ಶನಿವಾರ, ಅಕ್ಟೋಬರ್ 18, 2025

ಕಣ್ಮನ ಸೆಳೆದ ಉಕ್ಕಿನ ನಗರದ ಆರ್‌ಎಸ್‌ಎಸ್ ವಿಜಯದಶಮಿ ಪಥ ಸಂಚಲನ

ರಾಷ್ಟ್ರೀಯವಾದಿ ಚಿಂತನೆಗಳು, ವಿಚಾರಗಳ ಮೂಲಕ ದೇಶದ ಅತಿ ದೊಡ್ಡ ಸಂಘಟನೆಯಾಗಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್) ತನ್ನ ಶತಮಾನ ಸಂಭ್ರಮಾಚರಣೆ ಅಂಗವಾಗಿ ಶನಿವಾರ ಭದ್ರಾವತಿ ನಗರದಲ್ಲಿ ಹಮ್ಮಿಕೊಂಡಿದ್ದ ವಿಜಯದಶಮಿ ಪಥ ಸಂಚಲನ ಕಣ್ಮನ ಸೆಳೆಯಿತು. 
    ಭದ್ರಾವತಿ : ರಾಷ್ಟ್ರೀಯವಾದಿ ಚಿಂತನೆಗಳು, ವಿಚಾರಗಳ ಮೂಲಕ ದೇಶದ ಅತಿ ದೊಡ್ಡ ಸಂಘಟನೆಯಾಗಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್) ತನ್ನ ಶತಮಾನ ಸಂಭ್ರಮಾಚರಣೆ ಅಂಗವಾಗಿ ಶನಿವಾರ ನಗರದಲ್ಲಿ ಹಮ್ಮಿಕೊಂಡಿದ್ದ ವಿಜಯದಶಮಿ ಪಥ ಸಂಚಲನ ಕಣ್ಮನ ಸೆಳೆಯಿತು. 
    ಶತಮಾನ ಪೂರೈಸಿರುವ ಆರ್‌ಎಸ್‌ಎಸ್ ೧೦೦ನೇ ವರ್ಷದ ವಿಜಯದಶಮಿ ಪಥ ಸಂಚಲನಕ್ಕೆ ನಗರದಲ್ಲಿ ಕಳೆದ ಕೆಲವು ದಿನಗಳಿಂದ ಭರದ ಸಿದ್ದತೆಗಳನ್ನು ಕೈಗೊಂಡಿತ್ತು. 
    ಪಥ ಸಂಚಲನ ಸಾಗುವ ಪ್ರಮುಖ ರಸ್ತೆಗಳು ಕೇಸರಿಮಯವಾಗಿ ಕಂಗೊಳಿಸಿದವು. ಎಲ್ಲೆಡೆ ಫ್ಲೆಕ್ಸ್, ಬಂಟಿಂಗ್ಸ್‌ಗಳು ರಾರಾಜಿಸಿದವು. ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್, ಸ್ವಾಮಿ ವಿವೇಕಾನಂದ, ಜಗಜ್ಯೋತಿ ಬಸವೇಶ್ವರರು, ಶ್ರೀ ಮಹರ್ಷಿ ವಾಲ್ಮೀಕಿ, ಶ್ರೀ ಭಗೀರಥ ಮಹಿರ್ಷಿ, ದಾಸಶ್ರೇಷ್ಠ ಕನಕದಾಸರು, ಮಾಜಿ ರಾಷ್ಟ್ರಪತಿ ದಿವಂಗತ ಅಬ್ದುಲ್ ಕಲಾಮ್, ಚಂದ್ರಶೇಖರ್ ಅಜಾದ್, ಭಗತ್‌ಸಿಂಗ್, ರಾಣಾ ಪ್ರತಾಪ್, ಶಿವಾಜಿ ಮಹಾರಾಜ್, ಆರ್‌ಎಸ್‌ಎಸ್ ಸಂಸ್ಥಾಪಕರು ಸೇರಿದಂತೆ ಇನ್ನಿತರ ಮಹಾನ್ ವ್ಯಕ್ತಿಗಳ ರಸ್ತೆಯುದ್ದಕ್ಕೂ ಅಳವಡಿಸಲಾಗಿದ್ದ ಫ್ಲೆಕ್ಸ್‌ಗಳು ಗಮನ ಸೆಳೆದವು. 
    ಪಥ ಸಂಚಲನದಲ್ಲಿ ಸುಮಾರು ೬೫೦ ಗಣವೇಷಧಾರಿಗಳು, ವಿವಿಧ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು ಸೇರಿದಂತೆ ಸುಮಾರು ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು. ಗಣವೇಷಧಾರಿಗಳಿಗೆ ರಸ್ತೆಯುದ್ದಕ್ಕೂ ಪುಷ್ಪಾರ್ಚನೆ ನಡೆಯಿತು. ಅಲ್ಲದೆ ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದ ಎಲ್ಲಾ ವಾಹನಗಳಿಗೆ ಪುಷ್ಪಾಲಂಕಾರ ಕೈಗೊಳ್ಳಲಾಗಿತ್ತು.
ಪ್ರಮುಖ ರಸ್ತೆಗಳು ವಿದ್ಯುತ್ ದೀಪಗಳಿಂದ ಅಲಂಕೃತಗೊಂಡಿದ್ದವು. 
    ಭಾರತೀಯ ಜನತಾ ಪಕ್ಷ, ಅಖಿಲ ಭಾರತ ವಿದ್ಯಾರ್ಥಿ ಪರಿಷತ್, ವಿಶ್ವ ಹಿಂದೂ ಪರಿಷದ್, ಸಹಕಾರಿ ಭಾರತಿ ಸೇರಿದಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸುಮಾರು ೩೩ಕ್ಕೂ ಹೆಚ್ಚು ಶಾಖೆಗಳು ಪಥ ಸಂಚಲನಕ್ಕೆ ಬೆಂಬಲ ಸೂಚಿಸಿ ಪಾಲ್ಗೊಂಡಿದ್ದವು. 
 

