
ಭದ್ರಾವತಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಆಡಳಿತ, ತಾ.ಪಂ., ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಮಾಜ ಮತ್ತು ವಿವಿಧ ಸಂಘಟನೆಗಳು ಸಹಯೋಗದೊಂದಿಗೆ ಹಳೇನಗರದ ವೀರಶೈವ ಸಭಾಭವನದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ.ಸಂಗಮೇಶ್ವರ್ ಉದ್ಘಾಟಿಸಿದರು.
ಭದ್ರಾವತಿ : ಶ್ರೀ ಮಹರ್ಷಿ ವಾಲ್ಮೀಕಿಯವರು ರಾಮಾಯಣ ಮಹಾಕಾವ್ಯದ ಮೂಲಕ ಜಗತ್ತಿಗೆ ನೀಡಿರುವ ಕೊಡುಗೆ ಅಪಾರವಾಗಿದ್ದು, ಅವರ ಮೌಲ್ಯಗಳು ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಿವೆ ಎಂದು ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ.ಸಂಗಮೇಶ್ವರ್ ಹೇಳಿದರು.
ಅವರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಆಡಳಿತ, ತಾ.ಪಂ., ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಮಾಜ ಮತ್ತು ವಿವಿಧ ಸಂಘಟನೆಗಳು ಸಹಯೋಗದೊಂದಿಗೆ ಹಳೇನಗರದ ವೀರಶೈವ ಸಭಾಭವನದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶ್ರೀ ಮಹರ್ಷಿ ವಾಲ್ಮೀಕಿಯವರು ಮೊದಲ ಮೌಲ್ಯಾಧಾರಿತ ಮಹಾಕಾವ್ಯ ರಚಿಸುವ ಮೂಲಕ ಜನರ ಮೌಲ್ಯಯುತ ಬದುಕಿಗೆ ಸಾಹಿತ್ಯಿಕವಾಗಿ, ಸಾಮಾಜಿಕವಾಗಿ, ಆಧ್ಯಾತ್ಮಿಕವಾಗಿ ನೀಡಿರುವ ಕೊಡುಗೆ ಅನನ್ಯವಾಗಿದೆ ಎಂದರು.
ವಾಲ್ಮೀಕಿ ಸಮಾಜದವರು ಹೆಚ್ಚು ಸಂಘಟಿತಗೊಳ್ಳಬೇಕು. ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗು ರಾಜಕೀಯವಾಗಿ ಅಭಿವೃದ್ಧಿ ಹೊಂದಬೇಕು. ಕ್ಷೇತ್ರದಲ್ಲಿ ವಾಲ್ಮೀಕಿ ಸಮಾಜದವರ ಏಳಿಗೆಗೆ ಬದ್ಧನಾಗಿದ್ದೇನೆ ಎಂದರು.
ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಎಂ. ಮಣಿ ಎಎನ್‌ಎಸ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಪೌರಾಯುಕ್ತ ಕೆ.ಎನ್ ಹೇಮಂತ್, ಸದಸ್ಯರಾದ ಬಿ.ಕೆ ಮೋಹನ್, ಚನ್ನಪ್ಪ, ಶಶಿಕಲಾ ನಾರಾಯಣಪ್ಪ, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷರಾದ ಬಸವರಾಜ್ ಆನೆಕೊಪ್ಪ, ಶಿವಕುಮಾರ್ ಆರ್. ನಾಗೋಲಿ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮಕ್ಕೂ ಮೊದಲು ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ಹುತ್ತಾ ಕಾಲೋನಿಯಿಂದವೀರಶೈವ ಸಭಾಭವನದವರಗೆ ನಡೆಯಿತು.