ವಿಐಎಸ್‌ಎಲ್ ಕಾರ್ಖಾನೆಯಿಂದ ಆ ಯೋಜನೆ

ಶಿವಮೊಗ್ಗ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಾದ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮತ್ತು ಶಂಕರ ಕಣ್ಣಿನ ಆಸ್ಪತ್ರೆ, ತಾಲೂಕಿನ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಹಾಗೂ ವಿಐಎಸ್‌ಎಲ್ ಆಸ್ಪತ್ರೆಗಳ ಸಹಯೋಗದೊಂದಿಗೆ ಭದ್ರಾವತಿ ತಾಲೂಕಿನ ಅರಕೆರೆ ಗ್ರಾಮದಲ್ಲಿ ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಸಾಂಸ್ಥಿಕ ಸಾಮಾಜಿಕ ಕಳಕಳಿಯ (ಸಿಎಸ್ಆರ್) ಅಂಗವಾಗಿ ಆಯೋಜಿಸಲಾಗಿದ್ದ ಸಮಗ್ರ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು. ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ ಶಿಬಿರ ಉದ್ಘಾಟಿಸಿದರು.
ಭದ್ರಾವತಿ: ಶಿವಮೊಗ್ಗ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಾದ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮತ್ತು ಶಂಕರ ಕಣ್ಣಿನ ಆಸ್ಪತ್ರೆ, ತಾಲೂಕಿನ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಹಾಗೂ ವಿಐಎಸ್‌ಎಲ್ ಆಸ್ಪತ್ರೆಗಳ ಸಹಯೋಗದೊಂದಿಗೆ ತಾಲೂಕಿನ ಅರಕೆರೆ ಗ್ರಾಮದಲ್ಲಿ ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಸಾಂಸ್ಥಿಕ ಸಾಮಾಜಿಕ ಕಳಕಳಿಯ (ಸಿಎಸ್ಆರ್) ಅಂಗವಾಗಿ ಆಯೋಜಿಸಲಾಗಿದ್ದ ಸಮಗ್ರ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು.
ಹೃದಯ ರೋಗ, ಮೂಳೆ ಚಿಕಿತ್ಸೆ, ಸಾಮಾನ್ಯ ತಪಾಸಣೆ, ನೇತ್ರ ಹಾಗೂ ದಂತ ಮತ್ತು ಸ್ತ್ರೀ ರೋಗ ತಪಾಸಣೆ ಹಾಗೂ ಸಮಾಲೋಚನೆ ಅನುಭವಿ ತಜ್ಞ ವೈದ್ಯರ ತಂಡದಿಂದ ನಡೆಸಲಾಯಿತು.
ಅಲ್ಲದೆ ರಕ್ತದೊತ್ತಡ (ಬಿಪಿ), ರಕ್ತದಲ್ಲಿನ ಸಕ್ಕರೆ ಪರೀಕ್ಷೆ, ಎಲೆಕ್ಟ್ರೋಕಾರ್ಡಿಯೋಗ್ರಾಮ್ (ಇಸಿಜಿ) ಮತ್ತು 2ಡಿ ಎಕೋಕಾರ್ಡಿಯೋಗ್ರಫಿ (2ಡಿ ಎಕೋ) ಪರೀಕ್ಷೆಗಳನ್ನು ನಡೆಸಲಾಯಿತು. ತಪಾಸಣೆ ಮತ್ತು ಪರೀಕ್ಷೆ ಜೊತೆಗೆ ಉಚಿತ ಔಷಧಿಗಳನ್ನು ಸಹ ವಿತರಿಸಲಾಯಿತು.
ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ ಶಿಬಿರ ಉದ್ಘಾಟಿಸಿದರು. ಕಾರ್ಖಾನೆ ಅಧಿಕಾರಿಗಳಾದ ಎಲ್. ಪ್ರವೀಣ್ ಕುಮಾರ್, ಶೋಭಾ ಶಿವಶಂಕರನ್, ವೈದ್ಯರಾದ ಡಾ. ಕೆ.ಎಸ್. ಸುಜೀತ್ ಕುಮಾರ್, ಡಾ. ಎಸ್.ಎನ್. ಸುರೇಶ್, ಎಮ್.ಎಲ್ ಯೋಗೀಶ್, ಅಪರ್ಣ, ಅರಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ರತ್ನಮ್ಮ ರುದ್ರೇಶ್, ಪಂಚಾಿತಿ ಅಭಿವೃದ್ಧಿ ಅಧಿಕಾರಿ ಆರ್. ಶಿವಶಂಕರಮೂರ್ತಿ, ಸದಸ್ಯರಾದ ಎಸ್.ಎಲ್. ರವಿಕುಮಾರ್, ಟಿ.ಎಮ್ ಗುರುಮೂರ್ತಿ, ಟಿ. ಗಾಯತ್ರಿ ಶಂಕರಪ್ಪ, ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯಿನಿ ಕಮಲಮ್ಮ ಅರಕೆರೆ, ಸಹ್ಯಾದ್ರಿ ನಾರಾಯಣ ಹೃದಯಾಲಯ ಆಸ್ಪತ್ರೆ ವೈದ್ಯರಾದ ಡಾ. ಹರ್ಷಗೌಡ, ಡಾ. ಚಂದನ್, ಡಾ. ಬಸವರಾಜ್ ಮತ್ತು ಗಣೇಶ್. ಶಂಕರ ಕಣ್ಣಿನ ಆಸ್ಪತ್ರೆಮ ಹರ್ಷ ಆರ್. ಗೌಡ, ಮಾರಶೆಟ್ಟಿಹಳ್ಳಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಹರ್ಷಿತ, ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಕೆ.ಎಮ್ ಮಂಜುಳ, ನಾಗರತ್ನ, ಲಲಿತ ಮತ್ತು ಲಯನ್ಸ್ ಕ್ಲಬ್ ಅಧ್ಯಕ್ಷ ಶ್ರೀನಿವಾಸ ಉಪಸ್ಥಿತರಿದ್ದರು. ಸುಮಾರು 300ಕ್ಕೂ ಹೆಚ್ಚು ಗ್ರಾಮಸ್ಥರು ಶಿಬಿರದ ಸದುಪಯೋಗಪಡಿಸಿಕೊಂಡರು.
ಇದೇ ಸಂದರ್ಭದಲ್ಲಿ ಸೈಲ್-ವಿಐಎಸ್‌ಎಲ್ ‘ಹಸಿರೆಡೆಗೆ-ನಮ್ಮ ನಡೆ’ ಉಪಕ್ರಮದಡಿಯಲ್ಲಿ ನುಗ್ಗೆ ಮತ್ತು ಪಪ್ಪಾಯಿ ಉತ್ತಮ ತಳಿಯ 1500 ಬೀಜಗಳನ್ನು ಗ್ರಾಮಸ್ಥರಿಗೆ ಉಚಿತವಾಗಿ ವಿತರಿಸಲಾಯಿತು.