ರಾಷ್ಟ್ರೀಯವಾದಿ ಚಿಂತನೆಗಳು, ವಿಚಾರಗಳ ಮೂಲಕ ದೇಶದ ಅತಿ ದೊಡ್ಡ ಸಂಘಟನೆಯಾಗಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್) ತನ್ನ ಶತಮಾನ ಸಂಭ್ರಮಾಚರಣೆ ಅಂಗವಾಗಿ ಶನಿವಾರ ಭದ್ರಾವತಿ ನಗರದಲ್ಲಿ ಹಮ್ಮಿಕೊಂಡಿದ್ದ ವಿಜಯದಶಮಿ ಪಥ ಸಂಚಲನ ಹಿನ್ನಲೆಯಲ್ಲಿ ಪ್ರಮುಖ ರಸ್ತೆಗಳು, ವೃತ್ತಗಳು ವಿದ್ಯುತ್ ದೀಪಗಳಿಂದ ಅಲಂಕೃತಗೊಂಡಿದ್ದವು. 

ಅ.೧೯ರಂದು ಬಿಳಿಕಿ ಹಿರೇಮಠದಲ್ಲಿ ವೀರಶೈವ-ಲಿಂಗಾಯತ ಶಿವಾಚಾರ್ಯರ ಸದ್ಬೋಧನಾ ಪಾದಯಾತ್ರೆ



    ಭದ್ರಾವತಿ : ಬೆಂಗಳೂರಿನ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ವತಿಯಿಂದ ತಾಲೂಕಿನ ಬಿಳಿಕಿ ಹಿರೇಮಠದಲ್ಲಿ ಅ.೧೯ರ ಭಾನುವಾರ ವೀರಶೈವ-ಲಿಂಗಾಯತ ಶಿವಾಚಾರ್ಯರ ಸದ್ಬೋಧನಾ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. 
    ಹಿರೇಮಠದ ಪೀಠಾಧ್ಯಕ್ಷರಾದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ಪಾದಯಾತ್ರೆಯಲ್ಲಿ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಹಾಸನ, ಕೊಡಗು ಹಾಗು ಮಂಗಳೂರು ಜಿಲ್ಲಾ ಘಟಕಗಳ ಪ್ರಮುಖರು ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. 
    ಬೆಳಿಗ್ಗೆ ೧೧ ಗಂಟೆಗೆ ಲಿಂಗು-ಶಿವದಾರ-ವಿಭೂತಿ-ರುದ್ರಾಕ್ಷಿ ಧಾರಣಾ ಕಾರ್ಯಕ್ರಮ ನಡೆಯಲಿದ್ದು, ನಂತರ ಶ್ರೀ ಮಠದ ಶ್ರೀ ಷ.ಬ್ರ.ಲಿಂ. ರಾಚೋಟಿ ಶಿವಾಚಾರ್ಯ ಸ್ವಾಮಿಗಳವರ ೫೮ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ನಡೆಯಲಿದೆ. ಸಂಸದ ಬಿ.ವೈ ರಾಘವೇಂದ್ರ, ಕರ್ನಾಟಕ ರಾಜ್ಯ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ. 

