗಾಯನ ಕಲಾವೃಂದದ ಅಧ್ಯಕ್ಷ ಸೋನಿ ಹರೀಶ್ ಅಧ್ಯಕ್ಷತೆವಹಿಸಿ ಕೃತಜ್ಞತೆ ಸಲ್ಲಿದರು. ಕಲಾವಿದ ಅರುಣ್ ಕಾರ್ಯಕ್ರಮ ನಿರೂಪಿಸಿದರು. 

ತಾಲೂಕು ಆಡಳಿತದ ವಿರುದ್ಧ ಜೆಡಿಎಸ್ ಪ್ರತಿಭಟನೆ : ಉಪವಿಭಾಗಾಧಿಕಾರಿಗೆ ದೂರು

ಕಂದಾಯ, ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ 

ಭದ್ರಾವತಿಯಲ್ಲಿ ತಾಲೂಕು ಕಛೇರಿ ಆವರಣದಲ್ಲಿ ಕಂದಾಯ ಹಾಗು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗುರುವಾರ ಜಾತ್ಯತೀತ ಜನತಾದಳ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.  
    ಭದ್ರಾವತಿ : ತಾಲೂಕು ಆಡಳಿತ ಯಂತ್ರ ಕುಸಿದಿದ್ದು, ಕಂದಾಯ ಹಾಗು ಅರಣ್ಯ ಇಲಾಖೆ ಅಧಿಕಾರಿಗಳು ಬೇಜವಾಬ್ದಾರಿತನದಿಂದ ವರ್ತಿಸುತ್ತಿದ್ದಾರೆ. ಇದರಿಂದಾಗಿ ರೈತರು ಹಾಗು ಕೃಷಿ ಕಾರ್ಮಿಕರು ಸಾಕಷ್ಟು ಸಂಕಷ್ಟಕ್ಕೆ ಒಳಗಾಗಿದ್ದಾರೆಂದು ಜೆಡಿಎಸ್ ಮುಖಂಡರು ಆರೋಪಿಸಿದರು. 
    ಗುರುವಾರ ತಾಲೂಕು ಕಛೇರಿ ಆವರಣದಲ್ಲಿ ಜಾತ್ಯತೀತ ಜನತಾದಳ ವತಿಯಿಂದ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದಾ ಅಪ್ಪಾಜಿ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ, ಜೆಡಿಎಸ್ ನಗರ ಅಧ್ಯಕ್ಷ ಆರ್. ಕರುಣಾಮೂರ್ತಿ, ಪ್ರಮುಖರಾದ ಗೊಂದಿ ಜಯರಾಂ, ಎಂ.ಎ ಅಜಿತ್, ತಿಮ್ಮೇಗೌಡ, ಸುರೇಶ್, ಎ. ಮಸ್ತಾನ್, ಎಚ್.ಬಿ ರವಿಕುಮಾರ್ ಸೇರಿದಂತೆ ಇನ್ನಿತರರು, ಕಂದಾಯ ಹಾಗು ಅರಣ್ಯ ಇಲಾಖೆ ಅಧಿಕಾರಿಗಳು ಭೂಮಿ ಜಂಟಿ ಸರ್ವೇ ಮಾಡದೆ, ರೈತರಿಗೆ ಯಾವುದೇ ಪೋಡಿ ದುರಸ್ತಿ ಮಾಡದೆ ಇರುವುದರಿಂದ ಹಲವರಿಗೆ ಖಾತೆ ಬದಲಾವಣೆ ಮಾಡಿಕೊಳ್ಳಲು ತೊಂದರೆಯಾಗುತ್ತಿದೆ. ಹಲವಾರು ಬಾರಿ ಮನವಿ ಸಲ್ಲಿಸಿದ್ದರೂ ಸಹ ಯಾವುದೇ ಪ್ರಯೋಜನವಾಗುತ್ತಿಲ್ಲ. ಅಲ್ಲದೆ ಭೂಮಿಗೆ ಸಂಬಂಧಿಸಿದ ಹಲವಾರು ಸಮಸ್ಯೆಗಳಿದ್ದು, ತಾಲೂಕಿನ ದೊಡ್ಡೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಮ್ಮೆದೊಟ್ಟಿ ಮತ್ತು ನೆಟ್ಟಕಲ್ಲಹಟ್ಟಿ ಗ್ರಾಮಗಳಲ್ಲಿ ಕಂದಾಯ ಹಾಗು ಅರಣ್ಯ ಭೂಮಿಯನ್ನು ಅಧಿಕಾರ ದುರ್ಬಳಕೆ ಮಾಡಿಕೊಂಡು ಬೇರೆಯವರು ಕಬಳಿಸುತ್ತಿದ್ದಾರೆ. ತಾಲೂಕು ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದಿದೆ ಎಂದು ಆರೋಪಿಸಿದರು. 

    
    ಅರಳಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಳೆ ಗಂಗೂರು ಗ್ರಾಮದಲ್ಲಿ ರೈತರೊಬ್ಬರ ಜಮೀನಿನಲ್ಲಿ ಏಕಾಏಕಿ ನೂರಾರು ಅಡಕೆ ಸಸಿಗಳನ್ನು ಕಡಿದು ಹಾಕಿ ರಸ್ತೆ ನಿರ್ಮಾಣ ಮಾಡಲಾಗುತ್ತಿದ್ದು, ಯಾವುದೇ ನೋಟಿಸ್ ಸಹ ನೀಡಿರುವುದಿಲ್ಲ. ಜಮೀನಿನ ಮಾಲೀಕರೊಂದಿಗೆ ಚರ್ಚಿಸದೆ, ಯಾವುದೇ ಪರಿಹಾರ ಸಹ ನೀಡದೇ ದೌರ್ಜನ್ಯವೆಸಗಿರುವುದು ಖಂಡನೀಯ. ಅಲ್ಲದೆ ವಿನಾಕಾರಣ ಕೆಲವರ ವಿರುದ್ಧ ಜಾತಿನಿಂದನೆ ಪ್ರಕರಣಗಳನ್ನು ದಾಖಲಿಸಿ ಬೆದರಿಕೆ ಹಾಕುತ್ತಿರುವುದು ಸರಿಯಲ್ಲ. ಕಂದಾಯ ಇಲಾಖೆ ಅಧಿಕಾರಿಗಳು ತಮ್ಮ ಕರ್ತವ್ಯ ಪ್ರಾಮಾಣಿಕವಾಗಿ ನಿರ್ವಹಿಸದೆ ಒತ್ತಡಕ್ಕೆ ಮಣಿದು ದೌರ್ಜನ್ಯವೆಸಗುತ್ತಿದ್ದಾರೆಂದು ದೂರಿದರು.   
    ತಾಲೂಕು ಆಡಳಿತದ ವಿರುದ್ಧ ಉಪವಿಭಾಗಾಧಿಕಾರಿಗಳ ಸಹಾಯಕ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು. ಪ್ರಮುಖರಾದ ಚಂದ್ರೇಗೌಡ, ಧರ್ಮೇಗೌಡ, ಡಿ ಆನಂದ, ಜಯರಾಮ, ಮಧುಸೂದನ್, ಮೋಹನ್ ರಾವ್, ಧರ್ಮರಾಜ್, ಭಾಗ್ಯಮ್ಮ, ಸುಬ್ಬಣ್ಣ, ಉದಯಕುಮಾರ್, ಆರ್. ಮೋಹನ್ ಕುಮಾರ್, ಗುಣಶೇಖರ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.