ಅಸಂಘಟಿತ ಕಾರ್ಮಿಕರ ಸಂಘ : ನಗರ, ಗ್ರಾಮಾಂತರ ನೂತನ ಪದಾಧಿಕಾರಿಗಳ ಪದಗ್ರಹಣ

ರಾಜ್ಯ ಅಸಂಘಟಿತ ಕಾರ್ಮಿಕರ ಸಂಘ ಭದ್ರಾವತಿ ನಗರ ಮತ್ತು ಗ್ರಾಮಾಂತರ ಘಟಕಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜಿಲ್ಲಾಧ್ಯಕ್ಷ ರಮೇಶ್ ಮಡಿವಾಳ ಬಂದಗದ್ದೆರವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು. 
    ಭದ್ರಾವತಿ : ರಾಜ್ಯ ಅಸಂಘಟಿತ ಕಾರ್ಮಿಕರ ಸಂಘ ಗ್ರಾಮಾಂತರ ಮತ್ತು ನಗರ ಘಟಕಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜಿಲ್ಲಾಧ್ಯಕ್ಷ ರಮೇಶ್ ಮಡಿವಾಳ ಬಂದಗದ್ದೆರವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು. 
    ರಾಜ್ಯಾಧ್ಯಕ್ಷ ಪ್ರದೀಪ್ ಹೊನ್ನಪ್ಪ, ರಾಜ್ಯ ಕಾರ್ಯದರ್ಶಿ ಸುರೇಖಾ ಪಾಲಾಕ್ಷಪ್ಪ, ಜಿಲ್ಲಾ ಉಪಾಧ್ಯಕ್ಷೆ ಅಶ್ವಿನಿ ಗೌಡ, ತಾಲೂಕು ನಗರ ಅಧ್ಯಕ್ಷೆ ರೂಪ ನಾಗರಾಜ್, ಗ್ರಾಮಾಂತರ ಅಧ್ಯಕ್ಷೆ ಶಕುಂತಲಾ ಪ್ರದೀಪ್ ಅರಳಿಹಳ್ಳಿ  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ಡ್ರೈವರ್, ಕ್ಲೀನರ್, ಹೆಲ್ಪರ್, ಮೆಕ್ಯಾನಿಕ್, ಬ್ಯೂಟಿಷಿಯನ್, ಪೈಂಟರ್, ಹಮಾಲಿ, ಹೋಟೆಲ್ ಕೂಲಿ ಕಾರ್ಮಿಕರುಗಳು, ದಿನಗೂಲಿ ಕಾರ್ಮಿಕರು ಸೇರಿದಂತೆ ಎಲ್ಲಾ ತರಹದ ಅಸಂಘಟಿತ ಕಾರ್ಮಿಕರಿಗೆ ಇಲಾಖೆಯಿಂದ ಲಭ್ಯವಾಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಯಿತು
    ತಾಲೂಕು ನಗರ ಸಮಿತಿ ನೂತನ ಪದಾಧಿಕಾರಿಗಳು : 
    ಅಧ್ಯಕ್ಷೆ ರೂಪ ನಾಗರಾಜ್, ಪ್ರಧಾನ ಕಾರ್ಯದರ್ಶಿ ರೂಪ ಮಲ್ಲಿಕಾರ್ಜುನ್ ಹೆಬ್ಬಂಡಿ, ಉಪಾಧ್ಯಕ್ಷರು ಎಚ್. ಮಂಜುನಾಥ್ ಜನ್ನಾಪುರ, ಅನ್ನಪೂರ್ಣ ಉಜ್ಜನಿಪುರ, ಮಂಜುಳ ನಾಗರಾಜ್ ಬಿಹೆಚ್ ರಸ್ತೆ, ಸಂಘಟನಾ ಕಾರ್ಯದರ್ಶಿ ದೀಕ್ಷಿತ್ ಗೌಡ ಕಬಳಿಕಟ್ಟೆ, ಕಾರ್ಯದರ್ಶಿಗಳು ಲತಾ, ಕವಿತ, ಭಾಗ್ಯ ಮಾರುತಿ ನಗರ, ಹೇಮಾ, ರುಕ್ಮಿಣಿ ಹೊಸಮನೆ, ನಿರ್ಮಲ ಮತ್ತು ರೂಪ ಮಹೇಶ್ ಇವರುಗಳನ್ನು ಆಯ್ಕೆ ಮಾಡಲಾಯಿತು.

ಶುಕ್ರವಾರ, ಅಕ್ಟೋಬರ್ 17, 2025

ದೀಪಾವಳಿ ಸಂಭ್ರಮಕ್ಕೆ ಅಂಟಿಗೆ ಪಂಟಿಗೆ ಮಹಿಳಾ ಜಾನಪದ ತಂಡಕ್ಕೆ ಆಹ್ವಾನ

ಅ.೨೦ರ ಸಂಜೆ ೬ ಗಂಟೆಗೆ ವಿಶೇಷ ಪೂಜೆಯೊಂದಿಗೆ ಪ್ರದರ್ಶನ ಉದ್ಘಾಟನೆ 

ಎಂ.ಆರ್ ರೇವಣಪ್ಪ 
    ಭದ್ರಾವತಿ: ಕರ್ನಾಟಕ ಜಾನಪದ ಪರಿಷತ್ತು ಹಾಗು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಘಟಕದಿಂದ ಮಲೆನಾಡಿನ ವಿಶಿಷ್ಟ ಜಾನಪದ ಕಲೆಯಾದ ಅಂಟಿಗೆ ಪಂಟಿಗೆ ಕಲಾ ತಂಡಗಳನ್ನು ಆಹ್ವಾನಿಸಲಾಗಿದೆ. ದೀಪಾವಳಿ ಸಂಭ್ರಮಕ್ಕೆ ಸಡಗರ ತರುವ ಈ ವಿಶೇಷ ಜಾನಪದ ಕಲೆಯ ಕಲಾ ಪ್ರದರ್ಶನ ಇಡೀ ರಾತ್ರಿ ನಡೆಯಲಿದೆ. ಅ.೨೦ರ ಸೋಮವಾರ ಸಂಜೆ ೬ ರಿಂದ ಬೆಳಿಗ್ಗೆವರೆಗೆ ಅಪೇಕ್ಷಿತರ ಮನೆಗಳಿಗೆ ಜ್ಯೋತಿಯೊಂದಿಗೆ ಆಗಮಿಸಲಿದೆ ಎಂದು ಕರ್ನಾಟಕ ಜಾನಪದ ಪರಿಷತ್ತು ತಾಲೂಕು ಘಟಕದ ಅಧ್ಯಕ್ಷ, ಜಾನಪದ ಕಲಾವಿದ ಎಂ.ಆರ್ ರೇವಣಪ್ಪ ತಿಳಿಸಿದ್ದಾರೆ. 
    ಅಂಟಿಗೆ ಪಂಟಿಗೆ ಈ ವಿಶಿಷ್ಟ ಜಾನಪದ ಕಲೆ ಪ್ರಸ್ತುತ ನಶಿಸಿ ಹೋಗುವ ಹಂತದಲ್ಲಿದ್ದು, ಇದನ್ನು ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗೆ ಕೊಡುಗೆಯಾಗಿ ನೀಡುವ ಉದ್ದೇಶದೊಂದಿಗೆ ಈ ಕಲಾ ತಂಡಗಳನ್ನು ಆಹ್ವಾನಿಸಲಾಗುತ್ತಿದೆ. ಅಲ್ಲದೆ ಕರ್ನಾಟಕ ಜಾನಪದ ಪರಿಷತ್ತು ಅಂಟಿಗೆ ಪಂಟಿಗೆ ಕಲಾವಿದರಿಗೂ ರಾಜ್ಯಮಟ್ಟದ ಪುರಸ್ಕಾರ ಲಭಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ. ಈಗಾಗಲೇ ರಾಮನಗರದ ಜಾನಪದ ಲೋಕದಲ್ಲಿ ಅಂಟಿಗೆ ಪಂಟಿಗೆ ತಂಡವನ್ನು ಕಳುಹಿಸಿ ಕಲಾ ಪ್ರದರ್ಶನ ನೀಡಲು ಅವಕಾಶ ಕಲ್ಪಿಸಿಕೊಡುವ ಮೂಲಕ ಆಕಾಡೆಮಿ ಪ್ರಶಸ್ತಿ ಈ ಕಲಾವಿದರಿಗೆ ದೊರಕಿಸುವ ಪ್ರಯತ್ನ ಮಾಡಲಾಗಿದೆ ಎಂದರು. 
    ಈ ಬಾರಿ ಸಹ ಅಂಟಿಗೆ ಪಂಟಿಗೆ ಕಲಾ ತಂಡಗಳು ತಾಲೂಕಿನಾದ್ಯಂತ ಪ್ರದರ್ಶನ ನೀಡಲು ಎಲ್ಲಾ ರೀತಿಯ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ. ಅ.೨೦ರ ಸೋಮವಾರ ಸಂಜೆ ೬ ಗಂಟೆಗೆ ನಗರದ ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ (ಎಸ್‌ಎವಿ) ಕನ್ನಡ ಶಾಲೆ ಸಮೀಪದಲ್ಲಿರುವ ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಅಮ್ಮನವರಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪ್ರದರ್ಶನ ಉದ್ಘಾಟನೆಗೊಳ್ಳಲಿದೆ ಎಂದರು. 
    ಈ ಬಾರಿ ವಿಶೇಷತೆ ಎಂದರೆ .ತೀರ್ಥಹಳ್ಳಿ ತಾಲೂಕಿನ ಶಕುಂತಲಮ್ಮ ಮತ್ತು ಸಂಗಡಿಗರ ಅಂಟಿಗೆ ಪಂಟಿಗೆ ಮಹಿಳಾ ತಂಡ ಆಹ್ವಾನಿಸಲಾಗಿದೆ. ಕರ್ನಾಟಕ ಜಾನಪದ ಪರಿಷತ್ತು ತಾಲೂಕು ಶಾಖೆ ಉಪಾಧ್ಯಕ್ಷೆ ಹೇಮಾವತಿ ವಿಶ್ವನಾಥ್, ಪ್ರಧಾನ ಕಾರ್ಯದರ್ಶಿ ಬಿ.ಎಲ್ ಮೋಹನ್ ಕುಮಾರ್, ಸಂಘಟನಾ ಕಾರ್ಯದರ್ಶಿ ದಿವಾಕರ್, ಅನ್ನಪೂರ್ಣ ಸತೀಶ್ ಸೇರಿದಂತೆ ಇನ್ನಿತರರು ಮಹಿಳಾ ತಂಡವನ್ನು ಸ್ವಾಗತಿಸಲಿದ್ದಾರೆ. ಕರ್ನಾಟಕ ಜಾನಪದ ಪರಿಷತ್ತು ತಾಲೂಕು ಶಾಖೆ ಮಾಜಿ ಅಧ್ಯಕ್ಷ ಕೋಡ್ಲುಯಜ್ಞಯ್ಯ ಸಂಚಾಲಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ತಮ್ಮ ಮನೆಗೆ ಅಂಟಿಗೆ ಪಂಟಿಗೆ ಮಹಿಳಾ ತಂಡ ಆಗಮಿಸಲಿ ಎಂದು ಅಪೇಕ್ಷೆ ಪಡುವವರು ಮೊ: ೯೪೪೮೯೪೩೭೮೩, ೯೦೩೬೬೮೧೦೯೨, ೯೯೪೫೯೧೮೦೧೪, ೯೪೪೯೭೭೮೧೬೬ ಮತ್ತು ೯೯೮೬೨೪೧೨೩೨ ಸಂಖ್ಯೆಗೆ ಕರೆ ಮಾಡಬಹುದಾಗಿದೆ ಎಂದು ಎಂ.ಆರ್ ರೇವಣಪ್ಪ ತಿಳಿಸಿದ್ದಾರೆ. 

ಶತಮಾನ ಸಂಭ್ರಮದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ

ಉಕ್ಕಿನ ನಗರದಲ್ಲಿ ಅ.೧೮ರಂದು ವಿಜಯದಶಮಿ ಪಥ ಸಂಚಲನ 

ರಾಷ್ಟ್ರೀಯವಾದಿ ಚಿಂತನೆಗಳು, ವಿಚಾರಗಳ ಮೂಲಕ ದೇಶದ ಅತಿ ದೊಡ್ಡ ಸಂಘಟನೆಯಾಗಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್) ಇದೀಗ ಶತಮಾನ ಸಂಭ್ರಮಾಚರಣೆಯಲ್ಲಿ ತೊಡಗಿಸಿಕೊಂಡಿದ್ದು,  ಈ ನಡುವೆ ಅ.೧೮ರ ಶನಿವಾರ ಭದ್ರಾವತಿ ನಗರದಲ್ಲಿ ವಿಜಯದಶಮಿ ಪಥ ಸಂಚಲನ ಆಯೋಜಿಸಲಾಗಿದೆ. ಇದಕ್ಕೆ ಪೂರಕವಾಗಿ ಭರದ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ. 
    ಭದ್ರಾವತಿ : ರಾಷ್ಟ್ರೀಯವಾದಿ ಚಿಂತನೆಗಳು, ವಿಚಾರಗಳ ಮೂಲಕ ದೇಶದ ಅತಿ ದೊಡ್ಡ ಸಂಘಟನೆಯಾಗಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್) ಇದೀಗ ಶತಮಾನ ಸಂಭ್ರಮಾಚರಣೆಯಲ್ಲಿ ತೊಡಗಿಸಿಕೊಂಡಿದ್ದು,  ಈ ನಡುವೆ ಅ.೧೮ರ ಶನಿವಾರ ನಗರದಲ್ಲಿ ವಿಜಯದಶಮಿ ಪಥ ಸಂಚಲನ ಆಯೋಜಿಸಲಾಗಿದೆ. ಇದಕ್ಕೆ ಪೂರಕವಾಗಿ ಭರದ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ. 
    ಶತಮಾನ ಪೂರೈಸಿರುವ ಆರ್‌ಎಸ್‌ಎಸ್ ೧೦೦ನೇ ವರ್ಷದ ವಿಜಯದಶಮಿ ಪಥ ಸಂಚಲನಕ್ಕೆ ಭರದ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ. ಶನಿವಾರ ಸಂಜೆ ೫.೩೦ಕ್ಕೆ ಹೊಸಮನೆ ಶಿವಾಜಿ ವೃತ್ತದಿಂದ ಆರಂಭಗೊಳ್ಳುವ ವಿಜಯದಶಮಿ ಪಥ ಸಂಚಲನ ರಂಗಪ್ಪ ವೃತ್ತ, ಮಾಧವಚಾರ್ ವೃತ್ತ, ಹಾಲಪ್ಪ ವೃತ್ತ ಮತ್ತು ಅಂಬೇಡ್ಕರ್ ವೃತ್ತದಿಂದ ಲೋಯರ್ ಹುತ್ತಾದವರೆಗೆ ಸಾಗಲಿದೆ. 
       ಪಥ ಸಂಚಲನ ಸಾಗುವ ಪ್ರಮುಖ ರಸ್ತೆಗಳು ಕೇಸರಿಮಯವಾಗಿವೆ. ಎಲ್ಲೆಡೆ ಫ್ಲೆಕ್ಸ್, ಬಂಟಿಂಗ್ಸ್‌ಗಳು ರಾರಾಜಿಸುತ್ತಿವೆ. ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್, ಸ್ವಾಮಿ ವಿವೇಕಾನಂದ, ಜಗಜ್ಯೋತಿ ಬಸವೇಶ್ವರರು, ಶ್ರೀ ಮಹರ್ಷಿ ವಾಲ್ಮೀಕಿ, ಶ್ರೀ ಭಗೀರಥ ಮಹಿರ್ಷಿ, ದಾಸಶ್ರೇಷ್ಠ ಕನಕದಾಸರು, ಮಾಜಿ ರಾಷ್ಟ್ರಪತಿ ದಿವಂಗತ ಅಬ್ದುಲ್ ಕಲಾಮ್, ಚಂದ್ರಶೇಖರ್ ಅಜಾದ್, ಭಗತ್‌ಸಿಂಗ್, ರಾಣಾ ಪ್ರತಾಪ್, ಶಿವಾಜಿ ಮಹಾರಾಜ್, ಆರ್‌ಎಸ್‌ಎಸ್ ಸಂಸ್ಥಾಪಕರು ಸೇರಿದಂತೆ ಇನ್ನಿತರ ಮಹಾನ್ ವ್ಯಕ್ತಿಗಳ ರಸ್ತೆಯುದ್ದಕ್ಕೂ ಅಳವಡಿಸಲಾಗಿರುವ ಫ್ಲೆಕ್ಸ್‌ಗಳು ಗಮನ ಸೆಳೆಯುತ್ತಿವ


    ಪ್ರಮುಖ ರಸ್ತೆಗಳು ವಿದ್ಯುತ್ ದೀಪಗಳಿಂದ ಅಲಂಕೃತಗೊಂಡಿದ್ದು, ರಾತ್ರಿ ವೇಳೆ ಕಂಗೊಳಿಸಲಿವೆ. ಗಣವೇಷಧಾರಿಯಾಗಿ ಸಾವಿರಾರು ಮಂದಿ ಸ್ವಯಂ ಸೇವಕರು ಪಥಸಂಚಲನದಲ್ಲಿ ಪಾಲ್ಗೊಳ್ಳುತ್ತಿದ್ದು, ಗಣವೇಷಧಾರಿಗಳಿಗೆ ರಸ್ತೆಯುದ್ದಕ್ಕೂ ಪುಷ್ಪಾರ್ಚನೆ ನಡೆಯಲಿದ್ದು, ಅಲ್ಲದೆ ಪಥ ಸಂಚಲನದಲ್ಲಿ ಪಾಲ್ಗೊಳ್ಳುವ ಎಲ್ಲಾ ವಾಹನಗಳಿಗೆ ಪುಷ್ಪಾಲಂಕಾರ ಸಹ ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ೨ ಕ್ವಿಂಟಾಲ್ ಹೂ ಖರೀದಿಸಲಾಗಿದೆ. ಈ ನಡುವೆ ಪಥ ಸಂಚಲನದಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳುವ ಹಿರಿಯ ಸ್ವಯಂ ಸೇವಕರು ಕಿರಿಯ ಸ್ವಯಂ ಸೇವಕರು ಹಾಗು ಬಂಧು-ಬಳಗ, ಆಸಕ್ತಿಗೆ ಮನವಿ ಮಾಡುತ್ತಿದ್ದಾರೆ. 
    ಉಕ್ಕಿನ ನಗರದಲ್ಲಿ ವಿಜಯದಶಮಿ ಪಥ ಸಂಚಲನ ಕೈಗೊಳ್ಳುವ ಮೂಲಕ ಆರ್‌ಎಸ್‌ಎಸ್ ತನ್ನ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಭಾರತೀಯ ಜನತಾ ಪಕ್ಷ, ಅಖಿಲ ಭಾರತ ವಿದ್ಯಾರ್ಥಿ ಪರಿಷತ್, ವಿಶ್ವ ಹಿಂದೂ ಪರಿಷದ್, ಸಹಕಾರಿ ಭಾರತಿ ಸೇರಿದಂತೆ ಸುಮಾರು ೩೩ಕ್ಕೂ ಹೆಚ್ಚು ಶಾಖೆಗಳಿಗೆ ಮಾತೃ ಸಂಸ್ಥೆಯಾಗಿರುವ ಆರ್‌ಎಸ್‌ಎಸ್ ಇದೀಗ ಶತಮಾನ ಸಂಭ್ರಮಾಚರಣೆಯಲ್ಲಿ ತನ್ನ ಭವ್ಯಪರಂಪರೆಯನ್ನು ಅನಾವರಣಗೊಳಿಸಲು ಮುಂದಾಗಿದೆ. 
 

ಭದ್ರಾವತಿ ನಗರದಲ್ಲಿ ಶನಿವಾರ ವಿಜಯದಶಮಿ ಪಥ ಸಂಚಲನ ಆಯೋಜಿಸಲಾಗಿದೆ. ಗಣವೇಷಧಾರಿಯಾಗಿ ಸಾವಿರಾರು ಮಂದಿ ಸ್ವಯಂ ಸೇವಕರು ಪಥಸಂಚಲನದಲ್ಲಿ ಪಾಲ್ಗೊಳ್ಳುತ್ತಿದ್ದು, ಗಣವೇಷಧಾರಿಗಳಿಗೆ ರಸ್ತೆಯುದ್ದಕ್ಕೂ ಪುಷ್ಪಾರ್ಚನೆ ನಡೆಯಲಿದ್ದು, ಅಲ್ಲದೆ ಪಥ ಸಂಚಲನದಲ್ಲಿ ಪಾಲ್ಗೊಳ್ಳುವ ಎಲ್ಲಾ ವಾಹನಗಳಿಗೆ ಪುಷ್ಪಾಲಂಕಾರ ಸಹ ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಸುಮಾರು ೨ ಕ್ವಿಂಟಾಲ್ ಹೂ ಖರೀದಿಸಿರುವುದು. 

ಸೈಲ್-ವಿಐಎಸ್‌ಎಲ್‌ನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯಲ್ಲಿ ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ, ಮತ್ತು ವಿಐಎಸ್‌ಎಲ್ ಆಸ್ಪತ್ರೆ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. 
    ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯಲ್ಲಿ ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ, ಮತ್ತು ವಿಐಎಸ್‌ಎಲ್ ಆಸ್ಪತ್ರೆ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. 
    ಕಾರ್ಖಾನೆಯ ಸುಮಾರು ೧೪೩ಕ್ಕೂ ಹೆಚ್ಚು  ಕಾಯಂ ಹಾಗು ಗುತ್ತಿಗೆ ಕಾರ್ಮಿಕರು ಶಿಬಿರದ ಸದುಪಯೋಗ ಪಡೆದುಕೊಂಡರು. ಶಿಬಿರದಲ್ಲಿ ರಕ್ತದೊತ್ತಡ(ಬಿಪಿ), ಜಿಆರ್‌ಬಿಎಸ್(ಮಧುಮೇಹ), ಸಮೀಪ ದೃಷ್ಠಿ ದೋಷ, ದೂರ ದೃಷ್ಠಿ ದೋಷ, ಬಣ್ಣ ದೃಷ್ಠಿ, ಬೈನಾಕುಲರ್ ಮೌಲ್ಯಮಾಪನ ಮತ್ತು ಟ್ರಯಲ್ ಸೆಟ್/ ವಕ್ರೀಭವನ ತಪಾಸಣೆ ಸೇರಿದಂತೆ ಇನ್ನಿತರ ತಪಾಸಣೆಗಳನ್ನು ನಡೆಸಲಾಯಿತು. ಶಂಕರ ಕಣ್ಣಿನ ಆಸ್ಪತ್ರೆ ತಜ್ಞ ವೈದ್ಯೆ ಡಾ. ಮೇಘನ ಶಿಬಿರದಲ್ಲಿ ಸಲಹೆ ನೀಡಿದರು.
    ಶಂಕರ ಕಣ್ಣಿನ ಆಸ್ಪತ್ರೆ ನೇತ್ರ ತಜ್ಞ ಸಹಾಯಕರಾದ ಹರ್ಷ, ಸೋಮೇಶ್ ಮತ್ತು ಚೇತನ, ವಿಐಎಸ್‌ಎಲ್ ಆಸ್ಪತ್ರೆಯ ಅಲೆನ್ ಪಿಂಟೋ, ಪುಷ್ಪಲತಾ, ಮೋಹನ್, ನವೀನ್, ಉಮೇಶ್, ರಮೇಶ್ ಮತ್ತು ಕಿರಿಯ ಅಧಿಕಾರಿ (ಮಾನವ ಸಂಪನ್ಮೂಲ) ಎಂ.ಎಲ್ ಯೋಗೀಶ್ ಶಿಬಿರದ ಯಶಸ್ವಿಗೆ ಸಹಕರಿಸಿದರು. 
    ವಿಐಎಸ್‌ಎಲ್ ಆಸ್ಪತ್ರೆ ಹೆಚ್ಚುವರಿ ಮುಖ್ಯ ವೈದ್ಯಾಧಿಕಾರಿ ಡಾ. ಸುಜೀತ್ ಕುಮಾರ್ ಮತ್ತು  ಮಹಾಪ್ರಬಂಧಕ(ಎಚ್.ಆರ್ ಮತ್ತು ಸಾರ್ವಜನಿಕ ಸಂಪರ್ಕ) ಎಲ್. ಪ್ರವೀಣ್ ಕುಮಾರ್ ಶಿಬಿರದ ಮೇಲುಸ್ತುವಾರಿ ವಹಿಸಿದ್ದರು.

ಗುರುವಾರ, ಅಕ್ಟೋಬರ್ 16, 2025

ಅ.೧೯ರಂದು ಮಾಜಿ ಮುಖ್ಯಮಂತ್ರಿ ಜೆ.ಎಚ್ ಪಟೇಲರ ೯೬ನೇ ದಿನಾಚರಣೆ

ವ್ಯವಸ್ಥೆಯ ಸುಧಾರಣೆಯಲ್ಲಿ ನಮ್ಮ ಪಾತ್ರ' ವಿಚಾರ ಸಂಕೀರ್ಣ

ಭದ್ರಾವತಿಯಲ್ಲಿ ಅ.೧೯ರಂದು ಮಾಜಿ ಮುಖ್ಯಮಂತ್ರಿ ಜೆ.ಎಚ್ ಪಟೇಲರ ೯೬ನೇ ದಿನಾಚರಣೆ ಆಯೋಜಿಸಿರುವ ಕುರಿತು ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಎಸ್. ಗೌಡ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. 
    ಭದ್ರಾವತಿ:  ಧೀಮಂತ ನಾಯಕ, ಸಮಾಜವಾದಿ ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಎಚ್.ಪಟೇಲರ ೯೬ನೇ ಜನ್ಮದಿನಾಚರಣೆ ಅ.೧೯ರ ಭಾನುವಾರ ಬೆಳಗ್ಗೆ ೧೧ ಗಂಟೆಗೆ ಹಳೇನಗರದ ಶ್ರೀ ವೀರಭದ್ರೇಶ್ವರ ಸಮುದಾಯ ಭನವದಲ್ಲಿ ಜೆ.ಎಚ್ ಪಟೇಲ್ ಅಭಿಮಾನಿ ಬಳಗದ ವತಿಯಿಂದ ಆಯೋಜಿಸಲಾಗಿದೆ ಎಂದು ಎಂದು ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಎಸ್.ಗೌಡ ತಿಳಿಸಿದರು. 
    ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜೆ.ಎಚ್ ಪಟೇಲರು ಕನ್ನಡ ನಾಡಿನ ಜನರು ಎಂದಿಗೂ ಮರೆಯಲಾಗದ ಜನಪರ ನಾಯಕ, ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಯನ್ನು ಎತ್ತಿಹಿಡಿದು ಉತ್ತಮ ಆಡಳಿತ ನೀಡಿದ ರಾಜಕೀಯ ಮುತ್ಸದ್ದಿ. ಎಲ್ಲಾ ಧರ್ಮದ, ಜಾತಿ ಜನಾಂಗದ, ಬಡವರ, ದೀನದಲಿತರ ಆಶಾ ಕಿರಣವಾಗಿ ಇತಿಹಾಸದ ಪುಟಗಳಲ್ಲಿ ಅಚ್ಚಳಿಯದೆ ಉಳಿದು ಕೊಂಡಿದ್ದಾರೆ. ಇವರ ಆದರ್ಶತನಗಳು, ಚಿಂತನೆಗಳು, ಆಡಳಿತ ವ್ಯವಸ್ಥೆ, ಜನಪರ ಕಾಳಜಿ ಇಂದಿನ ರಾಜಕೀಯ ವ್ಯಕ್ತಿಗಳಿಗೆ ಮಾರ್ಗದರ್ಶಕವಾಗಿವೆ ಎಂದರು. 
    ಜೆ.ಎಚ್ ಪಟೇಲರ ಜನ್ಮದಿನಾಚರಣೆ ಅರ್ಥಪೂರ್ಣವಾಗಿ ಆಚರಿಸಬೇಕೆಂಬ ಉದ್ದೇಶದೊಂದಿಗೆ ಅಂದು `ವ್ಯವಸ್ಥೆಯ ಸುಧಾರಣೆಯಲ್ಲಿ ನಮ್ಮ ಪಾತ್ರ' ಮತ್ತು ಮೈಕ್ರೋ ಫೈನಾನ್ಸ್‌ಗಳಿಂದ ಎದುರಾಗುತ್ತಿರುವ ಸಮಸ್ಯೆಗಳನ್ನು ನಿಯಂತ್ರಿಸುವ ಕುರಿತ ವಿಚಾರ ಸಂಕೀರ್ಣ ಏರ್ಪಡಿಸಲಾಗಿದೆ ಎಂದರು.
    ಜ.ಎಚ್ ಪಟೇಲರ ಪುತ್ರ, ಮಾಜಿ ಶಾಸಕ ಮಹಿಮಾ ಜೆ. ಪಟೇಲ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕಡೂರಿನ ಮಾಜಿ ಶಾಸಕ ವೈ.ಎಸ್.ವಿ ದತ್ತ ಪಟೇಲರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಿದ್ದಾರೆ. ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಹಾಗೂ ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್‌ಬಾನು  ಸೇರಿದಂತೆ ಇನ್ನಿತರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
    ಪತ್ರಿಕಾ ಗೋಷ್ಠಿಯಲ್ಲಿ ಕರುನಾಡ ಹಿತ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ವೈ. ಶಶಿಕುಮಾರ್, ಮುಖಂಡರುಗಳಾದ ಯೋಗೇಶ್‌ನಾಯ್ಕ್, ಸೈಯ್ಯದ್ ಜಾಫರ್, ವಿಜಯಕುಮಾರ್, ಶಿವಕುಮಾರ್, ಟಿ.ಜಿ ಬಸವರಾಜಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.